ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ನೇತೃತ್ವದ 'ನೀತಿ' ಸಭೆಯಲ್ಲಿ ಗಮನಸೆಳೆದ ಕುಮಾರಸ್ವಾಮಿ ಭಾಷಣ

|
Google Oneindia Kannada News

Recommended Video

ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಗಮನ ಸೆಳೆದ ಎಚ್ ಡಿ ಕೆ ಭಾಷಣ

ನವದೆಹಲಿ, ಜೂ 17: ರಾಜ್ಯದಲ್ಲಿ ಪ್ರತಿವರ್ಷ ವಿಪತ್ತು ಮರುಕಳಿಸುತ್ತಿದ್ದು, ಇದು ರಾಜ್ಯಕ್ಕೆ ದೊಡ್ಡ ಹೊರೆಯಾಗಿದೆ. ಐದು ವರ್ಷದ ಅವಧಿಗೆ ಕೇಂದ್ರದಿಂದ ವಿಪತ್ತು ಪರಿಹಾರದ ಹಣ (ಎಸ್​ಡಿಆರ್​ಎಫ್) ಕೇವಲ 1375 ಕೋಟಿ ನೀಡಲಾಗುತ್ತಿದೆ. ಇದು ಉಳಿದ ರಾಜ್ಯಗಳಿಗೆ ಹೋಲಿಸಿಕೊಂಡರೆ ತೀರ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ (ಜೂ 17) ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ನಗರ ಅಭಿವೃದ್ಧಿ ತಂತ್ರವನ್ನು ನೀತಿ ಆಯೋಗದಲ್ಲಿ ಅಳವಡಿಸಿಕೊಳ್ಳಬೇಕು. ನೀತಿ ಆಯೋಗ ಭಾರತ ಸರ್ಕಾರದಲ್ಲಿ ಒಕ್ಕೂಟಗಳ ಪಾಲ್ಗೊಳ್ಳುವಿಕೆ, ಮಧ್ಯಮ ಅವಧಿಯ ಯೋಜನೆಯ ಗುರಿ ಮತ್ತು ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡುತ್ತದೆ ಎಂದು ನಂಬಿದ್ದೇನೆ ಎಂದು ಎಚ್ಢಿಕೆ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು 12 ವರ್ಷವಷ್ಟೇ; ಆಮೇಲೆ ದೇಶದಲ್ಲಿ ನೀರೇ ಸಿಗೊಲ್ಲ! ಇನ್ನು 12 ವರ್ಷವಷ್ಟೇ; ಆಮೇಲೆ ದೇಶದಲ್ಲಿ ನೀರೇ ಸಿಗೊಲ್ಲ!

ರಾಜ್ಯದ ಕೆಲವು ಆದ್ಯತೆಗಳ ಕುರಿತು ವಿಷಯ ಮಂಡನೆ ಮಾಡಿದ ಕುಮಾರಸ್ವಾಮಿ, ಸಾಲಮನ್ನಾಕ್ಕೆ ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿಕೊಂಡರು. ಸಭೆಯಲ್ಲಿ ಮಾತನಾಡಿದ ಅವರು ಸಾಲಮನ್ನಾ ಕುರಿತು ಪ್ರಸ್ತಾಪಿಸಿದ್ದಾರೆ. ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೃಷಿ ಬಿಕ್ಕಟ್ಟು ಕೂಡ ಒಂದಾಗಿದ್ದು, ರೈತರ ಸಾಲ ಮನ್ನಾದ ಕುರಿತು ರಾಜ್ಯ ಎದುರು ನೋಡುತ್ತಿರುವುದಾಗಿ ತಿಳಿಸಿದರು.

ರಾಜಕೀಯವಾಗಿ ಬೇರೆ ಬೇರೆ ಸಿದ್ಧಾಂತಗಳನ್ನು ಪ್ರತಿನಿಧಿಸುತ್ತಿದ್ದರೂ ದೇಶದ ಅಭಿವೃದ್ಧಿಯ ವಿಷಯಕ್ಕೆ ಕೈಜೋಡಿಸಬೇಕಿದೆ. ರೈತರ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಬರ, ಬೆಳೆಹಾನಿಯಂತಹ ಅನೇಕ ಸಮಸ್ಯೆಯಿಂದಾಗಿ ಕರ್ನಾಟಕದ 85 ಲಕ್ಷ ರೈತರು ಬ್ಯಾಂಕ್​ಗಳಲ್ಲಿ ಸಾಲ ಹೊಂದಿದ್ದಾರೆ.

ಸಾಲ ಮನ್ನಾ ಮಾಡಲು ಸಂಪೂರ್ಣ ಬದ್ಧ: ಕುಮಾರಸ್ವಾಮಿ ಪುನರುಚ್ಚಾರಸಾಲ ಮನ್ನಾ ಮಾಡಲು ಸಂಪೂರ್ಣ ಬದ್ಧ: ಕುಮಾರಸ್ವಾಮಿ ಪುನರುಚ್ಚಾರ

ಈ ಸಾಲವನ್ನು ಮನ್ನಾ ಮಾಡಲು ರಾಜ್ಯ ಸರ್ಕಾರ ಸಿದ್ಧವಿದ್ದು ಇದಕ್ಕೆ ಶೇ 50ರಷ್ಟು ಬೆಂಬಲವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಕರ್ನಾಟಕ ಕೃಷಿ ಮಾರುಕಟ್ಟೆ ನಿಯಮದಲ್ಲಿ 2013ರಿಂದ ಹಲವಾರು ರೂಪಾಂತರವನ್ನು ಪಡೆದಿದೆ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಎಚ್ಡಿಕೆ ಭಾಷಣದ ಹೈಲೆಟ್ಸ್, ಮುಂದೆ ಓದಿ..

ಕೃಷಿ ಮಾರುಕಟ್ಟೆಯ ವಿಚಾರದಲ್ಲಿ ಅಧ್ಯಯನ ನಡೆಸಿದೆ

ಕೃಷಿ ಮಾರುಕಟ್ಟೆಯ ವಿಚಾರದಲ್ಲಿ ಅಧ್ಯಯನ ನಡೆಸಿದೆ

ಭಾರತ ಸರ್ಕಾರ ಹಾಗೂ ಇ-ನಾಮ್ ಕೂಡ ಕೃಷಿ ಮಾರುಕಟ್ಟೆಯ ವಿಚಾರದಲ್ಲಿ ಅಧ್ಯಯನ ನಡೆಸಿದೆ. ಏಕೀಕೃತ ಮಾರುಕಟ್ಟೆ ವೇದಿಕೆ (ಯುಪಿಎಂ) ರೈತರ ಉತ್ಪನ್ನಗಳಿಗೆ ಸ್ಪರ್ಧಾತ್ಮಕ ಬೆಲೆಯನ್ನು ಆವಿಷ್ಕಾರ ವಿಧಾನದ ಮೂಲಕ ನಿರ್ಧರಿಸುತ್ತಿದೆ.
ಕರ್ನಾಟಕ ಮಣ್ಣಿನ ಪರೀಕ್ಷೆಯಲ್ಲಿ ಜಿಐಎಸ್-ಜಿಪಿಎಸ್ ಹಾಗೂ 'ಮಣ್ಣು ಮಾದರಿ ಸಂಗ್ರಹ'ದಂತಹ ಆ್ಯಂಡ್ರಾಯ್ಡ್ ಆಪ್ ನ್ನು ಅಳವಡಿಸಿಕೊಂಡಿದೆ - ಕುಮಾರಸ್ವಾಮಿ.

ನವದೆಹಲಿಯ ಮಣ್ಣಿನ ಸಂರಕ್ಷಣಾ ಕಾರ್ಡ್ ಪೋರ್ಟಲ್ ಜೊತೆ ಸಂಯೋಜನೆ

ನವದೆಹಲಿಯ ಮಣ್ಣಿನ ಸಂರಕ್ಷಣಾ ಕಾರ್ಡ್ ಪೋರ್ಟಲ್ ಜೊತೆ ಸಂಯೋಜನೆ

ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿ ದತ್ತಾಂಶವನ್ನು ಎನ್ಐಸಿ ನವದೆಹಲಿಯ ಮಣ್ಣಿನ ಸಂರಕ್ಷಣಾ ಕಾರ್ಡ್ ಪೋರ್ಟಲ್ ಜೊತೆ ಸಂಯೋಜಿಸಲಾಗಿದೆ. ಈ ಯೋಜನೆಯನ್ನು ಅಧಿಕಮಟ್ಟದ ರೈತರಿಗೆ ಉಪಯೋಗವಾಗುವಂತೆ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ದೇಶದಲ್ಲಿ ಹವಾಗುಣ ಚೇತರಿಸಿಕೊಳ್ಳುವ ಕೃಷಿಯ ಕ್ರಾಂತಿಗೆ ಅನುಗುಣವಾಗಿ ಪರಿಣಿತರ ತಂಡ ಸಮಗ್ರ ಚೌಕಟ್ಟು, ತಂತ್ರಗಳು ಮತ್ತು ಅಭ್ಯಾಸಗಳನ್ನು ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಕುಮಾರಸ್ವಾಮಿ ಹೇಳಿದರು.

ನೀರು ಸಂರಕ್ಷಣೆಗಾಗಿ ಕೆರೆ ಸಂಜೀವಿನಿಯಂತಹ ಅನೇಕ ವಿಶೇಷ ಕಾರ್ಯಕ್ರಮ

ನೀರು ಸಂರಕ್ಷಣೆಗಾಗಿ ಕೆರೆ ಸಂಜೀವಿನಿಯಂತಹ ಅನೇಕ ವಿಶೇಷ ಕಾರ್ಯಕ್ರಮ

ಕೃಷಿ ಚಟುವಟಿಕೆಗೆ ನೀರು ಅಗತ್ಯವಾಗಿದ್ದು, ನೀರು ಸಂರಕ್ಷಣೆಗಾಗಿ ಕೆರೆ ಸಂಜೀವಿನಿಯಂತಹ ಅನೇಕ ವಿಶೇಷ ಕಾರ್ಯಕ್ರಮಗಳನ್ನು ಅಳವಡಿಸಿದ್ದೇವೆ. ನೀರಿನ ಸಂರಕ್ಷಣೆಗಾಗಿ ನಾವು ಈ ದಶಕವನ್ನು ನೀರಿನ ದಶಕವನ್ನಾಗಿಸುವ ಪ್ರಯತ್ನ ಮಾಡಬೇಕು. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಸ್ವಾಸ್ಥ್ಯ ಸುರಕ್ಷಾ ಮಿಷನ್ ಅನ್ನು ನಾವು ಸ್ವಾಗತಿಸುತ್ತೇವೆ. ಇದೇ ರೀತಿಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಸೇರಿದಂತೆ ಹಲವು ವಿಭಾಗದ ಜನರಿಗೆ ಕಳೆದ 15 ವರ್ಷಗಳಿಂದ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ - ಕುಮಾರಸ್ವಾಮಿ.

145 ಲಕ್ಷ ಕುಟುಂಬಗಳಿಗೆ ಆರೋಗ್ಯ ಸೇವೆ

145 ಲಕ್ಷ ಕುಟುಂಬಗಳಿಗೆ ಆರೋಗ್ಯ ಸೇವೆ

ಇದು 30 ಲಕ್ಷ ಎಪಿಲ್ ಕುಟುಂಬ ಸೇರಿದಂತೆ 145 ಲಕ್ಷ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದು, ಇದು ಕೇಂದ್ರದ ಯೋಜನೆಗಿಂತ ದೊಡ್ಡದಾಗಿದೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಮತದಿಂದ ಈ ಎರಡೂ ಯೋಜನೆಗಳನ್ನು ಕಾರ್ಯಗತಗೊಳಿಸುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದರು.

ಕೇಂದ್ರ ಸರ್ಕಾರ ವರ್ಷಕ್ಕೆ 100 ಕೋಟಿ

ಕೇಂದ್ರ ಸರ್ಕಾರ ವರ್ಷಕ್ಕೆ 100 ಕೋಟಿ

ಹಿಂದುಳಿದ ಯಾದಗಿರಿ, ರಾಯಚೂರು ಜಿಲ್ಲೆಗಳ ಅಭಿವೃದ್ಧಿ ಹಿಂದುಳಿದ ಯಾದಗಿರಿ, ರಾಯಚೂರು ಜಿಲ್ಲೆಗಳ ಅಭಿವೃದ್ಧಿಗೆ ನಾವು ಕ್ರಮ ಕೈಗೊಳ್ಳಬೇಕಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ವರ್ಷಕ್ಕೆ 100 ಕೋಟಿ ರೂ.ನಂತೆ ಐದು ವರ್ಷ ಹಣ ನೀಡಬೇಕು ಎಂದರು.ಇನ್ನು ಯುವಜನತೆಗೆ ಉದ್ಯೋಗ ಕಲ್ಪಿಸಲು ಕೌಶಲ್ಯ ರೂಪಿಸಿದರೆ ಸಾಲದು ಅದಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿ ಕೂಡ ಮಾಡಬೇಕು ಎಂದು ಕುಮಾರಸ್ವಾಮಿ ಸಭೆಯಲ್ಲಿ ಸಲಹೆ ನೀಡಿದರು.

English summary
Karnataka CM HD Kumaraswamy presentation during Niti Ayog CMs meet. This meeting conducted in New Delhi and PM Narendra Modi is heading this meeting. HDK explained various state issues and concerns during his presentation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X