ರಾಜೀನಾಮೆ ನೀಡುವಂತೆ ಕುಲಪತಿಗಳಿಗೆ ಕೇರಳ ಗವರ್ನರ್ ಪತ್ರ: ಸಿಎಂ ಪಿಣರಾಯಿ ವಿಜಯನ್ ಟೀಕೆ
ತಿರುವನಂತಪುರಂ, ಅಕ್ಟೋಬರ್ 24: ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಸೋಮವಾರ ಬೆಳಗ್ಗೆ 11:30 ರೊಳಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ವಿವಾದಾತ್ಮಕ ನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲು ಕೇರಳ ಹೈಕೋರ್ಟ್ ಇಂದು ಸಂಜೆ ವಿಶೇಷ ಸಭೆ ನಡೆಸಲಿದೆ.
ಗವರ್ನರ್ ಮುಹಮ್ಮದ್ ಖಾನ್ ಹಿಂದಿನ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ, ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸುವ ಉದ್ದೇಶದಿಂದ ಯುದ್ಧ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯಪಾಲರು ಸಂಘಪರಿವಾರದ ಮುಂಚೂಣಿಯಲ್ಲಿರುವಂತೆ ವರ್ತಿಸುತ್ತಿದ್ದಾರೆ ಎಂದರು.
ರಾಜ್ಯಪಾಲರ ನಡೆ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಶೈಕ್ಷಣಿಕವಾಗಿ ಸ್ವತಂತ್ರವಾಗಿರಬೇಕಾದ ವಿಶ್ವವಿದ್ಯಾಲಯಗಳ ಮೇಲಿನ ಅತಿಕ್ರಮಣವಾಗಿದೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. ಕೇರಳ ಸರ್ಕಾರವು ವಿವಿಧ ವಿಶ್ವವಿದ್ಯಾನಿಲಯಗಳಿಗೆ ವಿಸಿಗಳನ್ನು ಸ್ವಯಂಪ್ರೇರಿತವಾಗಿ ನೇಮಿಸುವ ಹಿನ್ನೆಲೆಯಲ್ಲಿ ವಿವಾದ ಎದ್ದಿದೆ. ಆದರೆ ರಾಜ್ಯಪಾಲರು ಈ ವಿಷಯವನ್ನು ತರಾಟೆಗೆ ತೆಗೆದುಕೊಂಡರು. ಆ ನೇಮಕಾತಿಗಳು ಅವರ ಜವಾಬ್ದಾರಿ ಎಂದು ಹೇಳಿದ್ದಾರೆ.

ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ ಎಝುತಾಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಹುದ್ದೆ ತೊರೆಯುವಂತೆ ತಿಳಿಸಲಾಗಿದೆ. ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮುಂದಿನ ತಿಂಗಳು ರಾಜ್ಯದ ವಿಶ್ವವಿದ್ಯಾನಿಲಯಗಳಾದ್ಯಂತ ಬೃಹತ್ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಲು ನಿರ್ಧರಿಸಿದೆ.
ರಾಜ್ಯಪಾಲರಿಗೆ ಅಂತಹ ನಿರ್ದೇಶನ ನೀಡಲು ಯಾವುದೇ ಅಧಿಕಾರವಿಲ್ಲ. ಇದು ನಿರಂಕುಶ, ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಅವರು ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಮತ್ತು ನಾಶಮಾಡಲು ಬಯಸುತ್ತಾರೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಅವರು ಅಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಿಸಲು ಮತ್ತು ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಬಯಸುತ್ತಾರೆ. ಇದರಿಂದ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಸಾಧ್ಯವಾಗುತ್ತದೆ. ರಾಜ್ಯಪಾಲರಿಗೆ ಅಂತಹ ಯಾವುದೇ ಆದೇಶವನ್ನು ನೀಡಲು ಸಂವಿಧಾನವು ಅನುಮತಿಸುವುದಿಲ್ಲವಾದ್ದರಿಂದ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಕಿಡಿಕಾಡಿದರು.












Click it and Unblock the Notifications