ಸಿದ್ಧಾರ್ಥನಗರದಲ್ಲಿ 6 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ
ಸಿದ್ಧಾರ್ಥನಗರ, ಏಪ್ರಿಲ್ 19: ಕತುವಾ ಮತ್ತು ಉನ್ನಾವೋ ಅತ್ಯಾಚಾರ ಪ್ರಕರಣಗಳು ದೇಶವನ್ನು ತಲ್ಲಣಿಸುತ್ತಿರುವಾಗ ಅಂಥದೇ ಇನ್ನೊಂದು ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ.
ಸಿದ್ಧಾರ್ಥನಗರ ಪ್ರದೇಶದಲ್ಲಿ ಆಟವಾಡುತ್ತಿದ್ದ ಆರು ವರ್ಷದ ಪುಟ್ಟ ಬಾಲಕಿಯನ್ನು ಕಾಮುಕನೊಬ್ಬ ಹತ್ತಿರದ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಆಕೆಯನ್ನು ಸ್ಥಳೀಯರು ಗುರುತಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ದೇಶದಾದ್ಯಂತ ಆತಂಕ ಸೃಷ್ಟಿಯಾಗಿದೆ.

ಜಮ್ಮು ಕಾಶ್ಮೀರದ ಕತುವಾದಲ್ಲಿ ಜನವರಿ ತಿಂಗಳಿನಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಹಲವು ದಿನಗಳ ಕಾಲ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು.
ಉನ್ನಾವೋದಲ್ಲಿ ಕಳೆದ ಜೂನ್ ನಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣದಲ್ಲಿ ಇಲ್ಲಿನ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೇನ್ಗಾರ್ ಸಹ ಶಾಮೀಲಾಗಿದ್ದಾರೆ ಎಂದು ಸ್ವತಃ ಸಂತ್ರಸ್ಥೆಯೇ ಆರೋಪಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.












Click it and Unblock the Notifications