ಕನ್ನಡಿಗನಿಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ? ಸಂಭಾವ್ಯ ಪಟ್ಟಿ ಇಲ್ಲಿದೆ
ಬೆಂಗಳೂರು, ಜೂನ್ 25: ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಲೇ ಇದೆ. ಜುಲೈ ಮೊದಲ ವಾರದಲ್ಲಿ ಅಧ್ಯಕ್ಷರ ಹೆಸರು ರಿವಿಲ್ ಆಗುವ ಸಾಧ್ಯತೆ ಇದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬಹು ದಿನಗಳಿಂದ ರಾಷ್ಟ್ರಾಧ್ಯಕ್ಷರ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ನಡುವೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಹೆಸರುಗಳು ಮುನ್ನಲೇಗೆ ಬಂದಿದ್ದು, ಈ ಹೆಸರುಗಳ ಫೈಕಿ ಕರ್ನಾಟಕದವರ ಹೆಸರು ಸಹ ಮುನ್ನಲೆಗೆ ಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕೆ ಕರ್ನಾಟಕದ ಒಬ್ಬ ಹಿರಿಯ ರಾಜಕಾರಣಿಯ ಹೆಸರು ಕೇಳಿ ಬಂದಿದೆ. ಮೂರ್ನಾಕ್ಕು ತಿಂಗಳಿನಿಂದ ಅಧ್ಯಕ್ಷ ಸ್ಥಾನದ ಕುರಿತು ಚರ್ಚೆ ನಡೆಯುತ್ತಿದ್ದು, ಇನ್ನೂ ನೂತನ ಅಧ್ಯಕ್ಷ ಯಾರ ಎಂಬ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಆದರೆ, ಇದೀಗ ಅಧ್ಯಕ್ಷರ ಆಯ್ಕೆಗೆ ಸಮಯ ಕೂಡಿ ಬಂದಿದೆ. ಜುಲೈ ಮೊದಲ ವಾರದಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಯಾರ ಎಂಬ ಬಗ್ಗೆ ರಿವೀಲ್ ಆಗುವ ಸಾಧ್ಯತೆ ಇದ್ದು, ಈ ವಾರದಂದು ನೂತನ ರಾಷ್ಟ್ರೀಯ ಅಧ್ಯಕ್ಷರು ಯಾರು ಎಂದು ಆಯ್ಕೆಯಾಗಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಚರ್ಚೆಯಲ್ಲಿದ್ದು, ಈ ಹೆಸರುಗಳ ಫೈಕಿ ಕನ್ನಡಿಗನ ಹೆಸರು ಕೇಳಿ ಬರುತ್ತಿದೆ. ಕರ್ನಾಟಕದ ನಾಯಕನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮನಸ್ಸು ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಯಾರು ಆ ಕನ್ನಡಿಗ ಎಂಬ ಪ್ರಶ್ನೆ ಕಮಲ ಪಾಳಯದಲ್ಲಿ ಕೇಳಿ ಬರುತ್ತಿದ್ದೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರು ನೇಮಕವಾಗಿರುವುದಕ್ಕೆ ತೀವ್ರ ಅಸಮಾಧಾನ ಕೇಳಿ ಬಂದಿದೆ. ಈ ನಡುವೆ ಕನ್ನಡಿಗನಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಸದ್ಯ ಬಿಜೆಪಿ ಪಾಳಯದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾಗೆ ಕಗ್ಗಂಟಾಗಿ ಪರಿಣಮಿಸಿದೆ. ಕಳೆದ ನಾಲ್ಕೈದು ತಿಂಗಳಿನಿಂದಲೂ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸುತ್ತಿದ್ದಾರೆ. ಇತ್ತ ರಾಷ್ಟ್ರೀಯ ಅಧ್ಯಕ್ಷರ ರೇಸ್‌ನಲ್ಲಿ ಸಾಕಷ್ಟು ಪ್ರಭಾವಿ ನಾಯಕರ ಹೆಸರು ಕೇಳಿ ಬಂದಿದೆ. ಈ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕೆ ಯಾರು ಸೂಕ್ತ ಎಂಬ ಲೆಕ್ಕಾಚಾರವನ್ನ ಆರ್‌ಎಸ್‌ಎಸ್ ಸಹ ನಡೆಸಿದೆ ಎಂದು ತಿಳಿದು ಬಂದಿದೆ. ಸದ್ಯ ಬಿಜೆಪಿ ಯಾರಿಗೆ ಪಟ್ಟ ಕಟ್ಟಬೇಕು ಅನ್ನೋ ಗೊಂದಲದಲ್ಲಿದೆ. ಈ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಆರ್‌ಎಸ್‌ಎಸ್ ಪಾತ್ರವೂ ನಿರ್ಣಾಯಕ ಆಗಿರುತ್ತೆ, ಆರ್‌ಎಸ್‌ಎಸ್‌ನ ಸಲಹೆ ಮತ್ತು ಸಮ್ಮತಿಯನ್ನು ಪಡೆಯಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ 11 ಮಂದಿ ಆಕಾಂಕ್ಷಿಗಳ ಪಟ್ಟಿ ಸಿದ್ದವಾಗಿದೆ. ಅದ್ರಲ್ಲಿ ಕನ್ನಡಿಗನ ಹೆಸರು ಪ್ರಬಲವಾಗಿ ಕೇಳಿ ಬರ್ತಿದೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಜೊತೆಗೆ ಉತ್ತಮ ಒಡನಾಟ ಹೊಂದಿರು, ಆರ್‌ಎಸ್‌ಎಸ್ ಬ್ಯಾಗ್ರೌಂಡ್‌ನಿಂದ ಬಂದಂಥಹ ಕನ್ನಡಿಗರಾದ ಪ್ರಹ್ಲಾದ್ ಜೋಶಿಯವರ ಹೆಸರು ಪ್ರಬಲವಾಗಿ ಕೇಳಿ ಬರ್ತಿದ್ದು, ಕನ್ನಡಿಗ ಬಿಜೆಪಿಯ ನೂತನ ರಾಷ್ಟ್ರಾಧ್ಯಕ್ಷರಾಗುತ್ತಾರಾ ಎಂಬ ಚರ್ಚೆ ಶುರುವಾಗಿದೆ. ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಜುಲೈ 7 ರಂದು ಹೆಸರು ಘೋಷಣೆಯಾಗಲಿದೆ ಎನ್ನಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದವರು, ಸಂಘ ಪರಿವಾರದಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್‌ಗೆ ಬಹಳ ಹತ್ತಿರವಾಗಿದ್ದಾರೆ. ಆರ್‌ಎಸ್‌ಎಸ್ ಅಂತ ಬಂದಾಗ ಎಲ್ಲಿಯೂ ಕೂಡ ರಾಜಿಯಾಗದ ವ್ಯಕ್ತಿತ್ವ, ಪಕ್ಷದ ಸಿದ್ದಾಂತಕ್ಕೆ ಬದ್ಧವಾಗಿದ್ದಾರೆ. ಇನ್ನೂ ಆರಂಭದಿಂದಲೂ ಜೋಶಿ ಅವರು ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ತಮ್ಮದೇ ಆದ ವರ್ಚಸ್ಸನ್ನ ಹೊಂದಿದ್ದಾರೆ. ಹೀಗಾಗಿ ಆರ್‌ಎಸ್‌ಎಸ್ ಮನಸ್ಸಿನಲ್ಲಿ ಜೋಶಿಯವರ ಹೆಸರು ಇದೆ. ಹೀಗಾಗಿ ಪ್ರಹ್ಲಾದ್ ಜೋಶಿ ಅವರು ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಪಟ್ಟ ಒಲಿದು ಬರಲಿದೆ.
ಸಂಭಾವ್ಯ ನಾಯಕರ ಪಟ್ಟಿ.
1.ಧರ್ಮೇಂದ್ರ ಪ್ರಧಾನ್
2. ಮನೋಹರ್ ಲಾಲ್ ಖಟ್ಟರ್
3. ಶಿವರಾಜ್ ಸಿಂಗ್ ಚೌಹಾಣ್
4. ಅರ್ಜುನ್ ರಾಮ್ ಮೇಘವಾಲ್
5. ಪ್ರಲ್ಹಾದ್ ಜೋಶಿ
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications