ಕತುವಾ ಅತ್ಯಾಚಾರ ಪ್ರಕರಣ : ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನವದೆಹಲಿ, ಜೂನ್ 10 : ಕತುವಾ ಅತ್ಯಚಾರ ಪ್ರಕರಣದ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ ಅಪರಾಧಿಗಳ ಶಿಕ್ಷ ಪ್ರಮಾಣವನ್ನು ಸೋಮವಾರ ಪ್ರಕಟಿಸಲಾಗಿದೆ.

ಪಟಾನ್ ಕೋಟ್ ನ್ಯಾಯಾಲಯ ಅಪರಾಧಿಗಳಾದ ಸಂಜಿರಾಮ್, ಪರವೇಶ್ ಕುಮಾರ್, ದೀಪಕ್ ಕಜಾರಿಯಾ ಅವರು ಪ್ರಕರಣದಲ್ಲಿ ದೋಷಿಗಳೆಂದು ತೀರ್ಪು ನೀಡಿದೆ. ಎಲ್ಲಾ ಮೂರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Kathua rape and murder case : Three gets life imprisonment

ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಸಂಜಿರಾಮ್ ಪುತ್ರ ವಿಶಾಲ್‌ನನ್ನು ಪ್ರಕರಣದಿಂದ ಕೈ ಬಿಡಲಾಗಿದೆ. ಘಟನೆ ನಡೆದ ಅವಧಿಯಲ್ಲಿ ನಾನು ಉತ್ತರ ಪ್ರದೇಶಕ್ಕೆ ಪರೀಕ್ಷ ಬರೆಯಲು ಹೋಗಿದ್ದೆ ಎಂದು ಆತ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದ.

ಜೂನ್ 3ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಸೋಮವಾರಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿರುವ ನ್ಯಾಯಾಲಯ 6 ಮಂದಿ ದೋಷಿಗಳು ಎಂದು ಹೇಳಿದೆ. ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ದೇಶವನ್ನು ಬೆಚ್ಚಿ ಬೀಳಿಸಿತ್ತು. ಮುಸ್ಲಿಂ ಬುಡಕಟ್ಟು ಅಲೆಮಾರಿ ಜನಾಂಗಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ನಿರಂತರವಾಗಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಚಿತ್ರಹಿಂಸೆ ಕೊಟ್ಟು ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು.

ಜನವರಿ 10ರಂದು ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿಯ ಶವ ಜನವರಿ 17ರಂದು ಕಾಡಿನಲ್ಲಿ ಪತ್ತೆಯಾಗಿತ್ತು. ಮೊದಲು ಸ್ಥಳೀಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸಿದ್ದರು. ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬಳಿಕ ತನಿಖೆಯನ್ನು ಅಪರಾಧ ದಳಕ್ಕೆ ವರ್ಗಾವಣೆ ಮಾಡಲಾಗಿತ್ತು.

ಪ್ರಕರಣದಲ್ಲಿ ಅಪರಾಧಿಯಾಗಿರುವ ಸಂಜಿರಾಮ್ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿ. ಮಾರ್ಚ್ 20ರಂದು ಈತ ಪೊಲೀಸರ ಮುಂದೆ ಶರಣಾಗಿದ್ದ. ಬಳಿಕ ಪೊಲೀಸರು ಸಂಜಿರಾಮ್ ಪುತ್ರ ವಿಶಾಲ್, ಸೋದರಳಿಯ ಆನಂದ್ ದತ್ತಾ, ಪೊಲೀಸ್ ಸಿಬ್ಬಂದಿಗಳಾದ ದೀಪಕ್ ಖಜಾರಿಯಾ, ಸುರೇಂದ್ರ ವರ್ಮಾ ಸೇರಿದಂತೆ 7 ಆರೋಪಿಗಳನ್ನು ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+