Kerala: ಕೇರಳದಲ್ಲಿ ಧಾರಾಕಾರ ಮಳೆ, ಪ್ರವಾಹ-ಭೂಕುಸಿತ: 6 ಮಂದಿ ಸಾವು! ಸೆ.24ರವರೆಗೆ ಭಾರಿ ಮಳೆ ಮುನ್ಸೂಚನೆ

ತಿರುವನಂತಪುರ: ಕೇರಳದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ ಪ್ರಭಾವ, ಭೂಕುಸಿತ ಉಂಟಾಗಿದೆ. ಮಲ್ಲಪ್ಪುಂ ನಲ್ಲಿ ಪ್ರವಾಹ ಉಂಟಾಗಿದ್ದು, ನದಿಗೆ ಸ್ನಾನಕ್ಕೆ ಇಳಿದಿದ್ದ ಏಳು ಮಂದಿ ಪೈಕಿ ಐವರು ಕೊಚ್ಚಿ ಹೋದ ಘಟನೆ ನಡೆದಿದೆ. ಇಬ್ಬರು ನಾಪತ್ತೆಯಾಗಿದ್ದಾರೆ. ಸಿಎಂ ವಿ.ಡಿ.ಸತೀಶನ್ ಅವರು ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಸೂಚನೆ ನೀಡಿದ್ದಾರೆ.

ಇಲ್ಲಿನ ಇಡುಕ್ಕಿ, ಮತ್ತು ಕೊಟ್ಟಾಯಂನಲ್ಲಿ ತೀವ್ರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಇದೇ ವೇಳೆ ಭೂಕುಸಿತವು ಎದುರಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮಲ್ಲಪ್ಪುರಂ ಜಿಲ್ಲೆಯ ಕೊಟ್ಟಪ್ಪುಳ ನದಿಗೆ ಇಳಿದಿದ್ದ ಏಳು ಮಂದಿ ಸ್ನಾನ ಮಾಡುವಾಗ ದಿಢೀರ್ ನೀರಿನ ಮಟ್ಟ ಹೆಚ್ಚಾಗಿದೆ. ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ನಾಪತ್ತೆ ಆಗಿದ್ದಾರೆ. ಸ್ಥಳೀಯರ ಸಹಾಯದಿಂದ ಒಬ್ಬರನ್ನು ರಕ್ಷಿಸಲಾಗಿದೆ.

Kerala Heavy Rain

ಜಿಲ್ಲೆಯ ನೈಸರ್ಗಿಕ ವಿಕೋಪ ಉಸ್ತುವಾರಿ, ಅಗ್ನಿ ಶಾಮಕ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಇತ್ತ ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದು, ಅಗತ್ಯ ವಿದ್ದಲ್ಲಿ ಜನರನ್ನು ಬೇರೆಡೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

SMS ಮೂಲಕ ಜನರಿಗೆ ಮುನ್ನೆಚ್ಚರಿಕೆ

ಈ ಮಹಾಮಳೆ, ಭೂಕೂಸಿತ, ಪ್ರವಾದಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾಗಿ ಸದ್ಯ ವರದಿ ಆಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಮತ್ತು ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೇ ಹವಾಮಾನ ಕುರಿತು ಸಾರ್ವಜನಿಕರು ಎಸ್ ಎಂ ಎಸ್ ಮೂಲಕ ಕ್ಷಣ ಕ್ಷಣದ ಎಚ್ಚರಿಕೆ ನೀಡಲಾಗುತ್ತಿದೆ.

ಇನ್ನು ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಮೀನಿನಲ್ಲಿ ಹಾಕಲಾಗಿದ್ದ ಶೆಡ್ ಮೇಲೆ ಗುಡ್ಡ ಕುಸಿದಿದೆ. ಭಾರೀ ಮಳೆಯಿಂದ ತಪ್ಪಿಸಿಕೊಳ್ಳಲು ಶೆಡ್‌ ನಲ್ಲಿ ಆಶ್ರಯದಲ್ಲಿದ್ದ ತೋಟದ ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ ಎಂದು ವರದಿ ಆಗಿದೆ.

ಸೆಪ್ಟೆಂಬರ್ 24ರವರೆಗೆ ಭಾರೀ ಮಳೆ

ಒಂದೆಡೆ ಪ್ರವಾಹ, ಭೂಕುಸಿತ, ರಕ್ಷಣಾ ಕಾರ್ಯಾಚರಣೆ ನಡೆದಿದೆ. ಮತ್ತೊಂದೆಡೆ ಒಂದೇ ಸಮನೆ ಮಳೆ ಮುಂದುವರಿದಿದ್ದು, ಜೋರು ಮಳೆ ಸೆಪ್ಟೆಂಬರ್ 24ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಕೊಟ್ಟಾಯಂಗೆ 'ಆರೆಂಜ್ ಅಲರ್ಟ್' ಕೊಡಲಾಗಿದೆ. ಎರ್ನಾಕುಲಂ, ತಿರುವನಂತಪುರಂ ಜಿಲ್ಲೆಗಳಲ್ಲಿ ಭಾರೀ ಮಳೆ ಪ್ರಯುಕ್ತ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+