• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರವಾಸಿ ದಿವಸ್‌ದಿಂದ ಕರ್ನಾಟಕಕ್ಕೂ ಬರುತ್ತಾ ಬಂಡವಾಳ?

By Kiran B Hegde
|

ಗಾಂಧಿನಗರ, ಜ. 9: ಗುಜರಾತ್‌ನ ಗಾಂಧಿ ನಗರದಲ್ಲಿ ನಡೆಯುತ್ತಿರುವ 'ಪ್ರವಾಸಿ ಭಾರತೀಯ ದಿವಸ್' ಕಾರ್ಯಕ್ರಮದ ಲಾಭ ಪಡೆಯಲು ಕರ್ನಾಟಕ ಸರ್ಕಾರವೂ ಮುಂದಾಗಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಅನಿವಾಸಿ ಭಾರತೀಯರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದಾರೆ.

ಈ ಕಾರ್ಯಕ್ರಮಲ್ಲಿ 4,000ಕ್ಕೂ ಅಧಿಕ ಅತಿಥಿಗಳು ಹಾಗೂ ಸಾಕಷ್ಟು ಸಂಖ್ಯೆ ಅನಿವಾಸಿ ಭಾರತೀಯರು ಪಾಲ್ಗೊಂಡಿದ್ದಾರೆ. ಇವರಿಗೆ ಕರ್ನಾಟಕದಲ್ಲಿರುವ ಅವಕಾಶಗಳ ಕುರಿತು ರಾಜ್ಯ ಸರ್ಕಾರದ ತಂಡದಲ್ಲಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ವಾಣಿಜ್ಯ ಮತ್ತು ಕೈಗಾರಿಕೆ) ರತ್ನಾ ಪ್ರಭಾ, ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಹಾಗೂ ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗೌರವ್ ಗುಪ್ತಾ ಮನವರಿಕೆ ಮಾಡಿಕೊಡುತ್ತಿದ್ದಾರೆ. [ಜಗತ್ತಿನೆಲ್ಲೆಡೆಯಿಂದ ಭಾರತದತ್ತ ಭರವಸೆಯ ನೋಟ]

ಮೊದಲ ಬಾರಿಗೆ ಪಾಲ್ಗೊಂಡ ಕರ್ನಾಟಕ : "ಇದೇ ಪ್ರಥಮ ಬಾರಿಗೆ ಕರ್ನಾಟಕವು ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ರಾಜ್ಯದಲ್ಲಿರುವ ವಿಶೇಷತೆಗಳನ್ನು ಇಲ್ಲಿ ಪ್ರದರ್ಶಿಸುತ್ತಿದ್ದೇವೆ. ರಾಜ್ಯದಲ್ಲಿ ಪ್ರವಾಸೋದ್ಯಮ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಇರುವ ಅವಕಾಶಗಳ ಕುರಿತು ಮನವರಿಕೆ ಮಾಡಿಕೊಡುತ್ತಿದ್ದೇವೆ" ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. [ಅಂಬಾವಿಲಾಸ ಅರಮನೆ ಅಭಿವೃದ್ಧಿ]

"ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನಿವಾಸಿ ಭಾರತೀಯ ಬಂಡವಾಳ ಹೂಡಿಕೆದಾರರು ಭಾಗವಹಿಸಿದ್ದಾರೆ. ಅವರನ್ನು ಕರ್ನಾಟಕಕ್ಕೆ ಆಕರ್ಷಿಸುವುದು ನಮ್ಮ ಉದ್ದೇಶ. ರಾಜ್ಯದ ಉತ್ಪಾದನೆ, ಜವಳಿ ಮತ್ತು ಅಂತರಿಕ್ಷಯಾನ ಕ್ಷೇತ್ರಗಳಲ್ಲಿರುವ ಅವಕಾಶಗಳ ಕುರಿತು ಬಂಡವಾಳ ಹೂಡಿಕೆದಾರರಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ" ಎಂದು ರತ್ನ ಪ್ರಭಾ ತಿಳಿಸಿದರು. [ಹಂಪಿ ಉತ್ಸವದ ವಿಹಂಗಮ ನೋಟ]

ಗುಜರಾತ್ ರಾಜ್ಯವು ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿಯೇ ಗುರುತಿಸಿಕೊಂಡಿದ್ದರೂ ಅಲ್ಲಿ ಪ್ರವಾಸಿ ಭಾರತೀಯ ದಿವಸ್ ನಡೆಸಲು ಯುಪಿಎ ಸರ್ಕಾರ ಒಪ್ಪಿರಲಿಲ್ಲ. ಈಗ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿರುವ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಈ ಕಾರ್ಯಕ್ರಮ ನಡೆಸಿ ಅಲ್ಲಿಗೆ ಸಾಧ್ಯವಾದಷ್ಟು ಬಂಡವಾಳ ಆಕರ್ಷಿಸುವ ಉದ್ದೇಶ ಹೊಂದಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A team of Karnataka government lead by tourism minister for state R V Deshpande is trying to attract non-resident Indian (NRI)s to invest in Karnataka. The team is holding a series of meetings with NRI investors at the event to attract investments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more