ಬೆಂಗಳೂರು ಶೀಘ್ರವೇ 2 ಜಿಲ್ಲೆಯಾಗುತ್ತಾ? ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರದ ತಯಾರಿ?

ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ರಾಜಧಾನಿ ಬೆಂಗಳೂರು ಅಂದ್ರೆ ಜಗತ್ತಿಗೇ ಗೊತ್ತು. ಅದರಲ್ಲೂ ಐಟಿ ತವರು ಎಂಬ ಹೆಗ್ಗಳಿಕೆ ಕೂಡ ಬೆಂಗಳೂರಿಗೆ ಸಿಕ್ಕಿದೆ. ಹೀಗಿದ್ದಾಗಲೇ ಕೆಲ ದಿನದಿಂದ ಬೆಂಗಳೂರು 2 ಜಿಲ್ಲೆ ಆಗುತ್ತಾ? ಎಂಬ ಪ್ರಶ್ನೆ ಮೂಡಿತ್ತು. ಯಾಕಂದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಈ ಕುರಿತು ಭರ್ಜರಿ ಫೈಟಿಂಗ್ ನಡೆಯುತ್ತಿದೆ. ಹೀಗಿದ್ದಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ, ಬೆಂಗಳೂರು ನಿವಾಸಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. 'ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ.' ಎಂದು ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣದ ಕುರಿತು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಆ ಬಗ್ಗೆ ತಿಳಿಯಲು ಮುಂದೆ ಓದಿ.

Karnataka Congress Government Planning To Create Another District Called Bengaluru South District

ಮತ್ತೊಂದು 'ಬೆಂಗಳೂರು' ನಿರ್ಮಾಣ?

ಡಿಸಿಎಂ ಡಿ.ಕೆ.ಶಿವಕುಮಾರ್ ಇದೀಗ ತಿಳಿಸಿರುವಂತೆ, 'ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ & ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು.' ಎಂದು ಹೇಳಿದ್ದಾರೆ.

ಬೆಂ.ಗ್ರಾಮಾಂತರ & ರಾಮನಗರ ಜಿಲ್ಲೆ!

ಹಾಗೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿರ್ಮಾಣದ ಬಗ್ಗೆ ತಿಳಿಸಿರುವ ಡಿಸಿಎಂ, 'ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು.' ಎಂದು ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜನರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ

ಹಾಗೇ ಮತ್ತಷ್ಟು ಮಾಹಿತಿ ನೀಡಿರುವ ಡಿಸಿಎಂ, 'ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ. ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ.' ಎಂದು ಸರ್ಪ್ರೈಸ್ ನೀಡಿದ್ದಾರೆ.

Karnataka Congress Government Planning To Create Another District Called Bengaluru South District

ಒಟ್ನಲ್ಲಿ ಈ ಮೂಲಕ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಜತೆ ಮತ್ತೊಂದು ಜಿಲ್ಲೆ ಸೇರ್ಪಡೆಯಾಗುವ ನಿರೀಕ್ಷೆ ಮೂಡಿದೆ. ಹಾಗೇ ಈ ಮಾಹಿತಿ ನಂತರ ವಿಪಕ್ಷಗಳು & ಆಡಳಿತ ಪಕ್ಷವಾದ ಕಾಂಗ್ರೆಸ್ ನಡುವೆ ಭೀಕರ ವಾಕ್ ಸಮರ ನಡೆಯುವ ಸಾಧ್ಯತೆ ಕೂಡ ದಟ್ಟವಾಗಿದೆ. ಆದರೆ ಈಗ ಡಿಸಿಎಂ ಹೇಳಿರುವ ಮಾತು ಕೇಳಿದರೆ, ಸರ್ಕಾರ ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣಕ್ಕೆ ಸಕಲ ಸಿದ್ಧತೆ ನಡೆಸಿರುವಂತೆ ಕಾಣುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಕುರಿತು, ಅಧಿಕೃತವಾಗಿ ಮಾಹಿತಿ ಸಿಗುವ ನಿರೀಕ್ಷೆ ಕೂಡ ಮೂಡಿದೆ. ಇದು ಮುಂದೆ ಯಾವೆಲ್ಲಾ ರೀತಿ ಬದಲಾವಣೆ ತರಲಿದೆ? ಅನ್ನೋದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+