Karnataka Rain : ಕರಾವಳಿ, ಮಲೆನಾಡು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಎಲ್ಲಾ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಕಡಿಮೆಯಾಗಿದೆ. ಆದರೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇಂದು, ನಾಳೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಧವಾರ ಸಂಜೆ ದಕ್ಷಿಣ ಕನ್ನಡ, ಕೊಡಗು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಕಾರಣ ಎಚ್ಚರಿಕೆಯಿಂದ ಇರುವಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

 Karnataka Rain: Moderate Rains Likely Coastal And Malnad Districts

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಮುಂದಿನ ಎರಡು ದಿನಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್ 9ರಂದು ಬೆಳಗ್ಗೆ 8.30ಕ್ಕೆ ಕೊನಯಾದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕೊಪ್ಪದಲ್ಲಿ 43.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಬೆಂಗಳೂರಿನ ಪಶ್ಚಿಮ ನಂದಿನಿ ಲೇಔಟ್‌ನಲ್ಲಿ 20.5 ಮಿಮೀ ಮಳೆಯಾಗಿದೆ.

ಜಿಲ್ಲಾವಾರು ಮಳೆ ಮುನ್ಸೂಚನೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಉತ್ತಮ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಯಚೂರು, ರಾಮನಗರ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಚಿಕ್ಕಬಳ್ಳಾಪುರ, ಮೈಸೂರು, ಬೆಳಗಾವಿ, ಕಲಬುರಗಿ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಯಾದಗಿರಿ, ಬೀದರ್, ಧಾರವಾಡ, ಬಳ್ಳಾರಿ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರಿನಲ್ಲಿ 43.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಟಿ ಹೊಸಹಳ್ಳಿ, ಕಗ್ಗೆರೆ, ಸಂಪಿಗೆ ಹೊಸಹಳ್ಳಿ, ಸಂತೆ ಮಾವತ್ತೂರು, ಪಾವಗಡ, ಚೌಡನಕುಪ್ಪೆ, ಪೆದ್ದನಹಳ್ಳಿ, ಬೆಲವತ್ತದಲ್ಲಿ ಉತ್ತಮ ಮಳೆಯಾಗಿದೆ.

ಬೆಂಗಳೂರು ನಗರದ ಚೋಳನಾಯಕನಹಳ್ಳಿ, ಚುಂಚನಕುಪ್ಪೆ, ನಂದಿನಿ ಲೇಔಟ್, ರಾಮೋಹಳ್ಳಿ, ಯಶವಂತಪುರ ಸೇರಿ ಹಲವೆಡೆ ಮಳೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಅಂತರಗಂಗೆ, ಸುಲಗೋಡು, ಅರಗ, ಸೋನಲೆ, ಶಿರವಂತೆ, ಹೊನ್ನೆತಾಳು ಎನ್ನುವಲ್ಲಿ ಉತ್ತಮ ಮಳೆಯಾಗಿದೆ. ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ರಾಮನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಕೂಡ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ರಾತ್ರಿ ನಗರದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬುಧವಾರ ಬೆಳಗ್ಗೆಯಿಂದ ನಗರದಲ್ಲಿ ಬಿಸಿಲು ಇದ್ದು, ರಾತ್ರಿ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+