ಗ್ಯಾರಂಟಿ ಯೋಜನೆಗಳಿಗೆ ಶೀಘ್ರದಲ್ಲೇ ಎಳ್ಳು-ನೀರು? ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳ ಮೂಲಕವೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ದೇಶಾದ್ಯಂತ ಹೊಸ ಸಂಚಲನ ಸೃಷ್ಟಿ ಮಾಡಿತ್ತು. ಆದರೆ ಈಗ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕೈಯಲ್ಲಿ ಕಾಸು ಇಲ್ಲದೆ, ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲು ಸಜ್ಜಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸಿಎಂ ಸಿದ್ಧರಾಮಯ್ಯ ಅವರು ಸ್ಫೋಟಕ ಉತ್ತರ ನೀಡಿದ್ದಾರೆ. ಹಾಗಾದರೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವಾ? ಮುಂದೆ ಓದಿ.

ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವಂತೆ, ಕಾಂಗ್ರೆಸ್ ಗ್ಯಾರಂಟಿ ವಿಚಾರದಲ್ಲಿ ಬಿಜೆಪಿ & ಕಾಂಗ್ರೆಸ್ ಫೈಟ್ ಇನ್ನೂ ನಿಂತಿಲ್ಲ. ಅದರಲ್ಲೂ ಬಿಜೆಪಿ ಒಳ ಜಗಳದ ಕುರಿತು ರಾಜ್ಯ ಕಾಂಗ್ರೆಸ್ ನಾಯಕರು ಅಪಹಾಸ್ಯ ಮಾಡುವ ಸಮಯದಲ್ಲೇ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಕರ್ನಾಟಕದ ನಾಯಕರು ಸ್ಫೋಟಕ ಆರೋಪ ಮಾಡಿದ್ದರು. ಅಲ್ಲದೆ ಸೈಲೆಂಟ್ ಆಗಿ ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲಿದೆ ಎಂದಿದ್ದರು. ಈಗ ಆ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಾದ್ರೆ ಇದೀಗ ಗ್ಯಾರಂಟಿ ಯೋಜನೆಗಳಿಗೆ ಸಿದ್ದರಾಮಯ್ಯ ಸರ್ಕಾರ ಎಳ್ಳು-ನೀರು ಬಿಡುತ್ತಾ? ಮುಂದೆ ಓದಿ.

Karnataka CM Siddaramaiah Said This About Congress Guarantee Schemes

ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ!

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಪ್ರಕಾರ, ಐದು ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಈ ಮೂಲಕ ನಮ್ಮ ಕರ್ನಾಟಕದ ಜನರಿಗೆ ಆರ್ಥಿಕವಾಗಿ ಬಲ ತುಂಬುವ ಪ್ರಯತ್ನ ಸಾಗಿತ್ತು. ಆದರೆ ಗ್ಯಾರಂಟಿ ಯೋಜನೆಗಳನ್ನ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ಕಷ್ಟವಾಗುತ್ತಿದೆ, ಹಾಗೇ ಯೋಜನೆಗೆ ಸಾಕಾಗುವಷ್ಟು ಹಣ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಈ ಯೋಜನೆಗೆ ಗುಡ್‌ಬೈ ಹೇಳಲಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಇದೀಗ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ವೇಳೆ, ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಕುರಿತು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಕನ್ನಡಿಗರ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಹಾಗಾದ್ರೆ ಈ ಕುರಿತು ಸಿದ್ದರಾಮಯ್ಯ ಅವರು ಹೇಳಿದ್ದೇನು? ಉತ್ತರ ಇಲ್ಲಿದೆ ಮುಂದೆ ಓದಿ.

ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಇಲ್ಲ!

ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಆರ್ಥಿಕವಾಗಿ ನೆರವು ನಿಡುವ ಜಾಗತಿಕ ಮೂಲ ಆದಾಯ ಪರಿಕಲ್ಪನೆಯನ್ನ ದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸಿದ್ದೇವೆ. ಇಂತಹ ಸಾಧನೆ ಮಾಡಿದ್ದು ನಮ್ಮ ಕರ್ನಾಟಕ ಎಂಬುದು ಹೆಮ್ಮೆ ವಿಷಯ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆ ಇಲ್ಲದೆ ಮುಂದುವರಿಯುತ್ತವೆ ಎಂದರು. ಈ ಮೂಲಕ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡೆತಡೆ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+