ಕರ್ನಾಟಕ ಫಲಿತಾಂಶ: ಹಿಮಾಚಲ ಪ್ರದೇಶದಲ್ಲಿ ದೇವರ ಮೊರೆ ಹೋದ ಪ್ರಿಯಾಂಕಾ ಗಾಂಧಿ

ಶಿಮ್ಲಾ, ಮೇ 13: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಎಐಸಿಸಿಯಲ್ಲಿ ಪ್ರಿಯಾಂಕಾ ಗಾಂಧಿ ದೇವರ ಮೊರೆ ಹೋಗಿದ್ದು ಪೂಜೆ ಸಲ್ಲಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಹಿಮಾಚಲ ಪ್ರದೇಶದಲ್ಲಿ ಶಿಮ್ಲಾದ ಜಖು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇನ್ನು ಇತ್ತ ಕರ್ನಾಟಕದಲ್ಲಿ ಮತ ಎಣಿಕೆಯಲ್ಲಿ ಆರಂಭವಾಗಿ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭ ಮಾಡಿದ್ದಾರೆ.

Karnataka Result: Priyanka Gandhi Vadra

95 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುನ್ನಡೆಯನ್ನು ಸಂಭ್ರಮಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಇನ್ನು ಕಾಂಗ್ರೆಸ್‌ ಗೆಲುವೇ ಪ್ರಧಾನಿ ಮೋದಿಯವರ ಸೋಲು. ಇದು 2024 ರ ಸಾರ್ವತ್ರಿಕ ಚುನಾವಣೆಯ ನಂತರ ಕೇಂದ್ರದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ದಾರಿ ಮಾಡಿಕೊಡಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶುಕ್ರವಾರ ಹೇಳಿದ್ದಾರೆ.

ಇದಕ್ಕೂ ಮುನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ತಮ್ಮ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದೆ. ಕಾಂಗ್ರೆಸ್ ಅತ್ಯಧಿಕ ಬಹುಮತದೊಂದಿಗೆ ಗೆಲ್ಲಲಿದೆ. ಕಾಂಗ್ರೆಸ್‌ನಲ್ಲಿ ವಿಶ್ವಾಸ ಮೂಡಿಸಿದ ಎಲ್ಲಾ 6.5 ಕೋಟಿ ಕನ್ನಡಿಗರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+