• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ.ಓಕಾ, ನಾಗರತ್ನ ನೇಮಕ

|
Google Oneindia Kannada News

ನವದೆಹಲಿ, ಆಗಸ್ಟ್ 26: ಸುಪ್ರೀಂಕೋರ್ಟ್‌ಗೆ 9 ಮಂದಿ ನ್ಯಾಯಾಧೀಶರ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದಾರೆ. ಈ ಪೈಕಿ ಮೂವರು ಮಹಿಳಾ ನ್ಯಾಯಾಧೀಶರು ಸೇರಿದ್ದಾರೆ. ಕರ್ನಾಟಕದಿಂದ ಕರ್ನಾಟಕ ಹೈಕೋರ್ಟ್ ಸಿಜೆ ನ್ಯಾ .ಎ.ಎಸ್. ಓಕಾ ಜೊತೆಗೆ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತಂತೆ ಕೇಂದ್ರ ಸರ್ಕಾರದ ಪ್ರಕಟಣೆ ಹೊರಡಿಸಿದೆ. ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಆಗಸ್ಟ್ 31ರಂದು ರಾಷ್ಟ್ರಪತಿ ಭವನದಲ್ಲಿ ಸರಳವಾಗಿ ನಡೆಯುವ ಸಾಧ್ಯತೆಯಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪ್ರತಿಕ್ರಿಯಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ, ''ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎರಡು ವರ್ಷ ಮೂರು ತಿಂಗಳು ಕೆಲಸ ಮಾಡಿರುವುದು ಆಹ್ಲಾದಕರ ಅನುಭವ ನೀಡಿದೆ,'' ಎಂದರು. ಜೊತೆಗೆ ಕರ್ನಾಟಕ ವಕೀಲರ ಪರಿಷತ್‌ಗೆ ಗುರುವಾರ ಕೃತಜ್ಞತೆ ಸಲ್ಲಿಸಿದರು.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯನ್ನಾಗಿಸುವ ಕೊಲಿಜಿಯಂ 9 ಮಂದಿ ನ್ಯಾಯಾಧೀಶರ ನೇಮಕಾತಿ ಕುರಿತಂತೆ ನೀಡಿದ್ದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸಹಿ ಹಾಕಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯಶ್ರೀನಿವಾಸ ಓಕಾ, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಂನಾಥ್, ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರಕುಮಾರ್ ಮಹೇಶ್ವರಿ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾಕೋಹ್ಲಿ, ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ಗುಜರಾತ್ ಹೈಕೋರ್ಟ್‌ನ ಬೇಲಾ ಎಂ. ತ್ರಿವೇದಿ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಇವರುಗಳು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ನ್ಯಾ. ನಾಗರತ್ನಾ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆಯಿದ್ದರೂ, ಅಲ್ಪಾವಧಿ ಹುದ್ದೆಯಲ್ಲಿರಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ಪಡೆದು 36 ದಿನಗಳು ಮಾತ್ರ ಮಹತ್ವದ ಹುದ್ದೆಯಲ್ಲಿರಲಿದ್ದಾರೆ. 2027ರ ಸೆಪ್ಟೆಂಬರ್‌ 24ರಿಂದ ಅಕ್ಟೋಬರ್‌ 29ರ ವರೆಗೆ ನ್ಯಾ. ನಾಗರತ್ನ ಸಿಜೆಐ ಹುದ್ದೆಯಲ್ಲಿ ಇರಲಿದ್ದಾರೆ. ನ್ಯಾ. ಓಕಾ ಅವರು 2025ರ ಮೇನಲ್ಲಿ ನಿವೃತ್ತಿ ಹೊಂದಲಿದ್ದಾರೆ.

ನ್ಯಾ. ನಾಗರತ್ನ:
ನ್ಯಾ. ನಾಗರತ್ನ ಅವರು 1987ರ ಅಕ್ಟೋಬರ್ 28ರಂದು ಬೆಂಗಳೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದರು. ಬಳಿಕ 18 ಫೆಬ್ರವರಿ 2008 ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿರಾಗಿ ನೇಮಕಗೊಂಡರು. 2010ರ ಫೆಬ್ರವರಿ 17ರಂದು ಅವರನ್ನು ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಯಿತು. ಸುಪ್ರೀಂಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಇ ಎಸ್ ವೆಂಕಟರಾಮಯ್ಯ ಅವರ ಪುತ್ರಿ ಇವರು.

2009ರಲ್ಲಿ ನಡೆದ ವಕೀಲರ ಪ್ರತಿಭಟನೆ ವೇಳೆ ಅವರನ್ನು ಬಲವಂತವಾಗಿ ಬಂಧಿಸಿದ್ದು ಸಾಕಷ್ಟು ಜನರ ಗಮನ ಸೆಳೆಯಿತು. ನ್ಯಾಯಮೂರ್ತಿಯಾಗಿ ಕಳೆದ ಹದಿಮೂರು ವರ್ಷಗಳಲ್ಲಿ, ಅವರು ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ತಮ್ಮ ತೀರ್ಪುಗಳಲ್ಲಿ ಹಲವು ಕಠಿಣ ಅವಲೋಕನಗಳನ್ನು ಮಾಡಿದ್ದಾರೆ.

ಆಗಸ್ಟ್ 17ರ ಕೊಲಿಜಿಯಂ ಶಿಫಾರಸುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, 2027 ರಲ್ಲಿ ನ್ಯಾ. ನಾಗರತ್ನ ಅವರು ಸುಪ್ರೀಂಕೋರ್ಟ್‌ನ ಪ್ರಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

English summary
Karnataka High Court Justice Abhay Shreeniwas Oka Appointed as Judge of Supreme Court of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X