ಮೋದಿ ‘ಧಾರ್ಮಿಕ’ ಘೋಷಣೆ ಅಚ್ಚರಿ ತಂದಿದೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಬರಲಿದೆ: ಶರದ್ ಪವಾರ್

ಮುಂಬೈ, ಮೇ 08: ಮೇ 10 ರಂದು ಮತದಾನ ನಡೆಯಲಿರುವ ಕರ್ನಾಟಕದಲ್ಲಿ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಪವಾರ್, 'ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ' ಎಂದು ತಿಳಿಸಿದ್ದಾರೆ.

Karnataka Elections: Surprised over Modi giving ‘religious’ slogans: Sharad Pawar

ನಾವು ಸೆಕ್ಯುಲರಿಸಂ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ, ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅದು ಒಳ್ಳೆಯದಲ್ಲ ಎಂದು ಪವಾರ್‌ ಹೇಳಿದ್ದಾರೆ.

'ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಗಾಗಿ ಪ್ರತಿಜ್ಞೆ ಮಾಡುತ್ತೇವೆ' ಎಂದು ಅವರು ಟಿವಿ9 ಮರಾಠಿಗೆ ತಿಳಿಸಿದ್ದಾರೆ.

ರತ್ನಗಿರಿ ಜಿಲ್ಲೆಯ ಬಾರ್ಸು ಗ್ರಾಮದಲ್ಲಿ ನಡೆಯುತ್ತಿರುವ ಆಂದೋಲನದ ಬಗ್ಗೆ ಸ್ಥಳೀಯರ ಒಂದು ವಿಭಾಗವು ಬೃಹತ್ ತೈಲ ಸಂಸ್ಕರಣಾಗಾರ ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಕೇಳಿದಾಗ, ಎನ್‌ಸಿಪಿ ನಾಯಕ, ನಾನು ಅಲ್ಲಿಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದರು.

Karnataka Elections: Surprised over Modi giving ‘religious’ slogans: Sharad Pawar

'ನಾನು ಬಾರ್ಸು ಗ್ರಾಮಸ್ಥರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದೇನೆ. ತಜ್ಞರೊಂದಿಗೆ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಮುಂದಕ್ಕೆ ಕೊಂಡೊಯ್ಯಬೇಕು ಎಂದು ನಾನು ಭಾವಿಸುತ್ತೇನೆ' ಎಂಬುದಾಗಿ ಅವರು ಹೇಳಿದರು.

ಭಾನುವಾರ ಪಂಢರಪುರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿ ಅಧ್ಯಕ್ಷರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+