ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ: ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರರ ಬಂಧನ

|
Google Oneindia Kannada News

ಬೆಂಗಳೂರು, ಡಿ. 09: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಮಹಾರಾಷ್ಟ್ರದ ವಿರುದ್ಧ ಬೆಂಗಳೂರಿನ ಗಾಂಧಿನಗರದಲ್ಲಿರುವ ಮಹಾರಾಷ್ಟ್ರ ಬ್ಯಾಂಕ್ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಯ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ನಡ ಪರ ಸಂಘಟನೆಯಾದ ನಮ್ಮ ಕರ್ನಾಟಕ ಸೇನೆಯಿಂದ ಮಹಾರಾಷ್ಟ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪೊಲಿಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಸ್‌ಗಳಲ್ಲಿ ಕರೆದೊಯ್ದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮುಂಬೈನಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ಪ್ರತಿಭಟನೆಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮುಂಬೈನಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ಪ್ರತಿಭಟನೆ

ಬುಧವಾರವಷ್ಟೇ ಮಹಾರಾಷ್ಟ್ರ ರಾಜಧಾನಿ ಮುಂಬೈನ ಪೊವೈ ಪ್ರದೇಶದಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕೈಯಲ್ಲಿ ಮಹಾರಾಷ್ಟರ ಪರವಾದ ಘೋಷಣೆಗಳಿರುವ ಫೋಸ್ಟರ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿ, ರಾಜ್ಯದ ಹೇಳಿಕೆಯನ್ನು ಟೀಕಿಸಿದ್ದರು.

Karnataka- Maharashtra border row: Protest outside the Maharashtra Bank in Bengaluru

ಎರಡು ರಾಜ್ಯಗಳಲ್ಲಿ ಗಡಿ ವಿವಾದದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ಇತ್ತಿಚೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಈ ವಿಚಯದಲ್ಲಿ ಕೇಂದ್ರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದರು. ಗುರುವಾರ ಕೇಂದ್ರ ಸರ್ಕಾರ ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ಕೇಂದ್ರವು ಕಣ್ಣುಮುಚ್ಚಿ ಕುಳಿತಿದೆ ಎಂದು ಮತ್ತೆ ಹೇಳಿದ್ದಾರೆ

ಬೆಳಗಾವಿ ಮತ್ತು ಪುಣೆಯಲ್ಲಿ ಉಭಯ ರಾಜ್ಯಗಳ ವಾಹನಗಳ ಮೇಲೆ ದಾಳಿ ಮಾಡಿ ಹಾನಿ ಮಾಡಲಾಗುತ್ತಿದೆ. ಹಾನಿ ಮತ್ತು ಹಿಂಸಾಚಾರದ ವರದಿಗಳಿಂದಾಗಿ ಎರಡೂ ರಾಜ್ಯಗಳು ಬುಧವಾರ ಇತರ ರಾಜ್ಯಗಳಿಗೆ ಬಸ್ ಸೇವೆಗಳನ್ನು ಭಾಗಶಃ ಸ್ಥಗಿತಗೊಳಿಸಿವೆ.

Karnataka- Maharashtra border row: Protest outside the Maharashtra Bank in Bengaluru

ರಾಜ್ಯದಲ್ಲಿ ಅಧಿಕಾರದಲ್ಲಿರುವ ಮತ್ತು ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿರುವ ಬಿಜೆಪಿ ಗಡಿ ವಿವಾದವನ್ನು ಉಲ್ಬಣಗೊಳಿಸಿದ್ದಕ್ಕಾಗಿ ಪ್ರತಿಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಗಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಪರಿಹರಿಸಲು ಮಹಾರಾಷ್ಟ್ರ ಸರ್ಕಾರ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯನ್ನು ಕೋರಿದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಶಾ ಅವರ ಮಧ್ಯಸ್ಥಿಕೆಯನ್ನು ಕೋರಿದ್ದೇನೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ವಾಹನಗಳನ್ನು ಧ್ವಂಸ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವುದಾಗಿ ತಿಳಿಸಿದ್ದಾರೆ.

English summary
Karnataka- Maharashtra border row: pro-Kannada organisation protest outside the Maharashtra Bank in Gandhinagar, Bengaluru. police detained protestors. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X