ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು, ಕರ್ನಾಟಕಕ್ಕೆ ನೆಮ್ಮದಿ

|
Google Oneindia Kannada News

ಬೆಂಗಳೂರು, ಜೂನ್ 25: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ನೆಮ್ಮದಿ ಸುದ್ದಿ ಸಿಕ್ಕಿದೆ.

ಮುಂಗಾರು ಮಳೆ ವಿಳಂಬ, ಮಳೆ ಕೊರತೆ ಅನುಭವಿಸುತ್ತಿರುವ ಕರ್ನಾಟಕದ ಜೊತೆ ನೋವನ್ನು ಹಂಚಿಕೊಳ್ಳುವುದನ್ನು ತಮಿಳುನಾಡು ಕಲಿಯಬೇಕಿದೆ. ಉತ್ತಮ ಮಳೆ ಬಂದರೆ ಮಾತ್ರ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಲಿ ಎಂದು ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಜೂನ್ ತಿಂಗಳ ಕೋಟಾದಂತೆ ತಮಿಳುನಾಡಿಗೆ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ಹಂತ ತಲುಪಿದ್ದು, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ.

ಕಾವೇರಿ ಅಂತಿಮ ತೀರ್ಪು : ತಮಿಳುನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿಕಾವೇರಿ ಅಂತಿಮ ತೀರ್ಪು : ತಮಿಳುನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿ

ಒಟ್ಟಾರೆ, ಕರ್ನಾಟಕದ ಕಾವೇರಿ ಜಲನಯನ ಪ್ರದೇಶದಲ್ಲಿ 3 ರಿಂದ 4 ಟಿಎಂಸಿ ಇರಬಹುದು, ಇದರಲ್ಲಿ ಮುಂದಿನ ಮಳೆಗಾಲದವರೆಗೂ ಕುಡಿಯುವ ನೀರಿನ ಪೂರೈಕೆಗೆ ಬಳಸಬೇಕಾಗುತ್ತದೆ. ಆದರೆ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಅವೈಜ್ಞಾನಿಕ ಎಂದು ಕರ್ನಾಟಕದ ಪ್ರತಿನಿಧಿಗಳು ವಾದಿಸಿದರು.

ಮಳೆ ಕೊರತೆ, ಮುಂಗಾರು ವಿಳಂಬ, ಜಲಾಶಯಗಳು ಖಾಲಿ ಖಾಲಿಮಳೆ ಕೊರತೆ, ಮುಂಗಾರು ವಿಳಂಬ, ಜಲಾಶಯಗಳು ಖಾಲಿ ಖಾಲಿ

ಕರ್ನಾಟಕದ ವಾದವನ್ನು ಪುರಸ್ಕರಿಸಿದ ಮಸೂದ್ ಅವರು ತಮ್ಮ ಕಟ್ಟ ಕಡೆಯ ಸಭೆಯಲ್ಲಿ ಎರಡು ರಾಜ್ಯಗಳು ಬರ ಪರಿಸ್ಥಿತಿ ನಿರ್ವಹಣೆ, ಉತ್ತಮ ಮುಂಗಾರು ಮಳೆ ನಿರೀಕ್ಷಿಸಿ, ಮಳೆ ಬಂದರೆ ನಿಗದಿಯಂತೆ ನೀರು ಹರಿಸಲಿ ಎಂದು ಹೇಳಿದ್ದಾರೆ.

ಕರ್ನಾಟಕದ ಜಲಾಶಯಗಳು ಬರಿದಾಗಿವೆ

ಕರ್ನಾಟಕದ ಜಲಾಶಯಗಳು ಬರಿದಾಗಿವೆ

ಸತತ ಬರದಿಂದ ಕಂಗೆಟ್ಟಿರುವ ರಾಜ್ಯದಲ್ಲಿ ಮುಂಗಾರು ಆರಂಭ ನಿಗದಿತ ಸಮಯಕ್ಕಿಂತ ವಿಳಂಬವಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ವರಾಹಿ, ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ ಜಲಾಶಯಗಳ ನೀರು ಖಾಲಿಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ(KSNMDC) ನಿರ್ದೇಶಕ ಜಿಎಸ್ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.

ಇದರ ಜೊತೆಗೆ ಕಾವೇರಿ ಕೊಳ್ಳದಲ್ಲಿ ನೀರು ಕಾಣಬೇಕಾದರೆ, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಮಳೆ ಬೀಳಬೇಕಿದೆ. ಕಾವೇರಿ, ಹೇಮಾವತಿ ನದಿ ನೀರು ಒಳ ಹರಿವು ಹೆಚ್ಚಳವಾಗಬೇಕಿದೆ. ಒಳಹರಿವು ಹೆಚ್ಚಿದರೆ ಮಾತ್ರ ತಮಿಳುನಾಡಿಗೆ ನೀರು ಹರಿಸಬಹುದಾಗಿದೆ.

ತಮಿಳುನಾಡಿನಲ್ಲೂ ನೀರಿಗಾಗಿ ಹಾಹಾಕಾರ

ತಮಿಳುನಾಡಿನಲ್ಲೂ ನೀರಿಗಾಗಿ ಹಾಹಾಕಾರ

ತಮಿಳುನಾಡಿನಲ್ಲಿ ಮುಂಗಾರು ಪೂರ್ವ ಮಳೆ ಕೂಡಾ ಕೈಕೊಟ್ಟಿದ್ದರಿಂದ ರಾಜ್ಯದ ಪ್ರಮುಖ ನೀರಿನ ಮೂಲಗಳಾದ ಪೂಂಡಿ, ರೆಡ್ ಹಿಲ್, ಶೋಲಾವರಂ ಮತ್ತು ಚೆಂಬರಂಬಕ್ಕಂನ ಕೆರೆಗಳು ಬತ್ತಿ ಹೋಗಿವೆ. ಕೆಲ ಕೆರೆಗಳಲ್ಲಿ ಮಾತ್ರ ಅಲ್ಪಪ್ರಮಾಣದ ನೀರಿದ್ದು, ನೀರಿನ ಪೂರೈಕೆ ಮಾಡಬೇಕಾಗಿದೆ.

ಸದ್ಯಕ್ಕೆ ಚೆನ್ನೈ ನಗರ ಪೂರೈಕೆಗೆ 525 ಎಂಎಲ್ ಡಿ ನೀರು ಪ್ರತಿದಿನ ಪೂರೈಕೆಯಾಗುತ್ತಿದೆ. 800 ಟ್ಯಾಂಕರ್ ಗಳು ದಿನಕ್ಕೆ 9,800 ಟ್ರಿಪ್ ಸುತ್ತುತ್ತಿವೆ. ಚೆನ್ನೈ ನಗರಕ್ಕೆ ವೆಲ್ಲೂರು ಜಿಲ್ಲೆಯ ಜೋಳಾರ್ ಪೇಟ್ ನಿಂದ 10 ಲಕ್ಷ ಲೀಟರ್ ನೀರನ್ನು ಮುಂದಿನ 6 ತಿಂಗಳ ಅವಧಿಗೆ ಪೂರೈಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ.

ಚೆನ್ನೈನಲ್ಲಿ 'ನೀರಿಗಾಗಿ ಯುದ್ಧ' ಬಿಸಿಲಿನ ಬೇಗೆ, ಆತಂಕದಲ್ಲಿ ಜನತೆಚೆನ್ನೈನಲ್ಲಿ 'ನೀರಿಗಾಗಿ ಯುದ್ಧ' ಬಿಸಿಲಿನ ಬೇಗೆ, ಆತಂಕದಲ್ಲಿ ಜನತೆ

ಕಾವೇರಿ ಕೊಳ್ಳದ ಜನಪ್ರತಿನಿಧಿಗಳ ಜೊತೆ ಸಭೆ

ಕಾವೇರಿ ಕೊಳ್ಳದ ಜನಪ್ರತಿನಿಧಿಗಳ ಜೊತೆ ಸಭೆ

ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 81.37 ಅಡಿಗಳಷ್ಟು ನೀರಿದೆ. ಒಟ್ಟಾರೆ 11 ಟಿಎಂಸಿಯಷ್ಟು ನೀರು ಹೊಂದಿದ್ದು, ನಮಗೆ ಕುಡಿಯಲು ನೀರಿಲ್ಲ, ಮಳೆ ಶುರುವಾಗಿ, ನೀರು ಬಂದರೆ ಮಾತ್ರ ಆದೇಶ ಪಾಲಿಸಲು ಸಾಧ್ಯ, ಈ ಬಗ್ಗೆ ಜನಪ್ರತಿನಿಧಿಗಳ ಜೊತೆ ಸಭೆ ಮಾಡಿ ಚರ್ಚೆ ಮಾಡಬೇಕಿದೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದಾರೆ.

ನೀರು ಬಿಡುವ ಒತ್ತಡ ಹೇರಿಲ್ಲ, ಕರ್ನಾಟಕಕ್ಕೆ ಭಯವಿಲ್ಲ

ನೀರು ಬಿಡುವ ಒತ್ತಡ ಹೇರಿಲ್ಲ, ಕರ್ನಾಟಕಕ್ಕೆ ಭಯವಿಲ್ಲ

ಕಾವೇರಿ ಪ್ರಾಧಿಕಾರದ ಇಂದಿನ ಸಭೆಯಲ್ಲಿ ಕಾವೇರಿ ಕಣಿವೆ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಲಭ್ಯ ನೀರಿನ ಪ್ರಮಾಣ, ಮಳೆ ಮುನ್ಸೂಚನೆ, ಬರ ಪರಿಸ್ಥಿತಿ, ಜಲ ನಿರ್ವಹಣೆ, ನೀರು ಹಂಚಿಕೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗಿದೆ. ಜಲಾಶಯಕ್ಕೆ ಒಳ ಹರಿವು ಅಧಿಕವಾದರೆ ತಮಿಳುನಾಡಿಗೆ ನಿಗದಿಯಂತೆ ನೀರು ಹರಿಸಬೇಕು ಎಂದು ಹೇಳಲಾಗಿದೆ. ತಕ್ಷಣವೇ ನೀರು ಬಿಡುವ ಒತ್ತಡ ಹೇರಿಲ್ಲದ ಕಾರಣ, ಸದ್ಯಕ್ಕೆ ರಾಜ್ಯಕ್ಕೆ ಆತಂಕವಿಲ್ಲ

ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ

ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ

ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ. ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು 14 ಟಿಎಂಸಿ ನೀರಿದ್ದು, ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇದೆ. ಆದರೆ, ಈಗ ಲಭ್ಯ ನೀರಿನ ಪ್ರಮಾಣದಿಂದ ಕುಡಿಯುವ ನೀರಿನ ಪೂರೈಕೆ ಕಷ್ಟವಾಗುತ್ತಿದೆ

English summary
The Cauvery Water Management Authority today directed Karnataka to release water from Cauvery basin reservoirs to Mettur in Tamil Nadu only if state receives good rain in this Monsoon. TN demanded 9.25 TMC, CWMA directed to release 9.19 TMC
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X