Vande Bharat Express: ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ವಿರೂಪಗೊಳಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಂಗಳವಾರ, ಏಪ್ರಿಲ್ 25ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇರಳದ ಚೊಚ್ಚಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ನೀಡಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ಕಾರ್ಯಕರ್ತರು ರೈಲಿನ ಹೊರಭಾಗವನ್ನು ವಿರೂಪಗೊಳಿಸಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಸಂಸದ ವಿಕೆ ಶ್ರೀಕಂದನ್ ಅವರ ಪೋಸ್ಟರ್‌ಗಳನ್ನು ಅಂಟಿಸಿ ವಿಕೃತಿ ಮೆರೆದಿದ್ದಾರೆ.

ಕೇರಳದ ಪಾಲಕ್ಕಾಡ್‍ನ ಶೋರನೂರ್ ಜಂಕ್ಷನ್‌ಗೆ ರೈಲು ಬಂದಾಗ ಈ ಘಟನೆ ನಡೆದಿದ್ದು, ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೈಲಿನ ಗಾಜಿನ ಕಿಟಕಿಗಳ ಮೇಲೆ ಕಾಂಗ್ರೆಸ್ ಸಂಸದನ ಪೋಸ್ಟರ್‌ಗಳನ್ನು ಅಂಟಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Kerala: Congress Workers Deface The Vande Bharat Express Within Hours Of Its Launch

ಕೇರಳದ ಬಿಜೆಪಿ ನಾಯಕ ಕೆ. ಸುರೇಂದ್ರನ್ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕಿಟಕಿಗಳ ಮೇಲೆ ಕಾಂಗ್ರೆಸ್ ಸಂಸದನ ಪೋಸ್ಟರ್ ತುಂಬಿರುವ ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

"ಪಾಲಕ್ಕಾಡ್‍ನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ವಿರೂಪಗೊಳಿಸುವುದು ಕೇರಳ ಕಾಂಗ್ರೆಸ್ ಕಾರ್ಯಕರ್ತರ ನೀಚ ಕೆಲಸವಾಗಿದೆ. ಈ ಕಿಡಿಗೇಡಿಗಳು 'ಕಿರೀಟಧಾರಿ ರಾಜಕುಮಾರ'ನ ಅನುಯಾಯಿಗಳು," ಎಂದು ಕೆ. ಸುರೇಂದ್ರನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಸಂಸದ ವಿ.ಕೆ. ಶ್ರೀಕಂದನ್ ಮಾತನಾಡಿ, "ರೈಲಿನಲ್ಲಿ ತನ್ನ ಪೋಸ್ಟರ್‌ಗಳನ್ನು ಅಂಟಿಸಲು ನಾನು ಯಾರಿಗೂ ಹೇಳಿಲ್ಲ. ಬಿಜೆಪಿ ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸಲು ಯತ್ನಿಸುತ್ತಿದೆ," ಎಂದು ಆರೋಪಿಸಿದರು. ಘಟನೆಯ ನಂತರ ರೈಲ್ವೇ ರಕ್ಷಣಾ ಪಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ತಿರುವನಂತಪುರಂ- ಕಾಸರಗೋಡು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್

ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯು ರಾಜಧಾನಿ ತಿರುವನಂತಪುರಂ ಮತ್ತು ಕೇರಳ ಉತ್ತರದ ಜಿಲ್ಲೆ ಕಾಸರಗೋಡಿನೊಂದಿಗೆ ಸಂಪರ್ಕ ಬೆಸೆಯುಸುತ್ತದೆ. ಸೆಮಿ-ಹೈ ಸ್ಪೀಡ್ ರೈಲು ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರ್ ಜಂಕ್ಷನ್, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆ ಹೊಂದಿದೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರಂನಲ್ಲಿ ಸೆಮಿ ಹೈಸ್ಪೀಡ್ ರೈಲಿಗೆ ಹಸಿರು ನಿಶಾನಿ ನೀಡಿದ್ದರು. ಕೇರಳದ ಪ್ರಮುಖ ರೈಲು ನಿಲ್ದಾಣಗಳು ಶೀಘ್ರದಲ್ಲೇ ಬಹುಮಾದರಿ ಸಾರಿಗೆ ಕೇಂದ್ರಗಳಾಗಿ ಬದಲಾಗಲಿವೆ ಎಂಬ ಆಶಯ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+