ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ 2023: ಬಜೆಟ್‌ ಬಗ್ಗೆ ಭರವಸೆ ಕಳೆದುಕೊಂಡ ಸಿದ್ದರಾಮಯ್ಯ..!

ಫೆಬ್ರವರಿ 1ರಂದು 2023-24ನೇ ಸಾಲಿನ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

|
Google Oneindia Kannada News

ನಿರ್ಮಲಾ ಸೀತಾರಾಮನ್ ಅವರ ಬಜೆಟ್‌ನಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ. ಇದು ಭರವಸೆಗಳಿಂದ ತುಂಬಿರುತ್ತದೆ. ಆದರೆ ಅದನ್ನು ಈಡೇರಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳಿನ ಬಿಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

2023-24ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ನಾಳಿನ ಬಜೆಟ್ ಹೇಗಿರಲಿದೆ ಎನ್ನುವ ಬಗ್ಗೆ ಇಂದೇ ಮಾಹಿತಿಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, 'ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷವನ್ನು ಮರಳಿ ತರಲು ನಿರ್ಧರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್‌ನಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ. ಇದು ಭರವಸೆಗಳಿಂದ ತುಂಬಿರುತ್ತದೆ. ಆದರೆ ಯಾವುದನ್ನೂ ಈಡೇರಿಸುವುದಿಲ್ಲ' ಎಂದಿದ್ದಾರೆ.

Union Budget 2023: ಬಜೆಟ್ ದಿನಾಂಕ, ಸಮಯ, ಲೈವ್ ಎಲ್ಲಿ ವೀಕ್ಷಿಸಬೇಕು?Union Budget 2023: ಬಜೆಟ್ ದಿನಾಂಕ, ಸಮಯ, ಲೈವ್ ಎಲ್ಲಿ ವೀಕ್ಷಿಸಬೇಕು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿದೆ. ಹಿಂದಿನ ಎರಡರಂತೆ ಈ ಬಾರಿಯೂ 2023-24 ರ ಕೇಂದ್ರ ಬಜೆಟ್ ಅನ್ನು ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಇದಾಗಿದೆ.

ಬಜೆಟ್ ನಿರೀಕ್ಷೆಗಳು:-

2024 ರ ಸಾರ್ವತ್ರಿಕ ಚುನಾವಣೆಯ ಮುನ್ನ ಮಂಡನೆಯಾಗುತ್ತಿರುವ ಪೂರ್ಣ ವರ್ಷದ ಕೊನೆಯ ಬಜೆಟ್ ಕೂಡ ಹೌದು ಹಾಗಾಗಿ ಮಹತ್ವಾಕಾಂಕ್ಷೆ ಹೆಚ್ಚಿದೆ. ಎಫ್‌ಎಂ ನಿರ್ಮಲಾ ಸೀತಾರಾಮನ್ ಅವರಿಂದ ನಿರೀಕ್ಷಿಸಲಾದ ಪ್ರಮುಖ ಘೋಷಣೆಗಳು ಇಲ್ಲಿದೆ.

Karnataka LoP Siddaramaiah reaction on Nirmala Sitharamans Union Budget 2023

*ಬಜೆಟ್‌ನಲ್ಲಿ ತೆರಿಗೆ ದರಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ.

*ಜನರ ವೇತನ ಉಳಿತಾಯದ ದೃಷ್ಟಿಯಿಂದ ಮೂಲ ವಿನಾಯಿತಿ ಮಿತಿಯನ್ನು ಪ್ರಸ್ತುತ ರೂ 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕೆಂದು ತಜ್ಞರು ಬಯಸುತ್ತಾರೆ.

*ವರ್ಷಕ್ಕೆ 1 ಲಕ್ಷ ರೂಪಾಯಿಗಳ ತೆರಿಗೆ ರಹಿತ ಮಿತಿಯನ್ನು ಕನಿಷ್ಠ 2 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಬಹುದು ಎಂಬುದು ರಿಟೇಲ್ ಹೂಡಿಕೆದಾರರ ನಿರೀಕ್ಷೆಯಾಗಿದೆ.

*ಸರ್ಕಾರ ಈ ವರ್ಷದ ಬಜೆಟ್‌ನಲ್ಲಿ ಇನ್ನೂ 400 ಹೊಸ ವಂದೇ ಭಾರತ್ ರೈಲುಗಳ ಯೋಜನೆಗಳನ್ನು ಅನಾವರಣಗೊಳಿಸುವ ಸಾಧ್ಯತೆಯಿದೆ.

*ಪಾನ್​​ ಸಂಖ್ಯೆಯನ್ನು ಅಳವಡಿಸಿಕೊಳ್ಳಲು ಕಾನೂನು ಮತ್ತು ಕಾರ್ಯಾಚರಣೆಯ ಚೌಕಟ್ಟನ್ನು ಹೊರತರಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

English summary
Union Budget 2023: Finance Minister Nirmala Sitharaman will present the budget for the year 2023-24 on February 1. Opposition leader Siddaramaiah has given a response to this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X