ಕೇರಳ ಬಾಂಬ್ ಸ್ಫೋಟದ ಹೊಣೆ ಹೊತ್ತು ಶರಣಾದ ವ್ಯಕ್ತಿ: ತೀವ್ರ ವಿಚಾರಣೆ

ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. 48 ವರ್ಷದ ಡೊಮಿನಿಕ್ ಮಾರ್ಟಿನ್ ಎನ್ನುವಾತ ಸ್ಫೋಟದ ಹೊಣೆ ಹೊತ್ತು ಶರಣಾಗಿದ್ದಾರೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಕೆಲವೇ ಗಂಟೆಗಳ ನಂತರ, 48 ವರ್ಷದ ವ್ಯಕ್ತಿಯೊಬ್ಬರು ಸ್ಫೋಟದ ಹೊಣೆ ಹೊತ್ತು ಶರಣಾಗಿದ್ದಾರೆ. ಶಂಕಿತ, ಡೊಮಿನಿಕ್ ಮಾರ್ಟಿನ್, ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

Kerala Bomb Blast

ಸ್ಫೋಟದ ನಂತರ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಲೈವ್‌ಗೆ ಬಂದ ಡೊಮಿನಿಕ್ ಮಾರ್ಟಿನ್ ಸ್ಫೋಟದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ತ್ರಿಶೂರ್ ಜಿಲ್ಲೆಯ ಕೊಡಕರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕೊಚ್ಚು ಪೊಲೀಸ್ ಕ್ಯಾಂಪ್‌ನಲ್ಲಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ.

ಊಟದ ಬಾಕ್ಸ್‌ನಲ್ಲಿ ಸ್ಫೋಟಕ ಇಟ್ಟು ಕೃತ್ಯ

ಭಾನುವಾರ ನಡೆದ ಪ್ರಾರ್ಥನೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಪ್ರಾರ್ಥನೆಯ ಮಧ್ಯೆ ಮೊದಲ ಸ್ಫೋಟ ಸಂಭವಿಸಿದೆ ಎಂದು ಕನ್ವೆನ್ಷನ್ ಸೆಂಟರ್‌ನಲ್ಲಿದ್ದ ಜನರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಟಿಫಿನ್ ಬಾಕ್ಸ್ ನಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಭಾಂಗಣದ ಮಧ್ಯಭಾಗದಲ್ಲಿ ಮೊದಲ ಸ್ಫೋಟ ಸಂಭವಿಸಿದೆ ಎಂದು ಕಲಮಸ್ಸೆರಿ ಸಂಸದ ಹಿಬಿ ಈಡನ್ ಹೇಳಿದ್ದಾರೆ.

"ಅದೃಷ್ಟವಶಾತ್, ಅವರು ಸ್ಥಳಾಂತರಿಸುವ ಯೋಜನೆಯನ್ನು ಹೊಂದಿದ್ದರು. ಪ್ರತಿ ಬಾರಿ ಗುಂಪು ಭೇಟಿಯಾದಾಗ, ಅವರು ಚರ್ಚಿಸಿ ಸ್ಥಳಾಂತರಿಸುವ ಯೋಜನೆಯನ್ನು ಸಿದ್ಧಪಡಿಸುತ್ತಾರೆ. ಆದರೆ ಸಾಕಷ್ಟು ಹೊಗೆ ಇತ್ತು, ಇದು ಕಾಲ್ತುಳಿತಕ್ಕೆ ಕಾರಣವಾಯಿತು" ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

45 ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ 18 ಜನರು ಐಸಿಯುನಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಫೋಟಗಳನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ ಮತ್ತು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಫೋಟದ ಸ್ಥಳಕ್ಕೆ ತೆರಳುತ್ತಿದ್ದಾರೆ.

ಈ ಸ್ಫೋಟಗಳನ್ನು ಈಗ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಲಿದ್ದು, ಇದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪರಿಣತಿ ಪಡೆದಿದೆ. ಏಜೆನ್ಸಿಯ ಫೊರೆನ್ಸಿಕ್ ತಂಡ ಈಗಾಗಲೇ ಘಟನಾ ಸ್ಥಳಕ್ಕೆ ತಲುಪಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+