"ಮೇ 13 ರಂದು ಬಿಜೆಪಿ ಪಾಠ ಕಲಿಯಲಿದೆ": ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಭೂಪೇಶ್ ಬಘೇಲ್

ನವದೆಹಲಿ , ಮೇ.11: ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್‌ ಮೇಲುಗೈ ಸಾಧಿಸಲಿದೆ ಎಂದು ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿದ್ದು, ಮೇ 13ರಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಬಿಜೆಪಿ ತಕ್ಕ ಪಾಠ ಕಲಿಯಲಿದೆ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

ಬುಧವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ನಾಲ್ಕು ಎಕ್ಸಿಟ್ ಪೋಲ್‌ಗಳು ಪೂರ್ಣ ಬಹುಮತ ಪಡೆಯಲಿದೆ ಎಂದಿದ್ದು, ಮತ್ತೆ ಕೆಲವು ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಾಣಲಿದೆ ಎಂದು ಭವಿಷ್ಯ ನುಡಿದಿವೆ. ಇದು ಕಾಂಗ್ರೆಸ್ ನಾಯಕರಲ್ಲಿ ಮತ್ತಷ್ಟು ಹುಮ್ಮಸ್ಸು ತುಂಬಿದೆ.

Karnataka elections 2023: BJP Will Learn A Lesson On May 13 says Bhupesh Baghel

"ಇಡೀ ದೇಶದ ಕಣ್ಣು ಕರ್ನಾಟಕ ಚುನಾವಣೆಯತ್ತ ನೆಟ್ಟಿದ್ದು, ಒಂದೆಡೆ ಹಣ ಹಂಚುತ್ತಿದ್ದರೆ ಮತ್ತೊಂದೆಡೆ ಜನರ ಪ್ರೀತಿ ಇದೆ. ಮೇ 13 ರಂದು ಬಿಜೆಪಿ ತಕ್ಕ ಪಾಠ ಕಲಿಯಲಿದೆ ಎಂದು ನಾನು ಭಾವಿಸುತ್ತೇನೆ" ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆಲುವು ಪಕ್ಕ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ಕರ್ನಾಟಕದಲ್ಲಿ ಬಜರಂಗಬಲಿ ಭಗವಂತನ ಆಶೀರ್ವಾದವು ಕಾಂಗ್ರೆಸ್‌ ಜೊತೆಗೆ ಉಳಿಯುತ್ತದೆ. ಏಕೆಂದರೆ ದೇವರು ಅನ್ಯಾಯ, ದಬ್ಬಾಳಿಕೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಶಿಕ್ಷಿಸುತ್ತಾನೆ" ಎಂದು ಭೂಪೇಶ್ ಬಘೇಲ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಡೆಯುತ್ತಿರುವ ಇಡಿ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಭೂಪೇಶ್ ಬಘೇಲ್ , "ಇಡಿ ಯಾವುದೇ ಪೂರ್ವಾಪೇಕ್ಷಿತ ಅಪರಾಧವಿಲ್ಲದೆ ಇಷ್ಟು ವರ್ಷ ತನಿಖೆ ನಡೆಸಲಿಲ್ಲ, ಆದರೆ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಈಗ ಇಂತಹ ಕೆಲಸ ಮಾಡುತ್ತಿದೆ. ತಮ್ಮ ಯಜಮಾನರನ್ನು ಮೆಚ್ಚಿಸಲು ಬಿಜೆಪಿಯ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಜಾರಿ ನಿರ್ದೇಶನಾಲಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸುತ್ತಿಲ್ಲ" ಎಂದು ಆರೋಪಿಸಿದ್ದಾರೆ.

"ಈಗ, 2,000 ಕೋಟಿಯ ಮದ್ಯದ ಹಗರಣದಲ್ಲಿ ಪೂರ್ವಾಪೇಕ್ಷಿತ ಅಪರಾಧ ಏನು ಮತ್ತು ಅವರು ಅದನ್ನು ಹೇಗೆ ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಯದೆ? ಸಂಸ್ಥೆಯ ಅಧಿಕಾರಿಗಳು ಜನರ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದಾರೆ ಮತ್ತು ಇಡೀ ರಾತ್ರಿ ಅವರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ತನಿಖಾ ಸಂಸ್ಥೆಯ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ನೇರವಾಗಿ ನಮ್ಮ ವಿರುದ್ಧ ಹೋರಾಡಲು ಸಾಧ್ಯವಾಗದ ಕಾರಣ ರಾಜ್ಯ ಸರ್ಕಾರದ ಮಾನಹಾನಿ ಮಾಡುವುದೇ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದ ಅವರು, ನವೆಂಬರ್‌ನಲ್ಲಿ ಚುನಾವಣೆ ಇದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಸರಕಾರವನ್ನು ಮಾನಹಾನಿ ಮಾಡುವುದು ಹೇಗೆ ಎಂಬುದರಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+