ಬಿಜೆಪಿ ಕಾರ್ಯಕರ್ತನ ಕೊಲೆ: 11 CPM ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಕನ್ನೂರು, ಜುಲೈ 06: ಬಿಜೆಪಿ ಕಾರ್ಯಕರ್ತರೊಬ್ಬರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತಲಚೆರಿ ಹೆಚ್ಚುವರಿ ಜಿಲ್ಲಾ ಸೆಶನ್ ನ್ಯಾಯಾಲಯ 11 ಸಿಪಿಎಂ(ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸಿಸ್ಟ್)) ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ನೀಡಿದೆ.
2008 ರಲ್ಲಿ ಬಿಜೆಪಿ ಕಾರ್ಯಕರ್ತ ಮಹೇಶ್ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಆಟೋ ಚಾಲಕನಾಗಿದ್ದ ಮಹೇಶ್ ಅವರು ಪ್ರಯಾಣಿಕರಿಗೆ ಕಾಯುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿತ್ತು. ಬಿಜೆಪಿ ಸೇರುವ ಮೊದಲು ಮಹೇಶ್ ಸಿಪಿಎಂ ನಲ್ಲಿದ್ದರು. ಅವರು ಸಿಪಿಎಂ ತೊರೆದು ಬಿಜೆಪಿ ಸೇರಿದ್ದಾರೆ ಎಂಬ ಸಿಟ್ಟಿಗೆ ಅವರನ್ನು ಸಿಪಿಎಂ ಕಾರ್ಯಕರ್ತರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಘಟನೆಯ ನಂತರ ಕೇರಳದಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಸಾಕಷ್ಟು ಜಟಾಪಟಿ ನಡೆದಿತ್ತು, ಹಿಂಸಾತ್ಮಕ ಘಟನೆಗಳು ನಡೆದಿದ್ದವು.

ಇದೀಗ ಕೊಲೆ ಆರೋಪ ಸಾಬೀತಾದ ಕಾರಣ, ಪ್ರಕರಣದಲ್ಲಿ ಭಾಗಿಯಾದ 11 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.












Click it and Unblock the Notifications