ಶಾಲಾ ವಿದ್ಯಾರ್ಥಿನಿಯರಿಗಿನ್ನು 3 ದಿನ ಮುಟ್ಟಿನ ರಜೆ: ಕೇರಳ ಸರ್ಕಾರದ ಐತಿಹಾಸಿಕ ನಿರ್ಧಾರ

ತಿರುವನಂತಪುರಂ: ಮಹಿಳಾ ಸಬಲೀಕರಣ ಹಾಗೂ ವಿದ್ಯಾರ್ಥಿನಿಯರ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕೇರಳ ರಾಜ್ಯವು ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಈಗಾಗಲೇ ದೇಶದಲ್ಲೇ ಮೊದಲ ಬಾರಿಗೆ ವಿಶ್ವವಿದ್ಯಾಲಯ ಮಟ್ಟದ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಸೌಲಭ್ಯವನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೇರಳ, ಇದೀಗ ಈ ಮಹತ್ವದ ಯೋಜನೆಯನ್ನು ಶಾಲಾ ಮಟ್ಟದ ವಿದ್ಯಾರ್ಥಿನಿಯರಿಗೂ ವಿಸ್ತರಿಸಲು ಮುಂದಾಗಿದೆ. ವಿ.ಡಿ. ಸತೀಶನ್ ನೇತೃತ್ವದ ನೂತನ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಸರ್ಕಾರವು ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಇಡೀ ದೇಶಕ್ಕೇ ಮಾದರಿಯಾಗಿದೆ.

ಶುಕ್ರವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ತಮ್ಮ ನೀತಿ ಭಾಷಣದ ವೇಳೆ ಈ ಯೋಜನೆಯನ್ನು ಅಧಿಕೃತವಾಗಿ ಅನಾವರಣಗೊಳಿಸಿದರು. ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳನ್ನು ಹೆಚ್ಚು ಪೂರಕ, ಸುರಕ್ಷಿತ ಮತ್ತು ಸ್ನೇಹಮಯವಾಗಿಸುವ ಬದ್ಧತೆಯೊಂದಿಗೆ ಸರ್ಕಾರವು 'ಪ್ರಾಜೆಕ್ಟ್ ಮೆನ್ಸ್ಟ್ರುವಲ್ ಡಿಗ್ನಿಟಿ' ಎಂಬ ವಿಶೇಷ ಯೋಜನೆಯನ್ನು ರೂಪಿಸಿದೆ.

Kerala Government

ಈ ವಿನೂತನ ಯೋಜನೆಯ ಪ್ರಮುಖ ಭಾಗವಾಗಿ, ಇನ್ಮುಂದೆ ಶಾಲೆಯಲ್ಲಿ ಕಲಿಯುತ್ತಿರುವ ಹೆಣ್ಣುಮಕ್ಕಳಿಗೆ ಸಹ ತಿಂಗಳಿಗೆ ಗರಿಷ್ಠ ಮೂರು ದಿನಗಳವರೆಗೆ ಮುಟ್ಟಿನ ರಜೆ ಪಡೆದುಕೊಳ್ಳಲು ಕಾನೂನಾತ್ಮಕ ಅವಕಾಶ ಕಲ್ಪಿಸಲಾಗುತ್ತದೆ.

ಕೆಲವು ವರ್ಷಗಳ ಹಿಂದಷ್ಟೇ ಕೇರಳದ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ದಿನಗಳಲ್ಲಿ ರಜೆ ನೀಡುವ ಸೌಲಭ್ಯವನ್ನು ಅಲ್ಲಿನ ಉನ್ನತ ಶಿಕ್ಷಣ ಇಲಾಖೆ ಕಲ್ಪಿಸಿತ್ತು. ಇದು ರಾಷ್ಟ್ರಮಟ್ಟದಲ್ಲಿ ಭಾರಿ ಪ್ರಶಂಸೆಗೆ ಹಾಗೂ ಚರ್ಚೆಗೆ ಪಾತ್ರವಾಗಿತ್ತು. ಆದರೆ, ಇದೀಗ ಅಧಿಕಾರಕ್ಕೆ ಬಂದಿರುವ ಹೊಸ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿ, ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದ ಶಾಲಾ ಹೆಣ್ಣುಮಕ್ಕಳಿಗೂ ಈ ಯೋಜನೆಯ ಲಾಭ ಸಿಗುವಂತೆ ಮಾಡುತ್ತಿದೆ. ಮುಟ್ಟಿನ ಸಮಯದಲ್ಲಿ ಹೆಣ್ಣುಮಕ್ಕಳು ಎದುರಿಸುವ ತೀವ್ರ ದೈಹಿಕ ನೋವು, ಅಸ್ವಸ್ಥತೆ ಮತ್ತು ಮಾನಸಿಕ ಸವಾಲುಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ ಈ ರಜೆಯನ್ನು ಮಂಜೂರು ಮಾಡಲು ನಿರ್ಧರಿಸಲಾಗಿದೆ.

ಈ ಯೋಜನೆಯಲ್ಲಿ ರಜೆ ಪಡೆದ ಕಾರಣದಿಂದಾಗಿ ಶಾಲಾ ವಿದ್ಯಾರ್ಥಿನಿಯರು ತಮ್ಮ ವ್ಯಾಸಂಗದಲ್ಲಿ ಅಥವಾ ಪಠ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಹಿಂದುಳಿಯಬಾರದು ಎಂಬ ಮುನ್ನೆಚ್ಚರಿಕೆಯನ್ನೂ ಸರ್ಕಾರ ವಹಿಸಿದೆ. ಇದಕ್ಕಾಗಿ ರಜೆ ಪಡೆದ ವಿದ್ಯಾರ್ಥಿನಿಯರಿಗೆ ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ವಿಶೇಷ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ.

ಇದರಿಂದಾಗಿ ಹೆಣ್ಣುಮಕ್ಕಳು ತಮ್ಮ ಆರೋಗ್ಯದ ಕಡೆಗೆ ತೊಂದರೆಯಿಲ್ಲದೆ ಗಮನಹರಿಸುವುದರ ಜೊತೆಗೆ ವಿದ್ಯಾಭ್ಯಾಸದಲ್ಲೂ ಯಾವುದೇ ಹಿನ್ನಡೆ ಅನುಭವಿಸದಂತೆ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಕೇರಳ ಸರ್ಕಾರದ ಈ ವಿನೂತನ ನಿರ್ಧಾರವು ಸಾಮಾಜಿಕ ವಲಯದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗುತ್ತಿದ್ದು, ಮುಟ್ಟಿನ ದಿನಗಳ ಆರೋಗ್ಯ ಮತ್ತು ಹೆಣ್ಣುಮಕ್ಕಳ ಘನತೆಯನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+