• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರ ರಾಜಕಾರಣಕ್ಕೆ ಸೈ ಎಂದ ಕೆಸಿಆರ್; ಟಿಆರ್‌ಎಸ್ ರಾಷ್ಟ್ರೀಯ ಪಕ್ಷ ಘೋಷಣೆಗೆ ಕ್ಷಣಗಣನೆ

|
Google Oneindia Kannada News

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ರಾಷ್ಟ್ರ ರಾಜಕಾರಣಕ್ಕೆ ಬರಲು ಸಿದ್ಧರಾಗಿದ್ದಾರೆ. ಬುಧವಾರದಂದು ದಸರಾ ಸಂದರ್ಭದಲ್ಲಿ ಅವರು ರಾಷ್ಟ್ರೀಯ ಪಕ್ಷ 'ಭಾರತೀಯ ರಾಷ್ಟ್ರ ಸಮಿತಿ'ಯನ್ನು ಘೋಷಿಸಲಿದ್ದಾರೆ. ಇದಾದ ಬಳಿಕ ವರ್ಷಾಂತ್ಯದಲ್ಲಿ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಸಭೆ ನಡೆಸಲು ಪ್ಲಾನ್ ಸಿದ್ದ ಮಾಡಿಕೊಂಡಿರುವುದು ಹೇಳಿದ್ದಾರೆ. ಇತ್ತೀಚೆಗಷ್ಟೇ ಕೆಸಿಆರ್ ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿಗಳು ಹಾಗೂ ದೊಡ್ಡ ರಾಜಕೀಯ ಮುಖಂಡರನ್ನು ಭೇಟಿ ಮಾಡಿದ್ದರು.

ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ ರಾಷ್ಟ್ರೀಯ ಪಕ್ಷವಾಗಿ ಪ್ರಾದೇಶಿಕ ಪಕ್ಷ ಬೇರೆ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸಬಹುದಾದ್ದರಿಂದ ಪಕ್ಷವು ಬೇರೆ ರಾಜ್ಯಗಳಲ್ಲೂ ಚುನಾವಣೆಗೆ ಸ್ಪರ್ಧಿಸಲಿದೆ. 2024ರ ಲೋಕಸಭೆ ಚುನಾವಣೆಗೆ ಪಕ್ಷವು ಹಲವು ರಾಜ್ಯಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಮಾಧ್ಯಮ ವರದಿಗಳಲ್ಲಿ ಮೂಲಗಳು ತಿಳಿಸಿವೆ.

 ಈಗ

ಈಗ "ಟಿಆರ್‌ಎಸ್ ಪಕ್ಷದ ಹೆಸರು ಭಾರತೀಯ ರಾಷ್ಟ್ರ ಸಮಿತಿ"

ಹೈದರಾಬಾದ್‌ನಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಬುಧವಾರ (ಇಂದು) ರಾಷ್ಟ್ರೀಯ ಪಕ್ಷವನ್ನು ಘೋಷಿಸಲಾಗುವುದು. ಕಾರ್ಯಕ್ರಮದಲ್ಲಿ ಟಿಆರ್‌ಎಸ್ ಮುಖಂಡರು, ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು ಮತ್ತು ಜಿಲ್ಲಾ ಮಟ್ಟದ ಸಂಯೋಜಕರು ಭಾಗವಹಿಸಲಿದ್ದಾರೆ. ತೆಲಂಗಾಣ ರಾಜ್ಯ ಯೋಜನಾ ಮಂಡಳಿಯ ಅಧ್ಯಕ್ಷ ಮತ್ತು ಮಾಜಿ ಸಂಸದ ಬಿ ವಿನೋದ್ ಕುಮಾರ್, "ಟಿಆರ್‍‌ಎಸ್‌ ಹೆಸರನ್ನು ಭಾರತೀಯ ರಾಷ್ಟ್ರ ಸಮಿತಿ (ಬಿಆರ್‍‌ಎಸ್‌) ಎಂದು ಬದಲಾಯಿಸುವ ಬಗ್ಗೆ ಸಿಎಂ ಘೋಷಿಸುತ್ತಾರೆ" ಎಂದು ತಿಳಿಸಿದ್ದಾರೆ.

 ಕೆಸಿಆರ್ ಯೋಜನೆಗಳು ಏನು?

ಕೆಸಿಆರ್ ಯೋಜನೆಗಳು ಏನು?

ರೈತರು, ದಲಿತ ಸಮುದಾಯದ ಕಲ್ಯಾಣಕ್ಕಾಗಿ ಕೆಸಿಆರ್ ಯೋಜನೆ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ ದೇಶದಲ್ಲಿ ಕೋಮು ಸೌಹಾರ್ದತೆ ಹಾಗೂ ಸಹಿಷ್ಣುತೆಯ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇದರೊಂದಿಗೆ ನೀರಿನ ಬಗ್ಗೆಯೂ ಯೋಜನೆ ಸಿದ್ಧಪಡಿಸುತ್ತಿದ್ದಾರೆ. ಅನೇಕ ಪ್ರದೇಶಗಳು ನೀರಾವರಿ ಮತ್ತು ಕುಡಿಯುವ ನೀರಿಗೆ ನೀರಿನ ಕೊರತೆಯನ್ನು ಎದುರಿಸುತ್ತಿವೆ ಎಂದು ಅವರು ಹೇಳುತ್ತಾರೆ. ಕೇಂದ್ರದಲ್ಲಿ ಬಿಜೆಪಿಯೇತರ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ.

 ಬಿಜೆಪಿ ಜೊತೆ ಹೋರಾಟ

ಬಿಜೆಪಿ ಜೊತೆ ಹೋರಾಟ

ತೆಲಂಗಾಣದಲ್ಲಿ ತಮ್ಮ ಚುನಾವಣಾ ಕದನ ಈಗ ಬಿಜೆಪಿಯೊಂದಿಗೆ ಎಂಬುದು ಕೆಸಿಆರ್‌ಗೆ ತಿಳಿದಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಬಿಜೆಪಿ ತನ್ನ ಹೆಜ್ಜೆ ಗುರುತುಗಳನ್ನು ವೇಗವಾಗಿ ವಿಸ್ತರಿಸುತ್ತಿದೆ. ತೆಲಂಗಾಣದಲ್ಲಿ ಕೆಸಿಆರ್ ಬಿಜೆಪಿಯಿಂದ ಸವಾಲು ಎದುರಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದಿಂದ ಬಿಜೆಪಿಯನ್ನು ಸುತ್ತುವರಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಸೆಪ್ಟೆಂಬರ್ ಆರಂಭದಲ್ಲಿ, ರಾಷ್ಟ್ರೀಯ ರಾಜಕೀಯ ಪಕ್ಷ ಮತ್ತು ಅದರ ನೀತಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಟಿಆರ್‌ಎಸ್ ಹೇಳಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಕಳೆದ ತಿಂಗಳು ಕೆಸಿಆರ್ ಘೋಷಿಸಿದ್ದರು.

 ದೇಶದ ಪ್ರಮುಖ ಮುಖಂಡರನ್ನು ಭೇಟಿ ಮಾಡಿದ್ದರು

ದೇಶದ ಪ್ರಮುಖ ಮುಖಂಡರನ್ನು ಭೇಟಿ ಮಾಡಿದ್ದರು

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೆಸಿಆರ್ ಭೇಟಿ ಮಾಡಿದ್ದರು. ಈ ವರ್ಷದ ಆರಂಭದಲ್ಲಿಯೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ಭೇಟಿ ಮಾಡಲು ಕೆಸಿಆರ್ ಮೂರು ದಿನಗಳ ಕಾಲ ದೆಹಲಿಯಲ್ಲಿ ತಂಗಿದ್ದರು. ಅದಕ್ಕೂ ಮುನ್ನ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದರು.

English summary
Telangana CM KCR to launch national party today to take on BJP in 2024 Lok Sabha polls Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X