Mahakumbh Stampede: ಮಹಾಕುಂಭಮೇಳ ಕಾಲ್ತುಳಿತದಲ್ಲಿ ಗಾಯಗೊಂಡವರ ರಕ್ಷಣೆಗೆ ಅಧಿಕಾರಿಗಳ ನಿಯೋಜನೆ: ಸಿಎಂ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಇಂದು ಕಾಲ್ತುಳಿತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆಯೂ ಇದೆ. ಕಾಲ್ತುಳಿತದಲ್ಲಿ ಕರ್ನಾಟಕದ ಜನರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ ಎಂದಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಸಲಹೆ ನೀಡಿದ್ದಾರೆ.

Karnataka To Bring Back Injured Devotees From Prayagraj Kumbh Mela CM Siddaramaiah

ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆ ಕೋಟ್ಯಂತರ ಮಂದಿ ಪ್ರಯಾಗ್‌ರಾಜ್‌ನಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸಿದ್ದಾರೆ. ಈ ಹಿನ್ನೆಲೆ ದಟ್ಟಣೆ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಈ ಮಹಾಕುಂಭಮೇಳಕ್ಕೆ ಕರ್ನಾಟಕದಿಂದಲೂ ಹಲವರು ತೆರಳಿದ್ದು, ಈ ಪೈಕಿ ಕೆಲವರಿಗೆ ಗಂಭೀರ ಗಾಯಗಳಾಗಿದೆ. ಇನ್ನು ಪ್ರಯಾಗ್‌ರಾಜ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಇಂದು ಸುಮಾರು 10 ಕೋಟಿ ಭಕ್ತರು ಸೇರಿದ್ದಾರೆ. ಸಂಗಮದ ಕಡೆಗೆ ಭಕ್ತರ ಚಲನೆಯಿಂದಾಗಿ ನಿರಂತರ ಒತ್ತಡವಿದ್ದು, ಅಖಾರ ಮಾರ್ಗದಲ್ಲಿ ಬ್ಯಾರಿಕೇಡ್‌ ದಾಟಲು ಪ್ರಯತ್ನಿಸಿದಾಗ ಕೆಲವು ಭಕ್ತರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳಾಂತರಿಸಲಾಗಿದೆ ಎಂದಿದ್ದಾರೆ.

Karnataka To Bring Back Injured Devotees From Prayagraj Kumbh Mela CM Siddaramaiah

ನಿನ್ನೆ ರಾತ್ರಿಯೇ ಮೌನಿ ಅಮಾವಾಸ್ಯೆ ಪ್ರಯುಕ್ತ ಭಕ್ತರು ನೆರೆದಿದ್ದಾರೆ. ಪ್ರಧಾನಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲರು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಂಗಮ, ನಾಗ್ ವಾಸುಕಿ ಮಾರ್ಗ ಮತ್ತು ಸಂಗಮ್ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಇದೆ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ನಾನು ಭಕ್ತರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕುಂಭಮೇಳ ಪ್ರದೇಶದಲ್ಲಿ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರು ಸಂಗಮದ ಕಡೆಗೆ ಮಾತ್ರ ಚಲಿಸುವ ಅಗತ್ಯವಿಲ್ಲ. ಭಕ್ತರು ತಮ್ಮ ಹತ್ತಿರದ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡಬೇಕು. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೆ ಇಲಾಖೆಯು ಭಕ್ತರನ್ನು ಅವರವರ ಸ್ಥಳಗಳಿಗೆ ಹಿಂತಿರುಗಿಸಲು ಪ್ರಯಾಗರಾಜ್ ಪ್ರದೇಶದ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲು ಸೇವೆ ಕಲ್ಪಿಸಿದೆ ಎಂದು ಮಾಹಿತಿ ನೀಡಿದ್ದಾರೆ.

Karnataka To Bring Back Injured Devotees From Prayagraj Kumbh Mela CM Siddaramaiah

ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಕೋಟ್ಯಂತರ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ. ಜನವರಿ 28ರವರೆಗೆ ಒಟ್ಟಾರೆ 19.94 ಕೋಟಿ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಮಾಹಿತಿ ಇಲಾಖೆ ತಿಳಿಸಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆ ಒಂದೇ ದಿನ ಭಕ್ತರ ಸಂಖ್ಯೆ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+