Breaking: ಕೇರಳದ ರಸ್ತೆಯಲ್ಲಿ ಮಹಿಳೆಯ ಮೇಲೆ ಮಚ್ಚಿನಿಂದ ಹಲ್ಲೆ: ವ್ಯಕ್ತಿ ಪರಾರಿ
ಕೊಚ್ಚಿ ಡಿಸೆಂಬರ್ 3: ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಭಯಾನಕ ಘಟನೆ ಕೇರಳದ ಕೊಚ್ಚಿಯ ರಸ್ತೆಯೊಂದರಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮಹಿಳೆ ಮೇಲೆ ಹಲ್ಲೆ ನಡೆಸಿ ವ್ಯಕ್ತಿ ಪರಾರಿಯಾಗಿದ್ದಾನೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಯುವಕ ಮತ್ತು ಇಬ್ಬರು ಮಹಿಳೆಯರ ನಡುವೆ ವಾಗ್ವಾದದ ನಂತರ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯ ತಲೆಗೆ ಮಚ್ಚಿನಿಂದ ಹೊಡೆಯಲು ಯತ್ನಿಸಿದನೆಂದು ಹೇಳಲಾಗಿದೆ. ಆದರೆ ಆಕೆಯ ಸ್ನೇಹಿತೆ ಹೊಡೆತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯಲ್ಲಿ ಆಕೆಯ ಕೈಗೆ ಗಾಯವಾಗಿದೆ.

ಮಹಿಳೆಯ ಸ್ನೇಹಿತೆ ಕಿರುಚಾಡಿದ್ದರಿಂದ ನಂತರ ವ್ಯಕ್ತಿ ತನ್ನ ಬೈಕ್‌ನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋಗಳು ವೈರಲ್ ಆಗಿದೆ. ವಿಡಿಯೊಗಳಲ್ಲಿ ರಕ್ತದ ಮಡುವಿನಲ್ಲಿ ಮಚ್ಚು ಬಿದ್ದಿರುವುದನ್ನು ತೋರಿಸಿದೆ.
ಪೊಲೀಸರು ಮಚ್ಚನ್ನು ವಶಪಡಿಸಿಕೊಂಡಿದ್ದು, ದಾಳಿಕೋರನನ್ನು ಹಿಡಿಯಲು ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯು ಕಾಲೂರಿನ ಆಜಾದ್ ರಸ್ತೆಯಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಾರ್ವಜನಿಕವಾಗಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications