CBI Director Praveen Sood: ಕರ್ನಾಟಕ ಮಾಜಿ ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಇಂದು (ಗುರುವಾರ, ಮೇ 28) ಅಧಿಕಾರ ವಹಿಸಿಕೊಂಡರು.

1986ರ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಇದಕ್ಕೂ ಮೊದಲು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸುಮಾರು 37 ವರ್ಷಗಳ ಸುದೀರ್ಘ ಅಧಿಕಾರಾವಧಿಯಲ್ಲಿ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Karnataka Ex-DGP Praveen Sood Takes Over As CBI Director On May 25

ನಿರ್ಗಮಿತ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರವಧಿ ಇಂದಿಗೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14ರಂದು 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತ್ತು.

ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಭಾಗವಹಿಸಿದ್ದ ಸಭೆಯಲ್ಲಿ ಸಿಬಿಐ ನಿರ್ದೇಶಕರ ಹುದ್ದೆಗೆ ಪ್ರವೀಣ್ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿತ್ತು.

Karnataka Ex-DGP Praveen Sood Takes Over As CBI Director On May 25

ಡಿಜಿ-ಐಜಿಪಿ ಆಗುವ ಮುನ್ನ ಪ್ರವೀಣ್ ಸೂದ್ ಅವರು 2013-14ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ರಾಜ್ಯ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ನ ಎಡಿಜಿಪಿ ಮತ್ತು ಆಡಳಿತದಲ್ಲಿ ಎಡಿಜಿಪಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

2024ರಲ್ಲಿ ಪ್ರವೀಣ್ ಸೂದ್ ಅವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು. ಆದರೆ ಸಿಬಿಐ ನೂತನ ನಿರ್ದೇಶಕರಾಗಿ ನೇಮಿಸಿದ ಕಾರಣ ಇದೀಗ ಮತ್ತೆ ಎರಡು ವರ್ಷಗಳ ಅಧಿಕಾರವಧಿ ವಿಸ್ತರಣೆಗೊಂಡಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+