ಪಾಕಿಸ್ತಾನದಲ್ಲಿ ಮಾತ್ರ ಹೀಗಾಗಲು ಸಾಧ್ಯ: ರಾಹುಲ್ ಗಾಂಧಿ

ಹರ್ಯಾಣ, ಮೇ 17: ಹರ್ಯಾಣದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ.

"ಭಾರತದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ತಲೆದೂರಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ಸರ್ಕಾರಕ್ಕೆ ಹೆದರುವಂಥ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿ ಪಾಕಿಸ್ಥಾನದಂತ ಸರ್ವಾಧಿಕಾರಿ ದೇಶಗಳಲ್ಲಿ ಮಾತ್ರ ಇರುತ್ತಿತ್ತು" ಎಂದು ಅವರು ಹೇಳಿಕೆ ನೀಡಿದ್ದರು.

ಹರ್ಯಾಣದಲ್ಲಿ ಇಂದು ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಅವರು ಕರ್ನಾಟಕದ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದರು. ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿದ, ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ನಡೆಯನ್ನು ರಾಹುಲ್ ಗಾಂಧಿ ವಿರೋಧಿಸಿದರು.

ಈ ಕುರಿತು ಟ್ವೀಟ್ ಸಹ ಮಾಡಿದ್ದ ರಾಹುಲ್ ಗಾಂಧಿ, 'ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವವನ್ನು ಪರಿಹಾಸ್ಯ ಮಾಡಿದೆ ಎಂದಿದ್ದಾರೆ. ಇಂದು ಬೆಳಿಗ್ಗೆ ಬಿಜೆಪಿ ತನ್ನ ಪೊಳ್ಳು ಜಯವನ್ನು ಸಂಭ್ರಮಿಸುತ್ತಿದ್ದರೆ ಭಾರತೀಯರು ಅಳುತ್ತಿದ್ದಾರೆ' ಎಂದಿದ್ದರು.

Karnataka Election results: Rahul Gandhi compares India to Pakistan

ಮೇ 15 ರಂದು ಹೊರಬಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 104 ಸ್ಥಾನ ಗೆದ್ದು ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿತ್ತು. ಆದರೆ ಬಹುಮತ ಪಡೆದಿರಲಿಲ್ಲ. ಇತ್ತ 78 ಸ್ಥಾನ ಗೆದ್ದ ಕಾಂಗ್ರೆಸ್, 38 ಸ್ಥಾನ ಗೆದ್ದ ಜೆಡಿಎಸ್ ಗೆ ತನ್ನ ಬೆಂಬಲ ನೀಡಿ ಸರ್ಕಾರ ರಚಿಸಲು ಮನವಿ ಮಾಡಿತ್ತು. ಆದರೆ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದರಿಂದ ಇಂದು ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+