ಜಮ್ಮು, ಕಾಶ್ಮೀರದಲ್ಲಿ ಎನ್‌ಕೌಂಟರ್: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಶ್ರೀನಗರ, ಡಿ. 20: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್ ಎ ತೈಯಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಮೂವರು ಉಗ್ರರು ಸ್ಥಳೀಯ ನೇಮಕಾತಿಗಳಾಗಿದ್ದು, ಅವರಲ್ಲಿ ಇಬ್ಬರು ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ನಡೆದ ಇಬ್ಬರು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರಲ್ಲಿ ಒಬ್ಬನಾದ ಲತೀಫ್ ಲೋನ್ ಕಾಶ್ಮೀರಿ ಪಂಡಿತ ಪುರಾಣ ಕೃಷ್ಣ ಭರತ್ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪೊಳಿಸರು ಮಾಹಿತಿ ನೀಡಿದ್ದಾರೆ. ಮತ್ತೊಬ್ಬ ಉಗ್ರ ಉಮರ್ ನಜೀರ್ ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆ ಮುಂಜೆ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಒಂದು ರೈಫಲ್ ಮತ್ತು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
"ಮೂವರು ಸ್ಥಳೀಯ ಭಯೋತ್ಪಾದಕರಲ್ಲಿ, ಇಬ್ಬರನ್ನು ಗುರುತಿಸಲಾಗಿದೆ. ಅವರಲ್ಲಿ ಶೋಪಿಯಾನ್‌ನ ಲತೀಫ್ ಲೋನ್ ಎಂಬುವವರು ಕಾಶ್ಮೀರಿ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ. ಮತ್ತೊಬ್ಬ ಅನಂತನಾಗ್ ಪ್ರದೇಶದ ಉಮರ್ ನಜೀರ್ ಎಂಬುವವನು ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ. ಘಟನೆಯಲ್ಲು1 ಎಕೆ 47 ರೈಫಲ್ ಮತ್ತು 2 ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ" ಎಂದು ಕಾಶ್ಮೀರ ಎಡಿಜಿಪಿ ಮಾಹಿತಿ ನೀಡಿರುವುದಾಗಿ ಪೊಲೀಸ್ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಕಳೆದ ವರ್ಷದಿಂದ ಕಾಶ್ಮೀರದಲ್ಲಿ ಹತ್ಯೆಗಳ ಸರಣಿ ನಡೆಯುತ್ತಿದೆ. ಇದರಲ್ಲಿ ಬಲಿಯಾದವರು ಹೆಚ್ಚಿನವರು ವಲಸೆ ಕಾರ್ಮಿಕರು ಅಥವಾ ಕಾಶ್ಮೀರ ಪಂಡಿತರು ಎನ್ನಲಾಗಿದೆ. ಇತ್ತೀಚಿನ ಇಂತಹದ್ದೇ ಘಟನೆಯಲ್ಲಿ ಕಳೆದ ವಾರ ಇಬ್ಬರು ನಾಗರಿಕರು ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.












Click it and Unblock the Notifications