ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೌಕ್ತೆ ಚಂಡಮಾರುತ: ಕರ್ನಾಟಕ, ಕೇರಳದಲ್ಲಿ ಅಬ್ಬರದ ಮಳೆ, ರೆಡ್ ಅಲರ್ಟ್

|
Google Oneindia Kannada News

ಬೆಂಗಳೂರು, ಮೇ 15: ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸುತ್ತಿದ್ದು, ತೀವ್ರ ಗಾಳಿ ಶುರುವಾಗಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

Recommended Video

ಕೊರೊನ ಗೆದ್ದ ಕೇರಳಕ್ಕೆ ಎದುರಾಯ್ತು ತೌಕ್ತೆ ಚಂಡಮಾರುತ | Oneindia Kannada

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೌಕ್ತೆ ಚಂಡಮಾರುತ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ಅಪ್ಪಳಿಸಲಿದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮಲೆನಾಡು ಭಾಗಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕೆಲವು ಕಡೆಗಳಲ್ಲಿ 20 ಸೆಂಟಿ ಮೀಟರ್ ಗಳಿಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ.

ವಿಮಾನ ಹಾರಾಟದಲ್ಲಿ ವ್ಯತ್ಯಯ: ಅರಬ್ಬಿ ಸಮುದ್ರ ತೀರದಲ್ಲಿ ಪ್ರತಿಕೂಲ ಹವಾಮಾನದಿಂದ ಚೆನ್ನೈ, ತಿರುವನಂತಪುರ, ಕೊಚ್ಚಿ, ಬೆಂಗಳೂರು, ಮುಂಬೈ. ಪುಣೆ, ಗೋವಾ ಮತ್ತು ಅಹ್ಮದಾಬಾದ್ ಗಳಿಗೆ ಹೋಗುವ ಮತ್ತು ಬರುವ ವಿಮಾನ ಹಾರಾಟಕ್ಕೆ ಮೇ 17ರವರೆಗೆ ವ್ಯತ್ಯಯವಾಗಲಿದೆ.

ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೌಕ್ತೆ ಚಂಡಮಾರುತ ಎದ್ದಿದೆ. ಕೇರಳದ ಹಲವು ಜಿಲ್ಲೆಗಳಲ್ಲಿ ಅಪಾರ ಸಾವು-ನೋವು ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ದೇಶದ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದಾರೆ.

ತೌಕ್ತೆ ಚಂಡಮಾರುತ ತನ್ನ ಪ್ರಭಾವವನ್ನು ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಕೂಡ ಪ್ರಧಾನಿ ಪರಾಮರ್ಶೆ ನಡೆಸಲಿದ್ದು ಸರ್ಕಾರದ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ಜೋರು ಮಳೆ

ಬೆಂಗಳೂರಿನಲ್ಲಿ ಜೋರು ಮಳೆ

ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ನಾಡಿದ್ದು 18ರಂದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಗಾಳಿ ಗಂಟೆಗೆ 150-160 ಕಿ.ಮೀ ವೇಗದಲ್ಲಿ ಬೀಸಲಿದೆ

ಗಾಳಿ ಗಂಟೆಗೆ 150-160 ಕಿ.ಮೀ ವೇಗದಲ್ಲಿ ಬೀಸಲಿದೆ

ತೌಕ್ತೆ ಚಂಡಮಾರುತ ಈ ವರ್ಷದ ಮೊದಲ ಚಂಡಮಾರುತವಾಗಿದ್ದು ಗಂಟೆಗೆ 150ರಿಂದ 160 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಿ ಅದು 175 ಕಿಲೋ ಮೀಟರ್ ವೇಗವನ್ನು ಕೂಡ ಪಡೆಯುವ ಸಾಧ್ಯತೆಯಿದೆ. ನಿನ್ನೆ ಕೇರಳದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿರುವುದಲ್ಲದೆ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿದೆ.

ಮಂಗಳೂರಿನಲ್ಲಿ ಮಳೆ

ಮಂಗಳೂರಿನಲ್ಲಿ ಮಳೆ

ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಮಂಗಳೂರಿನಾದ್ಯಂತ ಸುರಿಯುತ್ತಿದೆ. ರಾಜ್ಯ ಹವಾಮಾನ ಇಲಾಖೆ ಇನ್ನು ಮೂರು ದಿನಗಳ ಕಾಲ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ರಕ್ಷಣೆಗೆ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಧಾವಿಸಿದೆ.

ಕೇರಳದಲ್ಲಿ ಇಬ್ಬರು ಸಾವು

ಕೇರಳದಲ್ಲಿ ಇಬ್ಬರು ಸಾವು

ಸಮುದ್ರದಲ್ಲಿ ಉಬ್ಬರವಿಳಿತದ ಅಲೆಗಳು ಒಂದು ಮೀಟರ್ ಎತ್ತರಕ್ಕೆ ಏರಿಕೆಯಾಗಿತ್ತು. ಜಿಲ್ಲಾಡಳಿತಗಳು ಕೇರಳದಲ್ಲಿ ಕರಾವಳಿ ಪ್ರದೇಶಗಳಲ್ಲಿನ ಅನೇಕ ಕುಟುಂಬಗಳನ್ನು ಸ್ಥಳಾಂತರಿಸಿವೆ.ಕೆಲವೆಡೆ ಚಂಡಮಾರುತದ ಮಳೆಯಿಂದ ಮನೆಗಳು ಬಹುತೇಕ ಹಾನಿಗೀಡಾಗಿವೆ.

ತೀವ್ರ ಮಳೆಗೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಕಿಝಕ್ಕೆದತುವಿನ ಮಧುಸೂದನ್ ಅವರ ಮಗ 19 ವರ್ಷದ ಆದರ್ಶ್ ಕೆ ಎಂ ಕೋಳಿಕ್ಕೋಡಿನ ಚೆನೊತ್ ನದಿಯಲ್ಲಿ ಸ್ನಾನ ಮಾಡುವಾಗ ಅಲೆಗೆ ಸಿಕ್ಕಿ ಮೃತಪಟ್ಟಿದ್ದಾರೆ. ಎರ್ನಾಕುಲಂನ ಚೆನ್ನನಂನಲ್ಲಿ ನೀರು ತುಂಬಿದ ಪ್ರದೇಶದಲ್ಲಿ ವಯೋವೃದ್ಧನ ಮೃತದೇಹವೊಂದು ತೇಲಿಕೊಂಡು ಬಂದಿದೆ.

ಎಲ್ಲೆಲ್ಲಿ ಮಳೆಯಾಗಲಿದೆ

ಎಲ್ಲೆಲ್ಲಿ ಮಳೆಯಾಗಲಿದೆ

ಕೇರಳದ ಮಲ್ಲಪುರಂ, ಕೋಳಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ ಮತ್ತು ಪಾಲಕ್ಕಾಡ್ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ತೀವ್ರ ಮಳೆಯಾಗಲಿದೆ.

ದೆಹಲಿ, ಪಾಲ್ವಾಲ್, ಹೊಡಾಲ್, ಮನೇಸರ್, ಗುರುಗ್ರಾಮ್, ಫರಿದಾಬಾದ್, ಟಿಜಾರಾ, ಬುಲಂದ್‌ಶಹರ್, ಗುಲೋತಿ, ಸಿಯಾನಾ, ಜಟ್ಟಾರಿ, ಖುರ್ಜಾ, ಅತ್ರೌಲಿ, ಅಲಿಗಢ್, ಸದಾಬಾದ್, ಖೈರ್, ನೋಯ್ಡಾ, ಗ್ರೇಟರ್ ನೊಯ್ಡಾ, ಗಾಜಿಯಾಬಾದ್, ಪಿಲ್ಖುವಾ, ಹಾಪುರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಇನ್ನೆರಡು ಗಂಟೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕೇರಳದಲ್ಲಿ ಕುಟುಂಬಗಳ ಸ್ಥಳಾಂತರ

ಕೇರಳದಲ್ಲಿ ಕುಟುಂಬಗಳ ಸ್ಥಳಾಂತರ

ಮಲಪ್ಪುರಂನ ಪೊನ್ನಾನಿಯಲ್ಲಿ ಸುಮಾರು 50 ಮನೆಗಳಿಗೆ ನೀರು ನುಗ್ಗಿವೆ. ಕೊಡುಂಗಲ್ಲೂರಿನಲ್ಲಿ ಸುಮಾರು 100 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಬೈಪೊರೆ-ಗೋತೀಶ್ವರಂ ಸಮುದ್ರ ತೀರ ರಸ್ತೆ ಕೋಝಿಕ್ಕೋಡಿನಲ್ಲಿ ಹಾನಿಗೀಡಾಗಿವೆ.

ವಾಯುಭಾರ ಕುಸಿತ ತೀವ್ರಗೊಂಡ ಚಂಡಮಾರುತ ಅಬ್ಬರ ಮುಂದಿನ 12 ಗಂಟೆಗಳಲ್ಲಿ ಹೆಚ್ಚಲಿದ್ದು, ಉತ್ತರ-ವಾಯುವ್ಯ ಮತ್ತು ಮಂಗಳವಾರ ಬೆಳಿಗ್ಗೆ ಗುಜರಾತ್ ಕರಾವಳಿಗೆ ತಲುಪುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ಕೇರಳದಲ್ಲಿ ತೀವ್ರ ಮಳೆಯಾಗಲಿದೆ.

English summary
Cyclone Tauktae: The India Meteorological Department (IMD) has identified a cyclonic circulation currently located over Southeast Arabian Sea which is very likely to form a low pressure area in the next 24 hours. Karnataka To Witness Heavy To Veru Heavy Rains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X