ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿದೆ. ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸಿಎಂ ಪಿಣರಾಯಿ ಅವರು ಎಂದಿನಂತೆ ತಮ್ಮ ಬೆಂಗಾವಲು ವಾಹನಗಳೊಂದಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮುಖ್ಯರಸ್ತೆಯಲ್ಲೇ ಮುಂದಿದ್ದ ಕಾರು ತಕ್ಷಣ ಬ್ರೇಕ್ ಹಾಕಿದೆ. ಸ್ವಲ್ಪ ವೇಗವಾಗಿಯೇ ಬೆಂಗಾವಲು ವಾಹನಗಳು ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ, ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ ಎನ್ನಲಾಗಿದೆ.

ಸಿಎಂ ಜೊತೆಗೆ ಚಲಿಸುತ್ತಿದ್ದ ಸುಮಾರು ಏಳು ಬೆಂಗಾವಲು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿರುವ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಕೂಡ ಆಗಿದೆ. ಮಹಿಳೆಯೊಬ್ಬರು ಈ ಬೆಂಗಾವಲು ವಾಹನಗಳು ಬಂದಾಗಲೇ ರಸ್ತೆಯಲ್ಲಿ ದಿಢೀರನೆ ಬಲಕ್ಕೆ ತಿರುಗಿಸಿದ್ದಾರೆ. ಹಾಗಾಗಿ ಮುಂದೆ ಹೋಗುತ್ತಿದ್ದ ಭದ್ರತಾ ವಾಹನಗಳು ಬ್ರೇಕ್ ಹೊಡೆದಿವೆ.
The escort vehicle of Kerala CM Pinarayi Vijayan met with an accident.. pic.twitter.com/2rp6DN7r3y
— ꧁✨𝑆𝙖ƚ𝖍ϵϵ𝗌𝖍✨꧂ (@MrPaluvetz) October 28, 2024
ಈ ವೇಳೆ ಹಿಂದೆಯೇ ವೇಗವಾಗಿ ಬರುತ್ತಿದ್ದ ಸಿಎಂ ವಾಹನ ಸೇರಿದಂತೆ ಕೊನೆಯ ಆಂಬುಲೆನ್ಸ್ ಕೂಡ ಏಳು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ಅದೃಷ್ಟವಶಾತ್ ಸಿಎಂ ಪಿಣರಾಯಿ ವಿಜಯನ್ ಅವರು ಕ್ಷೇಮವಾಗಿದ್ದಾರೆ ಎನ್ನಲಾಗಿದೆ. ಇನ್ನು ಸರಣಿ ಅಪಘಾತದಿಂದ ವಾಹನಗಳೆಲ್ಲ ಡ್ಯಾಮೇಜ್ ಕೂಡ ಆಗಿವೆ.
ಆರ್‌ಎಸ್‌ಎಸ್ ಜಮಾತ್ ಪ್ರತಿರೂಪ ಎಂದ ಪಿಣರಾಯಿ!
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಆರ್‌ಎಸ್‌ಎಸ್ ಅನ್ನು ಜಮಾತ್-ಎ-ಇಸ್ಲಾಮಿಗೆ ಹೋಲಿಸಿರುವ ಅವರು ಜಮಾತ್-ಎ-ಇಸ್ಲಾಮಿ ಆರ್‌ಎಸ್‌ಎಸ್‌ನ ಪ್ರತಿರೂಪ ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯರಾದ ಪಿ.ಜೆ.ರಾಜನ್ ಅವರ ಕೇರಳ, ಮುಸ್ಲಿಂ ರಾಷ್ಟ್ರೀಯಂ, ರಾಷ್ಟ್ರೀಯ ಇಸ್ಲಾಂ (ಕೇರಳ, ಮುಸ್ಲಿಂ ರಾಜಕೀಯ ಮತ್ತು ರಾಜಕೀಯ ಇಸ್ಲಾಂ) ಎಂಬ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಪಿಣರಾಯಿ ಈ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ಅವರು ಜಮಾತ್-ಎ-ಇಸ್ಲಾಮಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಇಸ್ಲಾಮಿಕ್ ಆವೃತ್ತಿ ಎಂದಿದ್ದಾರೆ. ಇದೊಂದು ಇಸ್ಲಾಮಿಕ್ ಜಗತ್ತಿನ ಪುನರುಜ್ಜೀವನಗೊಳಿಸುವ ಸಂಸ್ಥೆ ಎಂದು ಹೇಳಿದ್ದಾರೆ.
ಜಮಾತ್-ಎ-ಇಸ್ಲಾಮಿ ಮತ್ತು ಐಯುಎಂಎಲ್ ಅನ್ನು ಒಂದೇ ರೀತಿಯಲ್ಲಿ ನೋಡಬಾರದು. ಮೊದಲನೆಯದ್ದು ಧಾರ್ಮಿಕ ಸಾಮ್ರಾಜ್ಯಶಾಹಿ ಸಂಘಟನೆಯಾಗಿದ್ದು, ಎರಡನೆಯದು ಎಂದಿಗೂ ಅಂತಹ ಕಾರ್ಯಸೂಚಿಯನ್ನೇ ಹೊಂದಿಲ್ಲ. IUML ಬ್ರಿಟಿಷರ ಕಾಲದಲ್ಲಿ ಪ್ರಾರಂಭವಾದಾಗಿನಿಂದ ಸಾಮಾಜಿಕ ಸುಧಾರಣೆಗಳಲ್ಲಿ ತೊಡಗಿಸಿಕೊಂಡಿದೆ ಎಂದಿದ್ದಾರೆ. ಸದ್ಯ ಆರ್‌ಎಸ್‌ಎಸ್ ಅನ್ನು ಜಮಾತ್-ಎ-ಇಸ್ಲಾಮಿಗೆ ಹೋಲಿಸಿರುವ ಪಿಣರಾಯಿ ವಿಜಯನ್ ಹೇಳಿಕೆಯು ಸಂಚಲನ ಮೂಡಿಸಿದೆ. ಇದನ್ನು ಹಲವು ಬಿಜೆಪಿ ನಾಯಕರು ಕೂಡ ಖಂಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications