ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ
ಛತ್ತೀಸ್‌ಗಢ: ದೇಶದ ಬುಡಕಟ್ಟು ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಮತ್ತು ಪ್ರೋತ್ಸಾಹಿಸುವ ಉದ್ದೇಶದಿಂದ ಛತ್ತೀಸ್‌ಗಢದಲ್ಲಿ ಆಯೋಜಿಸಲಾಗಿದ್ದ ಚೊಚ್ಚಲ 'ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026' (Khelo India Tribal Games) ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಈ ಐತಿಹಾಸಿಕ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಮ್ಮ ಕರ್ನಾಟಕ ರಾಜ್ಯವು ಅತಿ ಹೆಚ್ಚು ಚಿನ್ನದ ಪದಕಗಳನ್ನು ಬೇಟೆಯಾಡುವ ಮೂಲಕ 'ಸಮಗ್ರ ಚಾಂಪಿಯನ್' ಪಟ್ಟವನ್ನು ಮುಡಿಗೇರಿಸಿಕೊಂಡು ಕ್ರೀಡಾ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಕೊನೆಯ ದಿನದವರೆಗೂ ತೀವ್ರ ಪೈಪೋಟಿ ನೀಡಿದ ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಛತ್ತೀಸ್‌ಗಢ ಒಂಬತ್ತನೇ ಸ್ಥಾನ ಪಡೆದುಕೊಂಡಿದೆ.
ಕರ್ನಾಟಕಕ್ಕೆ ಒಲಿದ ಚಾಂಪಿಯನ್ ಪಟ್ಟ
ಉದ್ಘಾಟನಾ ಆವೃತ್ತಿಯ ಈ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ಆರಂಭದಿಂದಲೂ ಪಾರುಪತ್ಯ ಮೆರೆದರು. ಒಟ್ಟು 23 ಚಿನ್ನ, 8 ಬೆಳ್ಳಿ ಹಾಗೂ 7 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಕರ್ನಾಟಕ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅದರಲ್ಲೂ ಈಜು ಸ್ಪರ್ಧೆಗಳಲ್ಲಿ ಕನ್ನಡಿಗರ ಪ್ರಾಬಲ್ಯ ಎದ್ದು ಕಾಣುತ್ತಿತ್ತು. ಈಜು ವಿಭಾಗದಲ್ಲೇ 15 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಪದಕಗಳು ರಾಜ್ಯದ ಪಾಲಾಗಿವೆ. ಇದರ ಜೊತೆಗೆ ಅಥ್ಲೆಟಿಕ್ಸ್‌ನಲ್ಲಿ 5 ಮತ್ತು ಕುಸ್ತಿಯಲ್ಲಿ 3 ಚಿನ್ನದ ಪದಕಗಳು ಒಲಿದುಬಂದವು.

21 ಚಿನ್ನ, 15 ಬೆಳ್ಳಿ ಹಾಗೂ 21 ಕಂಚು (ಒಟ್ಟು 57 ಪದಕ) ಪಡೆದ ಒಡಿಶಾ ದ್ವಿತೀಯ ಸ್ಥಾನ ಪಡೆದರೆ, 16 ಚಿನ್ನ, 8 ಬೆಳ್ಳಿ, 11 ಕಂಚಿನೊಂದಿಗೆ ಜಾರ್ಖಂಡ್ ತೃತೀಯ ಸ್ಥಾನ ಗಳಿಸಿತು. ಆತಿಥೇಯ ಛತ್ತೀಸ್‌ಗಢ 3 ಚಿನ್ನ, 10 ಬೆಳ್ಳಿ ಮತ್ತು 6 ಕಂಚಿನ ಪದಕಗಳೊಂದಿಗೆ ಒಂಬತ್ತನೇ ಸ್ಥಾನಕ್ಕೆ ತೃಪ್ತಿಪಟ್ಟಿತು.
ಮಿಂಚಿದ ಕನ್ನಡಿಗರು - ಮಣಿಕಂಠ, ಧೋನೀಶ್ ಸಾಧನೆ
ಕರ್ನಾಟಕದ ಮಣಿಕಂಠ ಎಲ್. ಅವರು ಈ ಕ್ರೀಡಾಕೂಟದ ಅತ್ಯಂತ ಯಶಸ್ವಿ ಕ್ರೀಡಾಪಟುವಾಗಿ ಮಿಂಚಿದರು. ಅವರು ಬರೋಬ್ಬರಿ 8 ಚಿನ್ನ ಮತ್ತು 1 ಬೆಳ್ಳಿ ಪದಕ ಕೊರಳಿಗೇರಿಸಿಕೊಂಡರೆ, ಅವರ ಸಹಪಾಠಿ ಧೋನೀಶ್ ಎನ್. 5 ಚಿನ್ನ ಮತ್ತು 1 ಬೆಳ್ಳಿ ಜಯಿಸಿದರು.
ಮಹಿಳಾ ವಿಭಾಗದಲ್ಲಿ ಕರ್ನಾಟಕದ ಮೇಘಾಂಜಲಿ 4 ಚಿನ್ನ ಹಾಗೂ 2 ಕಂಚಿನ ಪದಕ ಗೆದ್ದು ಗಮನ ಸೆಳೆದರು. ಒಡಿಶಾದ ಈಜುಗಾರ್ತಿ ಅಂಜಲಿ ಮುಂಡಾ ಐದು ಚಿನ್ನದ ಪದಕಗಳನ್ನು ಗೆದ್ದರು. ಆರು ಕ್ರೀಡಾ ವಿಭಾಗಗಳಲ್ಲೂ ಕನಿಷ್ಠ ಒಂದು ಚಿನ್ನದ ಪದಕ ಗೆದ್ದ ಏಕೈಕ ರಾಜ್ಯ ಒಡಿಶಾ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಕ್ರೀಡಾಕೂಟದ ಅಂತಿಮ ದಿನದ ಸ್ಪರ್ಧೆಗಳಲ್ಲಿ ಪುರುಷರ ಫುಟ್‌ಬಾಲ್ ಫೈನಲ್ ಪಂದ್ಯ ತೀವ್ರ ಕುತೂಹಲ ಕೆರಳಿಸಿತ್ತು. ಈ ಪಂದ್ಯದಲ್ಲಿ ಆತಿಥೇಯ ಛತ್ತೀಸ್‌ಗಢ ತಂಡವನ್ನು 1-0 ಅಂತರದಿಂದ ಮಣಿಸಿದ ಪಶ್ಚಿಮ ಬಂಗಾಳ ಚಿನ್ನದ ಪದಕಕ್ಕೆ ಮುತ್ತಿಕ್ಕಿತು. ಬಿಲ್ಲುಗಾರಿಕೆ (Archery) ಸ್ಪರ್ಧೆಯಲ್ಲಿ ಜಾರ್ಖಂಡ್‌ನ ಮಾಜಿ ವಿಶ್ವ ಜೂನಿಯರ್ ಚಾಂಪಿಯನ್ ಕೋಮಲಿಕಾ ಬಾರಿ ಮಹಿಳೆಯರ ರಿಕರ್ವ್ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದರು. ಪುರುಷರ ರಿಕರ್ವ್ ವಿಭಾಗದಲ್ಲಿ ಒಡಿಶಾದ ಅರ್ಜುನ್ ಖಾರಾ ಚಿನ್ನದ ಪದಕ ತಮ್ಮದಾಗಿಸಿಕೊಂಡರು.
ಬುಡಕಟ್ಟು ಕ್ರೀಡಾಕೂಟದ ಹಿನ್ನೆಲೆ
ಭಾರತ ಸರ್ಕಾರದ ಪ್ರತಿಷ್ಠಿತ 'ಖೇಲೋ ಇಂಡಿಯಾ' ಉಪಕ್ರಮದ ಅಡಿಯಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ದೇಶಾದ್ಯಂತ ಇರುವ ಬುಡಕಟ್ಟು ಸಮುದಾಯದ ಯುವ ಪ್ರತಿಭೆಗಳನ್ನು ಗುರುತಿಸಿ, ಉನ್ನತ ಮಟ್ಟದ ಸ್ಪರ್ಧಾತ್ಮಕ ವೇದಿಕೆ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 3ರವರೆಗೆ ರಾಯ್‌ಪುರ, ಜಗದಾಲ್ಪುರ ಮತ್ತು ಅಂಬಿಕಾಪುರದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಮಾರು 3,800 ಕ್ರೀಡಾಪಟುಗಳು ಭಾಗವಹಿಸಿದ್ದರು. ಒಟ್ಟು 106 ಚಿನ್ನದ ಪದಕಗಳಿಗಾಗಿ ಹಣಾಹಣಿ ನಡೆಯಿತು. ಆರ್ಚರಿ, ಅಥ್ಲೆಟಿಕ್ಸ್, ಫುಟ್‌ಬಾಲ್, ಹಾಕಿ, ಈಜು, ವೇಟ್‌ಲಿಫ್ಟಿಂಗ್ ಮತ್ತು ಕುಸ್ತಿ ಸೇರಿದಂತೆ 7 ಸ್ಪರ್ಧಾತ್ಮಕ ಕ್ರೀಡೆಗಳು ಹಾಗೂ ಮಲ್ಲಕಂಬ ಮತ್ತು ಕಬಡ್ಡಿಯಂತಹ 2 ಪ್ರದರ್ಶನ ಕ್ರೀಡೆಗಳು ಯಶಸ್ವಿಯಾಗಿ ಜರುಗಿದವು. ಈ ಪ್ರತಿಷ್ಠಿತ ವೇದಿಕೆಯಲ್ಲಿ ಕನ್ನಡಿಗರು ಅಗ್ರಸ್ಥಾನ ಪಡೆದಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಖೇಲೋ ಇಂಡಿಯಾದಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಲಕ್ಷದ್ವೀಪದ ಮೀನುಗಾರ ಯುವಕ ಅಬ್ದುಲ್ ಫತ್ತಾ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026: ಕರ್ನಾಟಕ ಚಾಂಪಿಯನ್, ಆತಿಥೇಯ ಛತ್ತೀಸ್ಗಢಕ್ಕೆ 9ನೇ ಸ್ಥಾನ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications