ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ, ಪ್ರವಾಹ ಸಾಧ್ಯತೆ
ಶ್ರೀನಗರ, ಜೂನ್ 30: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹ ಭೀತಿ ಆರಂಭವಾಗಿದೆ. ರಾಜ್ಯದಾದ್ಯಂತ ಮುನ್ನೆಚ್ಚರಿಕೆ ದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಒಂದೇ ಸಮನೇ ಮಳೆ ಸುರಿಯುತ್ತಲೇ ಇದೆ. ಹವಾಮಾನ ಇಲಾಖೆ ಮೊದಲೇ ಮುನ್ಸೂಚನೆ ನೀಡಿದ್ದರಿಂದ ಈಗಾಗಲೇ ಸಾಕಷ್ಟುಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಶ್ರೀನಗರ ಡೆಪ್ಯುಟಿ ಕಮಿಶ್ನರ್ ಸಯ್ಯದ್ ಅಬಿದ್ ಶಾ ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಈಗ ರಾಜ್ಯಪಾಲರ ಆಳ್ವಿಕೆ ಇರುವುದರಿಂದ, ರಾಜ್ಯದಲ್ಲಿ ಎದ್ದಿರುವ ಪ್ರವಾಹ ಸ್ಥಿತಿಯನ್ನು ನಿರ್ವಹಿಸುವ ಕುರಿತಂತೆ ರಾಜ್ಯಪಾಲ ಎನ್ ಎನ್ ವೋಹ್ರಾ ತುರ್ತು ಸಭೆ ಕರೆದಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಜೂನ್ 28 ರಿಂದ ಆರಂಭವಾಗಿರುವ ಅಮರನಾಥ ಯಾತ್ರೆ ಸಹ ಮಳೆಯ ಕಾರಣ ಆಗಾಗ ಸ್ಥಗಿತಗೊಳ್ಳುತ್ತಿದೆ.












Click it and Unblock the Notifications