ಕೊಯಮತ್ತೂರಿನಲ್ಲಿ ಡಿಕೆ ಶಿವಕುಮಾರ್ ಪ್ರತಿಕೃತಿಗೆ ಚಪ್ಪಲಿ ಹಾರ

ಕೊಯಮತ್ತೂರು: ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಮೂವರು ತಮಿಳರನ್ನು ಹತ್ಯೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

ಆಗಸ್ಟ್ 15 ನಡೆದಿರುವುದಾಗಿ ಹೇಳಲಾದ ಈ ಘಟನೆಯ ಹಿನ್ನೆಲೆಯಲ್ಲಿ ಕೊಯಮತ್ತೂರು ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ವಿಲಾಂಕುರಿಚಿ ಪ್ರದೇಶದಲ್ಲಿ ಕೊಯಮತ್ತೂರು ನಗರ ಸಂಚಾರ ಪೊಲೀಸರ ಎಚ್ಚರಿಕೆ ಫಲಕಕ್ಕೆ ಡಿಕೆ ಶಿವಕುಮಾರ್ ಅವರ ಪ್ರತಿಕೃತಿಯನ್ನು ಕಟ್ಟಿ, ಅದಕ್ಕೆ ಚಪ್ಪಲಿಗಳ ಹಾರ ಹಾಕಲಾಗಿತ್ತು.

Karnataka Chief Minister s effigy garlanded with footwear in Coimbatore over killing of three Tamils

ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮೂವರು ತಮಿಳರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ನಾಮ್ ತಮಿಳರ್ ಕಚ್ಚಿ (NTK) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕೊಯಮತ್ತೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿಗೆ ಚಪ್ಪಲಿಗಳ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಕೃತಿಗೆ ಅಂಟಿಸಲಾಗಿದ್ದ ಪೋಸ್ಟರ್‌ನಲ್ಲಿ "ಜಿಂಕೆಗೆ ಇರುವ ಮೌಲ್ಯ ಮೂವರು ತಮಿಳರ ಜೀವಗಳಿಗೆ ಇಲ್ಲವೇ?" ಎಂದು ಪ್ರಶ್ನಿಸಲಾಗಿತ್ತು. ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆಗಸ್ಟ್‌ 15ರಂದು ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ತಮಿಳರು ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ, ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿರುವ ಫೋಟೋಗಳು ಹಾಗೂ ವಿಡಿಯೋಗಳು ವಾಟ್ಸ್‌ಆ್ಯಪ್‌ನಲ್ಲಿ ವ್ಯಾಪಕವಾಗಿ ಹರಿದಾಡಿವೆ. ಘಟನೆ ಕುರಿತು ಕೊಯಮತ್ತೂರು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಮೂವರು ತಮಿಳರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಪ್ರತಿಭಟನಾಕಾರರು, ಘಟನೆಗೆ ಕರ್ನಾಟಕ ಸರ್ಕಾರ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆಯಿಂದ ಕೊಯಮತ್ತೂರಿನಲ್ಲಿ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಚರ್ಚೆ ತೀವ್ರಗೊಂಡಿದ್ದು, ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+