ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕತುವಾ ಪ್ರಕರಣ: ಸಂತ್ರಸ್ಥೆ ಕುಟುಂಬದ ವಕೀಲರಿಗೆ ಕೊಲೆ ಬೆದರಿಕೆ

|
Google Oneindia Kannada News

ಶ್ರೀನಗರ, ಏಪ್ರಿಲ್ 16: ದೇಶದಾದ್ಯಂತ ಕಿಚ್ಚು ಹೊತ್ತಿಸಿರುವ ಜಮ್ಮು ಕಾಶ್ಮೀರದ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯ ಕುಟುಂಬದ ಪರ ವಕಾಲತ್ತು ವಹಿಸಿದ್ದ ವಕೀಲರಿಗೆ ಕೊಲೆ ಬೆದರಕೆ ಕರೆಗಳು ಬಂದಿವೆ.

ಕತುವಾ ಪ್ರಕರಣ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ: 90 ದಿನಗಳ ಗಡುವುಕತುವಾ ಪ್ರಕರಣ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ: 90 ದಿನಗಳ ಗಡುವು

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲೆ ದೀಪಿಕಾ ಎಸ್ ರಾಜಾವತ್, "ನಾನು ಅಪಾಯದಲ್ಲಿದ್ದೇನೆ. ನನ್ನನ್ನು ಯಾವಾಗ ಬೇಕಾದರೂ ಅತ್ಯಾಚಾರ ಮಾಡಬಹುದು, ಕೊಲ್ಲಬಹುದು. ನನಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡುತ್ತಿದ್ದಾರೆ" ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಜಮ್ಮುವಿನ ಬಾರ್ ಅಸೋಸಿಯೇಶನ್ ಅಧ್ಯಕ್ಷ ಬಿ ಎಸ್ ಸ್ಲಾಥಿಯಾ ಅವರು ಸಹ ಕೋರ್ಟಿನಲ್ಲಿ ಬಹಿರಂಗವಾಗಿಯೇ ತಮಗೆ ಬೆದರಿಕೆ ಒಡ್ಡಿದ್ದರು ಎಂದು ದೀಪಿಕಾ ಆರೋಪಿಸಿದ್ದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

Kathua rape and mudrer case: life threat to voctims family lawyer

ಜನವರಿ ತಿಂಗಳಿನಲ್ಲಿ ಕತುವಾದ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ ದೇವಾಲಯವೊಂದರಲ್ಲಿ ಮತ್ತು ಬರುವ ಔಷಧ ನೀಡಿ ನಿರಂತರವಾಗಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಮುಗ್ಧ ಬಾಲಕಿಯನ್ನು ಕೊಲೆ ಮಾಡಲಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು 90 ದಿನಗಳೊಳಗೆ ಇತ್ಯರ್ಥಗೊಳಿಸಿ, ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವಂತೆ ಜಮ್ಮು-ಕಾಶ್ಮೀರ ಸರ್ಕಾರ ತ್ವರಿತ ನ್ಯಾಯಾಲಯವನ್ನು ರಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಮ್ಮು ಕಾಶ್ಮೀರದ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ.

English summary
Deepika S Rajawat, the lawyer representing Kathua rape and murder victim's family in JK, said she doesn't know how long she will live, while adding she can be "raped", "killed" or "damaged". Claiming she is in danger, Deepika said she was told she will not be forgiven.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X