ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರಿ ಮಳೆ ಸಾಧ್ಯತೆ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

|
Google Oneindia Kannada News

ನವದೆಹಲಿ, ಜೂನ್ 20: ದೇಶದ ಹಲವು ಭಾಗಗಳಲ್ಲಿ ಮುಂಗಾರು ಆರ್ಭಟ ಶುರುವಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಮಳೆಗೆ ಜನ ಜೀವನ ತತ್ತರಿಸಿದೆ, ಹಲವುನದಿಗಳು ಉಕ್ಕಿಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಈ ನಡುವೆಯೇ ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ನಗರಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಗುಜರಾತ್ ಪ್ರದೇಶದ ಕೆಲವು ಭಾಗಗಳು, ಮಧ್ಯಪ್ರದೇಶ, ವಿದರ್ಭದ ಉಳಿದ ಭಾಗಗಳು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಮತ್ತಷ್ಟು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷೆಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷೆ

ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಭಾರತ ಮತ್ತು ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಳೆಯ ಪ್ರಮಾಣ ತೀವ್ರವಾಗುವ ಸಾಧ್ಯತೆಯಿದೆ ಮತ್ತು ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅದು ಹೇಳಿದೆ.

ಮುಂದಿನ ಐದು ದಿನಗಳವರೆಗೆ ಪುದುಚೇರಿ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 22ರವರೆಗೆ ಕರ್ನಾಟಕದಲ್ಲಿ ಉತ್ತಮ ಮಳೆ

ಜೂನ್ 22ರವರೆಗೆ ಕರ್ನಾಟಕದಲ್ಲಿ ಉತ್ತಮ ಮಳೆ

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಕೊಡಗು, ತುಮಕೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಚಿತ್ರದುರ್ಗದಲ್ಲಿ ಜೂನ್ 22 ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮುಂಬೈಗೆ ಆರೆಂಜ್ ಅಲರ್ಟ್, ದೆಹಲಿಯಲ್ಲಿ ಸಾಧಾರಣ ಮಳೆ

ಮುಂಬೈಗೆ ಆರೆಂಜ್ ಅಲರ್ಟ್, ದೆಹಲಿಯಲ್ಲಿ ಸಾಧಾರಣ ಮಳೆ

ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುಂಬೈ, ಪಾಲ್ಘರ್, ಥಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಸೂಚಿಸುವ ಆರೆಂಜ್ ಅಲರ್ಟ್ ನೀಡಿದೆ. ಭಾರಿ ಮಳೆಯಾಗುವ ಕಾರಣ ಎಚ್ಚರಿಕೆ ವಹಿಸಬೇಕು ಎಂದು ಮುಂಬೈನ ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಲಘು ಮಳೆಯಾಗಬಹುದು ಎಂದು ಐಎಂಡಿ ಹೇಳಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಪ್ರತಿ ಗಂಟೆಗೆ ಸುಮಾರು 30-40 ಕಿಲೋ ಮೀಟರ್ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುತ್ತದೆ ಎಂದು ಹೇಳಿದೆ.

ಉತ್ತರ ಬಂಗಾಳ, ಸಿಕ್ಕಿಂನಲ್ಲಿ ಭಾರೀ ಮಳೆ, ಭೂಕುಸಿತ ಸಾಧ್ಯತೆ: IMD ಎಚ್ಚರಿಕೆಉತ್ತರ ಬಂಗಾಳ, ಸಿಕ್ಕಿಂನಲ್ಲಿ ಭಾರೀ ಮಳೆ, ಭೂಕುಸಿತ ಸಾಧ್ಯತೆ: IMD ಎಚ್ಚರಿಕೆ

ತಮಿಳುನಾಡು, ಪುದುಚೆರಿಯ ಹಲವೆಡೆ ಮಳೆ

ತಮಿಳುನಾಡು, ಪುದುಚೆರಿಯ ಹಲವೆಡೆ ಮಳೆ

ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೀಲಗಿರಿ, ಕೊಯಮತ್ತೂರು, ತಿರುಪುರ್, ದಿಂಡಿಗಲ್, ಥೇಣಿ, ಈರೋಡ್, ಕೃಷ್ಣಗಿರಿ, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರ್, ತಿರುಚಿನಾಪಲ್ಲಿ, ಪೆರಂಬೂರ್, ತಿರುವಣ್ಣಾಮಲೈ, ಕಲ್ಲಕುರಿಚಿ, ತಿರುಪತ್ತೂರ್‌ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ತಿಳಿಸಿದೆ.

ಅಸ್ಸಾಂನಲ್ಲಿ ಆರೆಂಜ್‌ ಅಲರ್ಟ್ ಘೋಷಣೆ

ಅಸ್ಸಾಂನಲ್ಲಿ ಆರೆಂಜ್‌ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು ಅಸ್ಸಾಂನಲ್ಲಿ ಸೋಮವಾರ 'ಆರೆಂಜ್ ಅಲರ್ಟ್' ನೀಡಿದ್ದು, ಮಂಗಳವಾರದಿಂದ ಗುರುವಾರದವರೆಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ನಂತರದ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹೇಳಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್‌ಡಿಎಂಎ) ದೈನಂದಿನ ಪ್ರವಾಹ ವರದಿಯ ಪ್ರಕಾರ, ಕನಿಷ್ಠ 42,28,100 ಜನ ಪ್ರವಾಹದಿಂದ ತೊಂದರೆಗೀಡಾಗಿದ್ದಾರೆ ಎಂದು ತಿಳಿಸಿದೆ.

ರಾಜಸ್ಥಾನದಲ್ಲೂ ಸಾಧಾರಣ ಮಳೆ ಸಾಧ್ಯತೆ

ರಾಜಸ್ಥಾನದಲ್ಲೂ ಸಾಧಾರಣ ಮಳೆ ಸಾಧ್ಯತೆ

ರಾಜಸ್ಥಾನದ ಕೆಲವು ಭಾಗಗಳಲ್ಲಿ ಮುಂಗಾರು ಪೂರ್ವ ತುಂತುರು ಮಳೆಯಾಗುತ್ತದೆ, ಬಿಕಾನೇರ್ ಮತ್ತು ಅಜ್ಮೀರ್ ವಿಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಕೋಟಾ, ಅಜ್ಮೀರ್, ಉದಯಪುರ ಮತ್ತು ಬಿಕಾನೇರ್ ವಿಭಾಗಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ. ಪಶ್ಚಿಮ ರಾಜಸ್ಥಾನದಲ್ಲಿ ಜೂನ್ 23 ರಿಂದ ಹವಾಮಾನ ಶುಷ್ಕವಾಗಿರುತ್ತದೆ ಎಂದು ತಿಳಿಸಿದೆ.

English summary
The India Meteorological Department issued Orange alert to Assam and Mumbai, Several States Include Karnataka will receive more rain in next few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X