ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಪತ್ರಕರ್ತ ಸಿದ್ದಿಕಿಗೆ 5 ದಿನ ಮಧ್ಯಂತರ ಜಾಮೀನು

|
Google Oneindia Kannada News

ನವದೆಹಲಿ, ಫೆಬ್ರವರಿ 15: ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಂಧಿತನಾಗಿದ್ದ ಕೇರಳದ ವೆಬ್‌ಸೈಟ್ ಒಂದರ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಅಸ್ವಸ್ಥ ತಾಯಿಯನ್ನು ಭೇಟಿ ಮಾಡಲು ಸುಪ್ರೀಂಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಸಿದ್ದಿಕಿ ಅವರು ಉತ್ತರ ಪ್ರದೇಶದ ಶಸ್ತ್ರಸಜ್ಜಿತ ಪೊಲೀಸರ ಬಿಗಿ ಕಾವಲಿನ ನಡುವೆ ಕೇರಳಕ್ಕೆ ತೆರಳಬಹುದಾಗಿದೆ. ಆದರೆ ಅವರು ಅಲ್ಲಿ ಸಂಬಂಧಿಕರು, ವೈದ್ಯರು ಮತ್ತು ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಸಾರ್ವಜನಿಕರನ್ನು ಭೇಟಿ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಉತ್ತರ ಪ್ರದೇಶದ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೇರಳ ಪೊಲೀಸರಿಗೆ ಸೂಚಿಸಿದೆ.

ಮರಣಶಯ್ಯೆಯಲ್ಲಿರುವ ತಾಯಿಯನ್ನು ನೋಡಲು ಕಪ್ಪನ್‌ಗೆ ಸಿಗದ ಜಾಮೀನುಮರಣಶಯ್ಯೆಯಲ್ಲಿರುವ ತಾಯಿಯನ್ನು ನೋಡಲು ಕಪ್ಪನ್‌ಗೆ ಸಿಗದ ಜಾಮೀನು

ಸಿದ್ದಿಕಿ ಅವರು ಮಾಧ್ಯಮಗಳಿಗೆ ಯಾವುದೇ ಸಂದರ್ಶನ ನೀಡದಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಪೋಸ್ಟ್ ಹಾಕದಂತೆ ನಿರ್ಬಂಧ ವಿಧಿಸಲಾಗಿದೆ.

 Kerala Journalist Siddique Kappan Gets 5 Days Interim Bail To Meet Ailing Mother

ಅನಾರೋಗ್ಯಪೀಡಿತ ತಾಯಿಯನ್ನು ಖುದ್ದು ಭೇಟಿ ಮಾಡಲು ಅವಕಾಶ ನೀಡುವಂತೆ ಸಿದ್ದಿಕಿ ಅವರು ಮಧ್ಯಂತರ ಜಾಮೀನಿಗೆ ಮನವಿ ಮಾಡಿದ್ದರು. ಸಿದ್ದಿಕಿ ಅವರ ತಾಯಿಯ ಆರೋಗ್ಯ ತೀರಾ ಹದಗೆಟ್ಟಿದ್ದು, ಅವರು ಹೆಚ್ಚು ಸಮಯ ಬದುಕುಳಿಯುವುದು ಕಷ್ಟ ಎಂದು ವೈದ್ಯರು ಹೇಳಿರುವುದಾಗಿ ಸಿದ್ದಿಕಿ ಪರ ವಕೀಲ ಕಪಿಲ್ ಸಿಬಲ್ ಅವರು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದ್ದರು.

ಸಿದ್ದಿಕಿ ಪತ್ರಕರ್ತನಲ್ಲ, ಪಿಎಫ್‌ಐ ಸಕ್ರಿಯ ಸದಸ್ಯ: ಉತ್ತರ ಪ್ರದೇಶ ಸರ್ಕಾರಸಿದ್ದಿಕಿ ಪತ್ರಕರ್ತನಲ್ಲ, ಪಿಎಫ್‌ಐ ಸಕ್ರಿಯ ಸದಸ್ಯ: ಉತ್ತರ ಪ್ರದೇಶ ಸರ್ಕಾರ

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಮಾನವೀಯ ನೆಲೆಯಲ್ಲಿ ಅವರನ್ನು ತಮ್ಮ ತವರು ರಾಜ್ಯ ಕೇರಳಕ್ಕೆ ತೆರಳಲು ಅವಕಾಶ ನೀಡಿತು. ಐದನೇ ದಿನದ ಅಂತ್ಯದ ಒಳಗೆ ಉತ್ತರ ಪ್ರದೇಶದ ಕಾರಾಗೃಹಕ್ಕೆ ಅವರು ಮರಳಬೇಕಿದೆ.

English summary
The Supreme Court has granted 5 days interimg bail to Kerala journalist Siddique Kappan who was arrested while on his way to Uttar Pradesh's Hathras.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X