ಕೇದಾರನಾಥ ಯಾತ್ರೆ; ಮೂವರು ಯಾತ್ರಾರ್ಥಿಗಳ ಸಾವು
ಡೆಹರಾಡೂನ್, ಮೇ 26: ಉತ್ತರಖಂಡ ರಾಜ್ಯದ ಕೇದಾರನಾಥ ಕ್ಷೇತ್ರದಲ್ಲಿ ಬುಧವಾರ ಮೂವರು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಈ ಮೂಲಕ ಈ ವರ್ಷದ ಕೇದಾರನಾಥ ಯಾತ್ರೆಯಲ್ಲಿ ನಿಧನರಾದ ಯಾತ್ರಾರ್ಥಿಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮೇ 6ರಂದು ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಾಯಿತು.
ಹೃದಯಾಘಾತದಿಂದ ಮೂವರು ಯಾತ್ರಾರ್ಥಿಗಳು ಬುಧವಾರ ಕೇದಾರನಾಥದಲ್ಲಿ ಸಾವನ್ನಪ್ಪಿದ್ದಾರೆ.
ಕೋವಿಡ್-19 ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಖಂಡ್ ನ ಚಾರ್‌ಧಾಮ್ ಯಾತ್ರೆ 2022 ರ ಮೇ 3ರಂದು ಮತ್ತೆ ಆರಂಭವಾಗಿದೆ. ಈ ವರ್ಷದ ಚಾರ್‌ಧಾಮ್ ಯಾತ್ರೆಯಲ್ಲಿ ಇದುವರೆಗೂ 57 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ರುದ್ರಪ್ರಯಾಗ್ ಜಿಲ್ಲಾಡಳಿತ ತಿಳಿಸಿದೆ.

ಚಾರ್‌ಧಾಮ್ ಯಾತ್ರೆಯು ಪವಿತ್ರ ಕ್ಷೇತ್ರಗಳಾದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಒಳಗೊಂಡಿದೆ. ಅಕ್ಷಯ ತೃತೀಯದ ಪವಿತ್ರ ದಿನದಂದು ಚಾರ್ಧಾಮ್ ಯಾತ್ರೆಗೆ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಾಲನೆ ನೀಡಿದರು.
ಮೇ 3 ರಂದು ಗಂಗೋತ್ರಿ ಮತ್ತು ಯಮುನೋತ್ರಿಯಿಂದ ಭಕ್ತರು ತಮ್ಮ ಯಾತ್ರೆಯನ್ನು ಆರಂಭಿಸಿದರು. ಬದರಿನಾಥ ದೇವಾಲಯವನ್ನು ಮೇ 8 ರಂದು ತೆರೆಯಲಾಯಿತು.

ಉತ್ತರಖಂಡ ಸರಕಾರದ ಪ್ರಕಾರ ಒಂದು ದಿನಕ್ಕೆ ಗಂಗೋತ್ರಿಯಲ್ಲಿ 8,000 ಯಾತ್ರಾರ್ಥಿಗಳಿಗೆ ಅವಕಾಶ ನೀಡುತ್ತಿದೆ. ಅದೇ ರೀತಿ ಬದರಿನಾಥದಲ್ಲಿ 16,000 ಭಕ್ತರು, ಕೇದರನಾಥದಲ್ಲಿ 13,000 ಭಕ್ತರು ಹಾಗೂ ಯಮುನೋತ್ರಿಯಲ್ಲಿ ಪ್ರತಿ ದಿನ 5,000 ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ಕ್ಷೇತ್ರಗಳು ಹಿಮಾಲಯದ ಅತ್ಯಂತ ಪೂಜ್ಯ ಹಿಂದೂ ತೀರ್ಥಯಾತ್ರೆ ಕ್ಷೇತ್ರಗಳಾಗಿವೆ.
"ಭಕ್ತರು ವೈದ್ಯರನ್ನು ಸಂಪರ್ಕಿಸಿದ ನಂತರವಷ್ಟೇ ಚಾರ್‌ಧಾಮ್ ಯಾತ್ರೆಗೆ ಅಣಿಯಾಗಬೇಕು. ಸ್ಥಿರವಾದ ಆರೋಗ್ಯ ಇಲ್ಲದವರೂ ಯಾತ್ರೆಗೆ ಮುಂದಾಗಬಾರದು'' ಎಂದು ಉತ್ತರಖಂಡ ಸರಕಾರ ಭಕ್ತರಿಗೆ ಮನವಿ ಮಾಡಿದೆ.
ಕಳೆದ ಎರಡು ವರ್ಷಗಳಿಂದ ಕೊರೊನಾ ಪರಿಸ್ಥಿತಿ ಹಿನ್ನಲೆಯಲ್ಲಿ ಮುಚ್ಚಿದ್ದ ಧಾರ್ಮಿಕ, ಯಾತ್ರಾ ಸ್ಥಳಗಳು ಈ ವರ್ಷ ಪೂರ್ಣ ಪ್ರಮಾಣದಲ್ಲಿ ತೆರಯಲಾಗಿದೆ. ಈ ಹಿನ್ನೆಲೆಯಲ್ಲಿ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications