ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಿಎಸ್ ವೈ: ರಮಣ್ ಸಿಂಗ್

ರಾಜ್ನಂದ್ ಗಾಂವ್, ಏಪ್ರಿಲ್ 21: "ಕರ್ನಾಟಕಕ್ಕೆ ಹೊಸ ನಾಯಕತ್ವದ ಅಗತ್ಯವಿದೆ" ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಹೇಳಿದ್ದಾರೆ.

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿ ಎಸ್ ಯಡಿಯೂರಪ್ಪ ಏ.19 ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗಿದ್ದ ರಮಣ್ ಸಿಂಗ್ ಯಡಿಯೂರಪ್ಪನವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Karnataka Elections: Change is need of the hour says Raman Singh

"ಯಡಿಯೂರಪ್ಪನವರು ನನಗೆ ಹಳೇ ಸ್ನೇಹಿತರು. ಶಿಕಾರಿಪುರದಿಂದ ಸ್ಪರ್ಧಿಸುತ್ತಿರುವ ಅವರಿಗೆ ಬೆಂಬಲ ನೀಡಲು ಮತ್ತು ಅವರ ಪರವಾಗಿ ಪ್ರಚಾರ ಮಾಡಲು ನಾನು ಇಲ್ಲಿಗೆ ಬಂಧಿದ್ದೇನೆ. ಅವರಿಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕ ರಾಜ್ಯ ಹೊಸ ನಾಯಕತ್ವವನ್ನು ಬಯಸುತ್ತಿದೆ. ಬದಲಾವಣೆಯನ್ನು ಬಯಸುತ್ತಿದೆ. ಕಾಂಗ್ರೆಸ್ಸನ್ನು ಕರ್ನಾಟಕದ ಜನ ಸೋಲಿಸಸಲಿದ್ದಾರೆ ಮತ್ತು ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ" ಎಂದು ಅವರು ಹೇಳಿದರು.

ಮೇ.12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮೇ. 15 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+