ಕತುವಾ ದುರಂತದ ಕಾಮುಕರಿಗೆ ಬೆಂಬಲ: ಬಿಜೆಪಿ ಸಚಿವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 14: ಭಾರತವನ್ನು ಆತಂಕದಲ್ಲಿ ತಳ್ಳಿರುವ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಪರವಾಗಿ ನಡೆದ rally ಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೊದಿ ಸೂಚಿಸಿದ್ದಾರೆಂದು ಬಿಜೆಪಿ ರಾಷ್ಟ್ರೀಯ ವಕ್ತಾರ ರಾಮ್ ಮಾಧವ್ ಹೇಳಿದ್ದಾರೆ.

ಕಾಮುಕರಿಗೆ ಬಲಿಯಾದ ಮುಗ್ಧ ಬಾಲಕಿ ಪರ ಒಗ್ಗೂಡಿದ ಧ್ವನಿ

ಜನವರಿ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ಕತುವಾ ಎಂಬಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಆದರೆ ಇವರ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಎಂದು ಖಂಡಿಸಿ ನಡೆದ rally ಯಲ್ಲಿ ಬಿಜೆಪಿಯ ಇಬ್ಬರು ಸಚಿವರು ಸಹ ಕಅಣಿಸಿಕೊಂದಿದ್ದು ವಿವಾದ ಸೃಷ್ಟಿಸಿತ್ತು.

ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಪ್ರಿಲ್ 13 ರಂದು ಈ ಇಬ್ಬರು ಸಚಿವರಾದ ಚಂದ್ರ ಪ್ರಕಾಶ್ ಗಂಗಾ ಮತ್ತು ಲಾಲ್ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರೇ, ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ರಾಮ್ ಮಾಧವ್ ತಿಳಿಸಿದ್ದಾರೆ.

Kathua rape: Modi advises action against BJP ministers who attended rally in JK

ಜನವರಿಯಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಹಲವು ದಿನಗಳ ಕಾಲ ಹತ್ತಿರದ ಮಂದಿರವೊಂದರಲ್ಲಿ ಇರಿಸಿ, ಆಕೆಗೆ ಮತ್ತು ಬರುವ ಔಷಧ ನೀಡಿ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಕೃತ್ಯಕ್ಕೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ. 60 ವರ್ಷದ ಸರ್ಕಾರಿ ನೌಕರ, ಪೊಲೀಸ್ ಅಧಿಕಾರಿ ಸೇರಿದಂತೆ ಹಲವರು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆಂಬ ಶಂಕೆಯ ಮೇಲೆ ಅವರೆಲ್ಲರನ್ನೂ ಬಂಧಿಸಲಾಗಿದ್ದು, ತನಿಖೆಗಾಗಿ ಜಮ್ಮು-ಕಾಶ್ಮೀರದ ಮೆಹಬೂಬಾ ಮುಫ್ತಿ ಸರ್ಕಾರ ವಿಶೇಷ ತನಿಖಾ ತಂಡ(SIT)ವನ್ನು ರಚಿಸಿದೆ. ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂಬ ಕೂಗೂ ಕೇಳಿಬರುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kathua rape and murder case: After two BJP leaders who attended a rally supporting the rape-accused in the Kathua rape case resigned, BJP General Secretary Ram Madhav said PM Narendra Modi had recommended action against them to send a message to people.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ