ಸೋನಿಯಾ ಗಾಂಧಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಕೆಸಿಆರ್‌ ಪುತ್ರಿ ಕವಿತಾ?

ಹೈದರಾಬಾದ್‌, ಜನವರಿ 05: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಾಜಿ ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರ ಮಗಳು ಕವಿತಾ ಅವರು ಸೆಣಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಹಿಂದೆ ನಡೆದ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ತೆಲಂಗಾಣ ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಅವರನ್ನು ಸ್ಪರ್ಧೆಗೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

KCRs daughter Kavitha will contest against Sonia Gandhi in Telangana

ಲೋಕಸಭೆ ಚುನಾವಣೆಯಲ್ಲಿ ಕಳೆದುಕೊಂಡ ಅಧಿಕಾರವನ್ನು ಬಿಆರ್‌ಎಸ್ ಮತ್ತೆ ಪಡೆಯಲು ಔಟ್ ಆಫ್ ದಿ ಬಾಕ್ಸ್ ಐಡಿಯಾಗಳೊಂದಿಗೆ ಸ್ಪರ್ಧೆಗೆ ಇಳಿಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಕುದುರೆಯಂತಿರುವ ಕಾಂಗ್ರೆಸ್, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಥವಾ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ತೆಲಂಗಾಣದಿಂದ ಸ್ಪರ್ಧಿಸುವಂತೆ ಮನವೊಲಿಸಲು ಪ್ರಯತ್ನಿಸುತ್ತಿದೆ. ಬಿಆರ್‌ಎಸ್ ನ ಈ ಕ್ರಮವು ಬಿಜೆಪಿಗೆ ಲಾಭವಾಗುಬಹುದು ಎನ್ನಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಹಲವಾರು ಕ್ಷೇತ್ರಗಳಲ್ಲಿ ನೇರ ಹಣಾಹಣಿ ಉಂಟಾಗಬಹುದು ಎಂದು ಭಾವಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಿಆರ್‌ಎಸ್‌ ಮೂಲಗಳು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ. ಒಂದು ವೇಳೆ ಕಾಂಗ್ರೆಸ್ ಪಕ್ಷವು ರಾಜ್ಯದಿಂದ ಯಾರನ್ನಾದರೂ ಕಣಕ್ಕಿಳಿಸಲು ನಿರ್ಧರಿಸಿದರೆ ಪ್ರಿಯಾಂಕಾ ಅಥವಾ ಸೋನಿಯಾ ಗಾಂಧಿ ವಿರುದ್ಧ ಎಂಎಲ್ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರನ್ನು ಕಣಕ್ಕಿಳಿಸುವುದು ಪರಿಗಣನೆಯಲ್ಲಿದೆ.

ತೆಲಂಗಾಣದಲ್ಲಿ ಪ್ರಿಯಾಂಕಾ ಅವರನ್ನು ಮೇದಕ್ ಅಥವಾ ಮಲ್ಕಾಜ್‌ಗಿರಿಯಿಂದ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1980ರಲ್ಲಿ ಮೆಡಕ್‌ನಿಂದ ಸ್ಪರ್ಧಿಸಿದ್ದರು. ಪ್ರಿಯಾಂಕಾ ಮೇಡಕ್‌ನಿಂದ ಸ್ಪರ್ಧಿಸಿದರೆ ಪಕ್ಷವು ರಾಜ್ಯವನ್ನು ಗೆಲ್ಲಬಹುದೆಂದು ಕಾಂಗ್ರೆಸ್ ನಾಯಕರು ನಂಬಿದ್ದಾರೆ.

KCRs daughter Kavitha will contest against Sonia Gandhi in Telangana

ಆದರೆ ಬಿಆರ್‌ಎಸ್‌ನ ಮೂಲಗಳು ಮೆಡಕ್ ಪ್ರದೇಶದಲ್ಲಿ ತಮ್ಮ ಪಕ್ಷವು ಪ್ರಬಲವಾದ ಅಸ್ತಿತ್ವವನ್ನು ಹೊಂದಿರುವುದರಿಂದ ಕಾಂಗ್ರೆಸ್‌ಗೆ ಗೆಲುವು ಆಗುವುದಿಲ್ಲ ಎಂದು ಭಾವಿಸಿದ್ದಾರೆ. ಮಲ್ಕಾಜ್‌ಗಿರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ 2019 ರಲ್ಲಿ ಬಿಆರ್‌ಎಸ್ ಅನ್ನು ಕಠಿಣ ಸ್ಪರ್ಧೆ ಇದ್ದರೂ ಗೆದ್ದರು. ಕವಿತಾ ಕೊನೆಯ ಬಾರಿಗೆ 2014ರಲ್ಲಿ ನಿಜಾಮಾಬಾದ್‌ನಿಂದ ಸಂಸದೆಯಾಗಿ ಗೆದ್ದಿದ್ದರು. ಪ್ರಸ್ತುತ, ಅವರು ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.

ಈಗ ಬಿಆರ್‌ಎಸ್ ಕೂಡ ಪಕ್ಷದೊಳಗೆ ಹೊಸ ಹುರುಪು ತರಲು ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖ ನಾಯಕರನ್ನು ಲೋಕಸಭೆಯಲ್ಲಿ ಕಣಕ್ಕೆ ಇಳಿಸಲು ಸೂಚಿಸಬಹುದು ಎಂದು ಮೂಲಗಳು ತಿಳಿಸಿವೆ. ಉತ್ತರ ಮತ್ತು ದಕ್ಷಿಣ ತೆಲಂಗಾಣದಲ್ಲಿ ಪಕ್ಷದ ಸೋಲಿನ ನಂತರ ನಾಯಕರು ಮತ್ತು ಕಾರ್ಯಕರ್ತರಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ ಎಂಬ ಕಲ್ಪನೆ ಇದೆ. ಇಲ್ಲಿ ಮಾಜಿ ಹಣಕಾಸು ಸಚಿವ ಹರೀಶ್ ರಾವ್ ಅವರನ್ನು ಸಂಸತ್ತಿನ ಚುನಾವಣೆಗೆ ಸ್ಪರ್ಧಿಸಲು ತಿಳಿಸಬಹುದು ಎಂಬ ಸುದ್ದಿಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+