Get Updates
Get notified of breaking news, exclusive insights, and must-see stories!

Kerala blasts case: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು- ಕಾರಣವೇನು?

ಕೊಚ್ಚಿ, ಅಕ್ಟೋಬರ್‌ 31: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೊಚ್ಚಿ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ. ಕೇರಳ ಬಾಂಬ್‌ ಸ್ಪೋಟದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ದ್ವೇಷಪೂರಿತ ಪೋಸ್ಟ್‌ ಮಾಡಿರುವ ಆರೋಪದಡಿ ಈ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇರಳ ಸರಣಿ ಬಾಂಬ್‌ ಸ್ಪೋಟದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ಕುರಿತು ರಾಜೀವ್‌ ಚಂದ್ರಶೇಖರ್‌ ಅವರು ಕೋಮುದ್ವೇಷ ಉಂಟುಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

kerala-blasts-case

ಸ್ಫೋಟದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತಪ್ಪುದಾರಿಗೆಳೆಯುವ ಅಥವಾ ಕೋಮುದ್ವೇಷ ಹರಡುವ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಸರ್ಕಾರ ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದರು.

ಈ ಕುರಿತು ಸೈಬರ್ ಸೆಲ್ ಎಸ್‌ಐ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಂದ್ರಶೇಖರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು ) ಆರೋಪವನ್ನು ಹೊರಿಸಲಾಗಿದೆ.

kerala-blasts-case

ಸ್ಫೋಟದ ನಂತರ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಕಾಂಗ್ರೆಸ್ ಮತ್ತು ಸಿಪಿಎಂನ ಓಲೈಕೆ ರಾಜಕಾರಣ ಸ್ಫೋಟಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಹಮಾಸ್ ನಾಯಕ ಭಾಗವಹಿಸಿದ್ದ ಪ್ಯಾಲಿಸ್ತೀನ ಪರವಾದ ಕಾರ್ಯಕ್ರಮಕ್ಕೆ ಕೇರಳ ಸ್ಫೋಟ ಪ್ರಕರಣವನ್ನು ಸಂಬಂಧ ಕಲ್ಪಿಸಿ ಅವರು ಪೋಸ್ಟ್‌ ಮಾಡಿದ್ದಾರೆ.

'ಕಾಂಗ್ರೆಸ್ ಮತ್ತು ಸಿಪಿಎಂನ ಓಲೈಕೆ ರಾಜಕಾರಣದ ಬೆಲೆಯನ್ನು ಎಲ್ಲಾ ಸಮುದಾಯಗಳ ಮುಗ್ಧರು ಯಾವಾಗಲೂ ಭರಿಸಬೇಕಾಗುತ್ತದೆ. ಇತಿಹಾಸವು ನಮಗೆ ಇದನ್ನು ಕಲಿಸಿದೆ' ಎಂದು ಹೇಳಿದ್ದಾರೆ.

kerala-blasts-case

ಕಾಂಗ್ರೆಸ್‌-ಸಿಪಿಎಂ ನಾಚಿಕೆಯಿಲ್ಲದ ತುಷ್ಟೀಕರಣ ರಾಜಕೀಯ ಮಾಡುತ್ತಿವೆ. ಕೇರಳದಲ್ಲಿ ದ್ವೇಷ ಹರಡಲು ಹಮಾಸ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಕೇರಳದಲ್ಲಿ ಜಿಹಾದ್‌ ನಡೆಸಲು ಕರೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ. ಇದು ಇಲ್ಲಿಗೇ ನಿಲ್ಲಬೇಕಿದೆ ಎಂದು ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ನೀವು ನಿಮ್ಮ ಹಿತ್ತಲಿನಲ್ಲಿ ಹಾವುಗಳನ್ನು ಸಾಕುಬಾರದು. ಅವು ನಿಮ್ಮ ನೆರೆಹೊರೆಯವರನ್ನು ಮಾತ್ರ ಕಚ್ಚುತ್ತವೆ ಎಂದು ನೀವು ಅಂದುಕೊಂಡಿರಬಹುದು. ನಿಮಗೆ ಗೊತ್ತಾ, ಅಂತಿಮವಾಗಿ ಆ ಹಾವುಗಳು ಹಿತ್ತಲಿನಲ್ಲಿ ಸಿಗುವ ಯಾರನ್ನು ಬೇಕಾದರೂ ಕಚ್ಚಬಹುದು ಎಂದು ಹೇಳಿದ್ದಾರೆ.

#ಹಮಾಸ್ ಟೆರರಿಸ್ಟ್ಸ್ #ಕೊಚ್ಚಿ ಟೆರರಿಸ್ಟ್ಸ್ ಎಂಬ ಹ್ಯಾಶ್‌ಟ್ಯಾಗ್‌ ಅಡಿಯಲ್ಲಿ ರಾಜೀವ್‌ ಚಂದ್ರಶೇಖರ್ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರನ್ನು 'ಕೋಮುವಾದಿ' ಮತ್ತು 'ವಿಷಕಾರಿ' ಎಂದು ಕರೆದಿದ್ದಾರೆ. ಇನ್ನೊಂದೆಡೆ ರಾಜೀವ್‌ ಚಂದ್ರಶೇಖರ್‌ ಅವರು ಸಿಎಂ ಪಿಣರಾಯಿ ವಿಜಯನ್‌ ಅವರನ್ನು ಸುಳ್ಳುಗಾರ ಎಂದಿದ್ದಾರೆ.

ಸಿಎಂ ಪಿಣರಾಯಿ ವಿಜಯನ್‌ ಹಾಗೂ ರಾಜೀವ್ ಚಂದ್ರಶೇಖರ್‌ ಅವರು ಸೋಮವಾರ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಂತ್ರಸ್ತರಿಗೆ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಚಂದ್ರಶೇಖರ್ ಅವರು ತಮ್ಮ ಪೋಸ್ಟ್‌ನಲ್ಲಿ ಯಾವುದೇ ಸಮುದಾಯವನ್ನು ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇರಳದಲ್ಲಿ ನಡೆದ ಪ್ಯಾಲೆಸ್ತೀನ್‌ ಪರ ಕಾರ್ಯಕ್ರಮವೊಂದರಲ್ಲಿ ಹಮಾಸ್ ನಾಯಕನ ವಾಸ್ತವ ಉಪಸ್ಥಿತಿಯನ್ನು ಅವರು ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಹಮಾಸ್ ಅನ್ನು ಕೇರಳದ ಮುಸ್ಲಿಂ ಸಮುದಾಯದೊಂದಿಗೆ ಸಿಎಂ ಸಮೀಕರಿಸುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+