ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದಕ್ಕೆ ಜಯಲಲಿತಾ ಕಾರಣ:ಸಿದ್ದು

By Mahesh
|
Google Oneindia Kannada News

ಹೊಸೂರು, ಏ.20: ಕರ್ನಾಟಕ ಹಾಗೂ ತಮಿಳುನಾಡು ಗಡಿ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರಕ್ಕೆ ತೆರಳಿದ್ದ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನದಿ ಜಲ ವಿವಾದಕ್ಕೆ ತಮಿಳುನಾಡಿನ ಸಿಎಂ ಜಯಲಲಿತಾ ನೇರ ಕಾರಣ ಎಂದಿದ್ದಾರೆ. ಸುಪ್ರೀಂಕೋರ್ಟ್ ಸೂಚಿಸಿರುವ ಮಾಗದರ್ಶನದಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ತಮಿಳುನಾಡಿನ ಕೃಷ್ಣಗಿರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಡಾ.ಚಲ್ಲಕುಮಾರ್ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಕರ್ನಾಟಕ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿಲ್ಲ ಎಂಬ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಪ ನಿರಾಧಾರ ಎಂದರು.

ಕಾವೇರಿ ಜಲ ವಿವಾದ ಉಲ್ಬಣ ಗೊಳ್ಳಲು ಜಯಲಲಿತಾ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೂಲ ಕಾರಣ. ಈ ವಿವಾದದಲ್ಲಿ ಅವರ ಪಾತ್ರವೇನು ಎಂಬುದು ಅವರಿಬ್ಬರಿಗೂ ತಿಳಿದಿದೆ. ತಮ್ಮ ತಪ್ಪುಗಳನ್ನು ಮರೆಮಾಚಲು ನಮ್ಮ ಸರ್ಕಾರದ ವಿರುದ್ಧ ಜಯಲಲಿತಾ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಕರ್ನಾಟಕದ ಸರಕಾರ ಎಂದಿಗೂ ನಡೆದುಕೊಂಡಿಲ್ಲ. ನೀರಿನ ಸಂಗ್ರಹ ಹಾಗೂ ಉಪಯುಕ್ತತೆಯನ್ನು ಆಧರಿಸಿ ಕಾಲ ಕಾಲಕ್ಕೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Siddaramaiah blames Jayalalithaa Over Cauvery Row

ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಹಾಗೂ ಅದರ ಅಂಗಪಕ್ಷಗಳಿಗೆ ಯಾವುದೇ ಕಾರಣಕ್ಕೂ ಮತ ನೀಡಬೇಡಿ. ಸಮಾಜದಲ್ಲಿನ ಎಲ್ಲ ಜಾತಿ, ಧರ್ಮಗಳ ಜನರ ಕಲ್ಯಾಣಕ್ಕೆ ಶ್ರಮಿಸುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು.

ಭಾಗ್ಯಗಳನ್ನು ಕರುಣಿಸಿದ್ದು ಕಾಂಗ್ರೆಸ್: ಕರ್ನಾಟಕದಲ್ಲಿ ಕಳೆದ ಐದು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿ ಭ್ರಷ್ಟಾಚಾರ, ಹಗರಣಗಳ ಮೂಲಕ ಸದ್ದು ಮಾಡಿತ್ತು. ಆದರೆ, ನಮ್ಮ ಕಾಂಗ್ರೆಸ್ ಸರಕಾರ ಕಳೆದ 11 ತಿಂಗಳಲ್ಲಿ ಬಡವರ ಹಸಿವು ನೀಗಿಸಲು ಅನ್ನಭಾಗ್ಯ, ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸಲು ಕ್ಷೀರಭಾಗ್ಯ ಯೋಜನೆ ಜಾರಿಮಾಡಲಾಗಿದೆ. ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರ ಸಾಲ ಮನ್ನಾ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ಕೇಂದ್ರದ ಯುಪಿಎ ಸರಕಾರ ಕಳೆದ 10 ವರ್ಷಗಳಲ್ಲಿ ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಆಹಾರ ಭದ್ರತೆ, ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ಆದುದರಿಂದ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಪ್ರಗತಿಪರವಾದ ಸರಕಾರ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳಿ ಎಂದು ಅವರು ಕರೆ ನೀಡಿದರು.

ಕೃಷ್ಣಗಿರಿ, ಡಂಕಣಿಕೋಟೆ, ಸೂಲಗಿರಿ ಸೇರಿದಂತೆ ವಿವಿಧ ಭಾಗಗಳಲ್ಲಿ ರೋಡ್ ಶೋ ಮೂಲಕ ಮತ ಯಾಚನೆ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಡಾ.ಚಲ್ಲಕುಮಾರ್, ಆನೇಕಲ್ ಶಾಸಕ ಶಿವಣ್ಣ, ಮಾಜಿ ಮೇಯರ್ ಎಂ.ರಾಮಚಂದ್ರಪ್ಪ, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

English summary
Chief Minister Siddaramaiah has rubbished Tamil Nadu Chief Minister J Jayalalithaa’s allegations against the Karnataka government in connection with the Cauvery water issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X