CM Siddaramaiah: ಭಾರತದ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಸಿದ್ದರಾಮಯ್ಯ, ಎಷ್ಟಿದೆ ಆಸ್ತಿ?
ಸಾಮಾನ್ಯವಾಗಿ ದೇಶದಲ್ಲಿರುವ ಮುಖ್ಯಮಂತ್ರಿಗಳ ಆಸ್ತಿ ಎಷ್ಟಿರಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇರುತ್ತದೆ. ಆದರೆ, ಬಹುತೇಕ ಮುಖ್ಯಮಂತ್ರಿಗಳು ನಾನು ಬಡವ ಎಂದು ಭಾಷಣ ಮಾಡುತ್ತಿರುತ್ತಾರೆ. ಇದೀಗ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಕುತೂಹಲಕಾರಿ ವರದಿಯೊಂದನ್ನು ಪ್ರಕಟಿಸಿದೆ. ಇದರಲ್ಲಿ ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಹೆಸರನ್ನು ಸಹ ಬಹಿರಂಗಪಡಿಸಿದೆ.
ಈ ಪಟ್ಟಿಯಲ್ಲಿ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೂಡ ಬಂದಿದೆ. ಇನ್ನು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಇವರ ಬಳಿ ಬರೋಬ್ಬರಿ 931 ಕೋಟಿ ರೂಪಾಯಿ ಆಸ್ತಿ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚಿನ ಸಾಲವನ್ನೂ ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಭಾರತದ ಎರಡನೇ ಶ್ರೀಮಂತ ಮುಖ್ಯಮಂತ್ರಿ ಸ್ಥಾನದಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಇದ್ದಾರೆ. ಇವರ ಬಳಿಯೂ ಬರೋಬ್ಬರಿ 332 ಕೋಟಿ ರೂಪಾಯಿ ಆಸ್ತಿ ಇದೆ ಎಂದು ವರದಿಯಾಗಿದೆ. ಅಲ್ಲದೆ ಖಂಡು ಅವರು 180 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ಹೊಂದಿದ್ದಾರೆ.
ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಸಿದ್ದರಾಮಯ್ಯ ಅಬರ ಬಳಿ 51 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು 23 ಕೋಟಿ ರೂಪಾಯಿ ಸಾಲವನ್ನೂ ಹೊಂದಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೇಶದ ಅತ್ಯಂತ ಶ್ರೀಮಂತ ಶಾಸಕ ಎಂದು ವರದಿಯಾಗಿತ್ತು.

ಬಡ ಮುಖ್ಯಮಂತ್ರಿಗಳು ಯಾರು?: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದು ಎಡಿಆರ್ ವರದಿಯಲ್ಲಿ ಉಲ್ಲೇಖಿಸಿದೆ. ಮಮತಾ ಬ್ಯಾನರ್ಜಿ ಅವರು ಕೇವಲ 15 ಲಕ್ಷ ರೂಪಾಯಿ ಆಸ್ತಿಯನ್ನು ಹೊಂದಿದ್ದು, ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎನ್ನುವ ಪಟ್ಟ ಪಡೆದಿದ್ದಾರೆ.
ಬಡ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಜಮ್ಮು-ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ ಎರಡನೇ ಸ್ಥಾನ ಪಡೆದಿದ್ದು, ಇವರ ಬಳಿ 55 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಇದೆ ಎಂದು ಹೇಳಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮೂರನೇ ಸ್ಥಾನದಲ್ಲಿದ್ದು, ಇವರ ಬಳಿ 18 ಕೋಟಿ ರೂಪಾಯಿ ಆಸ್ತಿ ಇದೆ.

ಎಡಿಆರ್ ವರದಿಯ ಪ್ರಕಾರ ರಾಜ್ಯ ವಿಧಾನಸಭೆಗಳು ಹಾಗು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಮುಖ್ಯಮಂತ್ರಿಯ ಸರಾಸರಿ ಆಸ್ತಿ ಸುಮಾರು 52.59 ಕೋಟಿ ರೂಪಾಯಿಗಳು ಎಂದು ಅಂದಾಜಿಸಿದೆ. ಸುಮಾರು ರೂ 1,85,854 ಆಗಿದ್ದರೆ, ಒಬ್ಬ ಮುಖ್ಯಮಂತ್ರಿಯ ಸರಾಸರಿ ಸ್ವ-ಆದಾಯ ಸುಮಾರು 13,64,310 ಆದಾಯ ಎಂದು ಎಡಿಆರ್ ವರದಿ ಹೇಳಿದ್ದು, ಇದು ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯಕ್ಕಿಂತ ಹೆಚ್ಚು (ಎನ್‌ಎನ್‌ಐ) ಹಾಗೂ ಇದು ಭಾರತದ ಸರಾಸರಿ ತಲಾದಾಯಕ್ಕಿಂತ ಶೇ 7.3ರಷ್ಟು ಹೆಚ್ಚು ಎಂದೂ ಹೇಳಿದೆ.












Click it and Unblock the Notifications