ಡಿಸಿಎಂ ಡಿ.ಕೆ.ಶಿವಕುಮಾರ್ ವಾಜಪೇಯಿ ಅವರ ಬಗ್ಗೆ ಹೇಳಿದ್ದು ಏನು?

ಬೆಂಗಳೂರು: ವಿದ್ಯಾರ್ಥಿಗಳು ಎಂದಿಗೂ ಬೆಳೆದು ಬಂದ & ಬೆಳೆಯುವ ದಾರಿ ಮರೆಯಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು ಹೇಳಿದ್ದಾರೆ. ನಗರದ ಯಲಹಂಕದಲ್ಲಿರುವ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆವರಣದಲ್ಲಿ, ಡಾ. ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ & ಫುಡ್ ಕೋರ್ಟ್ ಉದ್ಘಾಟಿಸಿ ಅವರು ಮಾತನಾಡಿದರು. ಅಲ್ಲದೆ ಈ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆಯು ಕೂಡ ಡಿಸಿಎಂ ಮಾತನಾಡಿದ್ದಾರೆ.

ಹಾಗೇ, 'ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡರೆ ಯಾವುದೇ ಕೆಲಸಗಳು ಕಠಿಣವಲ್ಲ.‌ ಸುಲಭವಾಗಿ ಗುರಿ ಮುಟ್ಟಬಹುದು. ಧನಾತ್ಮಕ ಚಿಂತನೆಗಳ ಬಗ್ಗೆ ಯೋಚಿಸಬೇಕೆ ಹೊರತು, ನಕಾರಾತ್ಮಕ ಚಿಂತನೆಗಳ ಕುರಿತು ಒಂದು ಕ್ಷಣ ಕೂಡ ಯೋಚಿಸಬಾರದು.' ಹಾಗೇ ಮಹಾತ್ಮ ಗಾಂಧಿ ಅವರು ಹೇಳುತ್ತಾರೆ, 'ನೀವು ನಿಮ್ಮನ್ನ ನಿಯಂತ್ರಣ ಮಾಡಿಕೊಳ್ಳಲು ನಿಮ್ಮ ಮೆದುಳನ್ನು ಬಳಸಿ, ಇತರರನ್ನ ನಿಯಂತ್ರಿಸಲು ಹೃದಯವನ್ನು ಬಳಸಿ' ಎಂದು. ಇದೇ ರೀತಿ ಯಾವುದೇ ಕಾರಣಕ್ಕೂ ಇತರ ವಿಚಾರಗಳಿಂದ ಕಲುಷಿತರಾಗಬೇಡಿ ನಿಮ್ಮ ಸ್ವಂತ ಆಲೋಚನೆ ಬೆಳೆಸಿಕೊಳ್ಳಿ. ಈ ದೇಶದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ ಎಂದು ಸಲಹೆ ನೀಡಿದರು.

Karnataka DCM D.K.Shivakumar remembered former Prime Minister Atal Bihari Vajpayee

ದೀಪ ಹಚ್ಚಬೇಕೆ ಹೊರತು, ದೀಪ...

ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದಂ. ತ್ರುಬುದ್ಧಿವಿನಾಶಾಯ ದೀಪಜ್ಯೋತಿ ನಮೋಸ್ತುತೇ ಎನ್ನುವ ಶ್ಲೋಕವನ್ನು ಹೇಳಿ ದೀಪ ಬೆಳಗಿಸುತ್ತೇವೆ. ಇಂದಿನ ವಿದ್ಯಾರ್ಥಿಗಳು ಹುಟ್ಟುಹಬ್ಬ ಆಚರಣೆ ವೇಳೆ, ದೀಪವನ್ನು ಆರಿಸುವ ಮೂಲಕ ಸಂಭ್ರಮಿಸುತ್ತಿದ್ದಾರೆ. ನಾವು ದೀಪ ಬೆಳಗುವವರಾಗಬೇಕೆ ಹೊರತು, ದೀಪ ಆರಿಸುವವರಾಗಬಾರದು ಎಂದರು ಡಿಸಿಎಂ ಡಿ.ಕೆ. ಶಿವಕುಮಾರ್.

ಹುಟ್ಟುಹಬ್ಬದಲ್ಲಿ ಡಿ.ಕೆ.ಶಿವಕುಮಾರ್ ಮಾಡಿದ್ದೇನು?

ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಹಕಾರ ಸಚಿವನಾಗಿ ಕೆಲಸ ಮಾಡುತ್ತಿದ್ದೆ. ಆ ವೇಳೆ ಅಂತರರಾಷ್ಟ್ರೀಯ ಮಟ್ಟದ ಸಹಕಾರಿ ಸಮ್ಮೇಳನ ಆಯೋಜಿಸಲಾಗಿತ್ತು. ನಾನು ಈ ಸಭೆಗೆ ಆಹ್ವಾನಿತನಾಗಿ ಹೋಗಿದ್ದ ನಾನು, ಸಮ್ಮೇಳದ ಪ್ರಮುಖರೊಬ್ಬರಿಗೆ ನನ್ನ ಪರಿಚಯ ಮಾಡಿಕೊಂಡು ಮಾತನಾಡುತ್ತಿದ್ದೆ, ಅವರಿಗೆ ನನ್ನ 39 ನೇ ಹುಟ್ಟುಹಬ್ಬ ಎಂದು ಗೊತ್ತಾಯಿತು. ಕೂಡಲೇ ಹುಟ್ಟುಹಬ್ಬ ಆಚರಿಸಲೇ ಬೇಕು ಎಂದು, ನನಗೆ ಗೊತ್ತಾಗದಂತೆ ಆಯೋಜನೆ ಮಾಡಿದರು.

ಕೇಕ್ ಆರ್ಡರ್ ಮಾಡಿ, ಕ್ಯಾಂಡಲ್ ಇಟ್ಟು, ನನ್ನ ಕರೆದರು ಹಾಗೇ ನಾನು ಕ್ಯಾಂಡಲ್‌ ಅನ್ನ ಆರಿಸಬೇಕು ಎಂದು ಹೋಗುವಷ್ಟರಲ್ಲಿ, ವ್ಯಕ್ತಿಯೊಬ್ಬ 'ಇದು ನಮ್ಮ ಸಂಸ್ಕೃತಿಯಲ್ಲ' ಎಂದು ಜೋರಾಗಿ ಕೂಗಿಕೊಂಡನು. ಅಂದು ನನ್ನ ಅರಿವಿಗೆ ಬಂದಿತು, ನಮ್ಮದು ದೀಪವನ್ನು ಹಚ್ಚುವ ಸಂಸ್ಕೃತಿ, ಆರಿಸುವ ಸಂಸ್ಕೃತಿಯಲ್ಲ ಎಂದು ಅಂತಾ ಹಳೆಯ ಘಟನೆ ಮೆಲುಕು ಹಾಕಿದರು ಡಿಸಿಎಂ ಡಿ.ಕೆ.ಶಿವಕುಮಾರ್.

Karnataka DCM D.K.Shivakumar remembered former Prime Minister Atal Bihari Vajpayee

ಶಿಕ್ಷಣ ಪ್ರೇಮಿಯಾಗಿ ಹೇಳುತ್ತಿದ್ದೇನೆ

ಹಾಗೆ ಮಣಿಪಾಲ್ ಸಮೂಹ ಸಂಸ್ಥೆ ಇಡೀ ರಾಜ್ಯದಲ್ಲಿ ಅತ್ಯಂತ ಪ್ರಮುಖವಾದ ಶಿಕ್ಷಣ ಸಂಸ್ಥೆ. ನಾನು ರಾಜ್ಯದ ಡಿಸಿಎಂ ಆಗಿ ಈ ಮಾತು ಹೇಳುತ್ತಿಲ್ಲ,‌ ಶಿಕ್ಷಣ ಪ್ರೇಮಿಯಾಗಿ ಹೇಳುತ್ತಿದ್ದೇನೆ. ಸಹಕಾರಿ ಕ್ಷೇತ್ರದಿಂದ ಬಂದು ನೊಬಲ್ ಪ್ರಶಸ್ತಿ ಪುರಸ್ಕೃತರಾದ ಮೊಹಮದ್ ಯೂನಸ್ ಅವರು ಒಂದು ಮಾತು ಹೇಳುತ್ತಾರೆ "ನೀವು ಹಸಿದವನಿಗೆ ಒಂದು ದಿನ ಮಾತ್ರ ಮೀನು ನೀಡಬಹುದು, ಆದರೆ ಮೀನು ಹಿಡಿಯುವುದು ಕಲಿಸಿದರೆ ಜೀವನ ಪೂರ್ತಿ ಹಸಿವು ನೀಗಿಸದಂತೆ" ಈ ರೀತಿ ಮಣಿಪಾಲ್‌ ಸಂಸ್ಥೆ ಕೆಲಸ‌ ಮಾಡುತ್ತಿದೆ ಎಂದರು ಡಿಸಿಎಂ.

ರಾಜ್ಯಕಂಡ ಶ್ರೇಷ್ಠ ಶಿಕ್ಷಣ ತಜ್ಞರು

"By Birth I am an Agriculturist By Profession I am a Businessman By Choice I am an Educationist By Passion I am a Politician, ಆದರೆ ಈ ಮಣಿಪಾಲ್ ಸಂಸ್ಥೆಗೆ ನಾನು ಒಬ್ಬ ಶಿಕ್ಷಣಪ್ರೇಮಿಯಾಗಿ ವಿದ್ಯಾರ್ಥಿಗಳನ್ನು ನೋಡಲು ಬಂದಿದ್ದೇನೆ‌. ರಾಮದಾಸ್ ಪೈ ಅವರು ಈ ರಾಜ್ಯಕಂಡ ಶ್ರೇಷ್ಠ ಶಿಕ್ಷಣ ತಜ್ಞರು. ನನಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವಿದೆ, ಇಡೀ ಮಣಿಪಾಲ್ ಸಮೂಹ ಸಂಸ್ಥೆಗಳು ಈ ದೇಶದ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲೇ ಪ್ರಮುಖ ಹಾಗೂ ಆಕರ್ಷಣೀಯ ಸಂಸ್ಥೆ, ಆದ ಕಾರಣ ಅವರಿಗೆ ಅಭಿನಂದಿಸುತ್ತೇನೆ ಎಂದು ಡಿಸಿಎಂ ತಿಳಿಸಿದರು.

ವಿಷಾದ ವ್ಯಕ್ತಪಡಿಸಿದ ಡಿಸಿಎಂ

55 ವರ್ಷಗಳ ಹಳೆಯದಾದ ಮಣಿಪಾಲ್ ಕ್ಯಾಂಪಸ್ ಅತ್ಯಂತ ಸುಂದರವಾದ ವಾತಾವರಣ ಇಲ್ಲಿದೆ. ಇದನ್ನು ನೋಡಲು ಸಂತೋಷವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರು ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದಾರೆ. ಶಿಕ್ಷಣ, ವ್ಯಾಪಾರ, ಹೋಟೆಲ್ ಉದ್ಯಮ, ವೈದ್ಯಕೀಯ ಸೇರಿದಂತೆ ಪ್ರಮುಖ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಈಗಲೂ ಎರಡೂ ಜಿಲ್ಲೆಗಳು ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿದ ಜಿಲ್ಲೆಗಳೇ, ಆದರೆ ಕೆಲವು ವರ್ಷಗಳಿಂದ ರಾಜಕೀಯವಾಗಿ ಸಾಕಷ್ಟು ಸ್ಥಿತ್ಯಂತರಗಳು ನಡೆದು ಏರುಪೇರಾಗಿದೆ ಎಂದು ಡಿಸಿಎಂ ವಿಷಾದ ವ್ಯಕ್ತಪಡಿಸಿದರು.

Karnataka DCM D.K.Shivakumar remembered former Prime Minister Atal Bihari Vajpayee

ವಾಜಪೇಯಿ ಅವರ ಬಗ್ಗೆ ಹೇಳಿದ್ದೇನು?

ಇಡೀ ಪ್ರಪಂಚ ಭಾರತದ ಕಡೆ ತಿರುಗಿ ನೋಡ್ತಿದೆ. ಪ್ರತಿ ಕ್ಷೇತ್ರದಲ್ಲಿ ಭಾರತೀಯರು ಗಣನೀಯ ಸಾಧನೆ‌ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅಷ್ಟೊಂದು ಜ್ಞಾನ ಸಂಪತ್ತು ನಮ್ಮ ದೇಶದ ಜನರಲ್ಲಿದೆ. 20 ವರ್ಷಗಳ ಹಿಂದೆ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಕರ್ನಾಟಕಕ್ಕೆ ಬಂದಾಗ ಅವರಿಗೆ ವಿಧಾನಸೌಧಕ್ಕೆ ಆಹ್ವಾನ ನೀಡಿದ್ದೆವು. ನಾನು ನಗರಾಭಿವೃದ್ಧಿ ಸಚಿವನಾಗಿದ್ದೆ. ಈ ವೇಳೆ ಅವರ ಜೊತೆ ಮಾತನಾಡುತ್ತಿದ್ದಾಗ, "ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟದ ಜ್ಞಾನ ನೀಡುತ್ತಿವೆ, ಏಕೆಂದರೆ ಯಾವುದೇ ದೇಶಕ್ಕೆ ಹೋದರು ಒಂದಲ್ಲ ಒಂದು ಸಂಸ್ಥೆಗಳಲ್ಲಿ ಭಾರತೀಯ ಅಥವಾ ಕನ್ನಡಿಗ ಉನ್ನತ ಸ್ಥಾನವನ್ನು ಅಲಂಕರಿಸಿರುತ್ತಾರೆ" ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು. ಇದು ನನ್ನ ಜೀವನದಲ್ಲಿ ಮರೆಯಲಾರದ ಘಟನೆ ಎಂದರು.

ಐಟಿ ಕ್ಷೇತ್ರದಲ್ಲಿ ದಕ್ಷಿಣ ಭಾರತೀಯರು ಹೆಚ್ಚಿಗೆ ಕೆಲಸ ಮಾಡುತ್ತಿದ್ದಾರೆ. ಅದರಲ್ಲು ಕನ್ನಡಿಗರು ಈ ಕ್ಷೇತ್ರವನ್ನ ಆವರಿಸಿಕೊಂಡು ಬಿಟ್ಟಿದ್ದಾರೆ, ಇದು ನಮ್ಮ ಶಕ್ತಿ. ಐದು ಜನರಲ್ಲಿ ಮೂರು ಜನ ಕನ್ನಡಿಗರೇ ಈ ಕ್ಷೇತ್ರದಲ್ಲೇ ದುಡಿಯುತ್ತಿದ್ದಾರೆ. ಇಡೀ ದೇಶವನ್ನು ಕರ್ನಾಟಕದ ಮೂಲಕ ನೋಡಲಾಗುತ್ತಿದೆ. ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಿರುವ ನೀವೆ ಧನ್ಯರು. ಹೊರ ರಾಜ್ಯಗಳ ಅನೇಕ ವಿದ್ಯಾರ್ಥಿಗಳು ಈ ಮಾತನ್ನು ಗಮನದಲ್ಲಿ ಇಟ್ಟುಕೊಂಡು ಬೆಳೆಯಬೇಕು ಎಂದು ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+