Monsoon: ಭಾರೀ ಮಳೆಗೆ ರಾಜ್ಯದಲ್ಲಿ 11 ಮಂದಿ ಸಾವು: ಚಂಡಮಾರುತ ಪ್ರಭಾವದಿಂದ ಧಾರಾಕಾರ ಮಳೆ ಎಚ್ಚರಿಕೆ
ಬೆಂಗಳೂರು, ಮೇ 25: ಬದಲಾದ ಹವಾಮಾನ ವೈಪರಿತ್ಯಗಳ ಪ್ರಭಾದಿಂದ ದೇಶದ ದಕ್ಷಿಣ ಭಾಗದ ಒಂದೆರಡು ರಾಜ್ಯಗಳಲ್ಲಿ ಭಾರೀ ಮಳೆ ಆಗುತ್ತಿದೆ. ಇದರಿಂದಾಗಿ ಕೆಲವೇ ದಿನಗಳ ಅಂತರದಲ್ಲಿ ಭಾರೀ ಮಳೆ ಬರೋಬ್ಬರಿ 11 ಮಂದಿ ಸಾವಿಗೀಡಾದ ಬಗ್ಗೆ ವರದಿ ಆಗಿದೆ. ಇಂದು ಸಹ ಧಾರಾಕಾರ ಮಳೆ ಆಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೆರೆಯ ಕೇರಳ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಜೋರು ಮಳೆ ಆಗುತ್ತಿದೆ. ಮುಂಗಾರು ಪ್ರವೇಶಕ್ಕೂ ಮೊದಲೇ ಮಳೆ ಆರ್ಭಟಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಬಂಗಾಳಕೊಲ್ಲಿಯಲ್ಲಿ ರೇಮಲ್ ಚಂಡಮಾರುತ 'Remal Cyclone' ಸ್ಪಷ್ಟ ಸ್ವರೂಪಕ್ಕೆ ಬಂದಿದೆ. ಇದರ ಪ್ರಭಾವದಿಂದ ಓಡಿಶಾ, ಕೇರಳ, ತಮಿಳುನಾಡಿನಲ್ಲಿ ವ್ಯಾಪಕ ಮಳೆ ಆಗುತ್ತಿದೆ.

ಸಾವಿಗೆ ಕಾರಣಗಳೇನು?
ಸದ್ಯ ಕೇರಳದಲ್ಲಿ ಸುರಿಯುತ್ತಿರುವ ನಿರಂತರ ವಿಪರೀತ ಮಳೆಯಿಂದಾಗಿ ಕನಿಷ್ಠ 11 ಮಂದಿ ಸಾವಾಗಿದೆ. ರಾಜ್ಯ ಕಂದಾಯ ಸಚಿವ ಕೆ. ರಾಜನ್ ಅವರು ಹೇಳುವಂತೆ, ಮಳೆ ಸಂಬಂಧಿತ ಸಾವುಗಳು ವರದಿಯಾಗಿದೆ. ಇವುಗಳಲ್ಲಿ 06 ಜನ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇಬ್ಬರು ಕ್ವಾರಿ ಅಪಘಾತದಲ್ಲಿ ಮರಣ ಹೊಂದಿದರೆ, ಇಬ್ಬರಿಗೆ ಸಿಡಿಲು ಬಡಿದಿದೆ, ಮತ್ತೊಬ್ಬರು ಮನೆ ಕುಸಿತ ಪ್ರಕರಣದಲ್ಲಿ ಜೀವ ಬಿಟ್ಟಿದ್ದಾರೆ.
07 ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಶನಿವಾರ ಕೇರಳದ 07 ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಪ್ರಯುಕ್ತ 'ಯೆಲ್ಲೋ ಅಲರ್ಟ್' ಘೋಷಿಸಿದೆ. ರಾಜ್ಯದ 'ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಕಣ್ಣೂರು, ಕಾಸರಗೋಡು ಎರ್ನಾಕುಲಂ ಹಾಗೂ ಕೋಝಿಕ್ಕೋಡ್ ಜಿಲ್ಲೆಗಳಿಗೆ ಇಂದು (6ರಿಂದ 11 ಸೆಂ.ಮೀ.ವರೆಗೆ) ಭಾರೀ ಮಳೆ ಆಗಲಿದ್ದು, 'ಯೆಲ್ಲೋ ಅಲರ್ಟ್' ಕೊಡಲಾಗಿದೆ.
ನಾಳೆ ಭಾನುವಾರದಿಂದ ಕೇರಳದಲ್ಲಿ ಮಳೆ ಆರ್ಭಟ ತುಸು ಕಡಿಮೆ ಆಗಲಿದೆ. ಚಂಡಮಾರುತದ ಪ್ರಭಾವ ಕಂಡು ಬಂದರೂ ಸಹಿತ ಇಲ್ಲಿ ಮಳೆ ಇಳಿಕೆಯ ಲಕ್ಷಣಗಳು ಇವೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಕೇರಳದಲ್ಲಿ ಸರ್ಕಾರದಿಂದ ಮುನ್ನೆಚ್ಚರಿಕಾ ಕ್ರಮ
ಆದರೂ ಸಹಿತ ಮೀನುಗಾರರು ಮೀನುಗಾರಿಕೆಗೆ ತೆರಳುವುದು, ಜನರು ಸಮುದ್ರದತ್ತ ಹೋಗುವುದ, ಕರಾವಳಿ ತೀರ ಪ್ರದೇಶದಲ್ಲಿ ತಾವು ಇರದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ರಜಾದಿನಗಳು ಇರುವ ಕಾರಣ ಮಕ್ಕಳು ಬೀಚ್ ಪ್ರವಾಸ್, ಫಾಲ್ಸ್ ಗಳ ಬಳಿ ತೆರಳವುದನ್ನು ಮುಂದೂಡಬೇಕು ಎಂದು ಸಲಹೆ ನೀಡಲಾಗಿದೆ. ಕೆಲವೆಡೆ ಕರಾವಳಿ, ಹಾಗೂ ಜಲಮೂಲ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ.
ಕೇರಳದಲ್ಲಿ ಸ್ಥಳೀಯ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆ, ಪೊಲೀಸ್ ಮತ್ತು ಕಂದಾಯ ಇಲಾಖೆ ಒಳಗೊಂಡಂತೆ ಜಿಲ್ಲಾಡಳಿತವು ಎಂತಹ ತುರ್ತು ಪರಿಸ್ಥಿತಿಯನ್ನಾದರೂ ನಿರ್ವಹಿಸಲು ಸಜ್ಜಾಗಿದೆ. ಅಧಿಕಾರಿಗಳಿಗೆ ಸಮನ್ವಯ ಸಾಧಿಸಬೇಕು. ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಜನರಿಗೆ ಸ್ಪಂದಿಸುವಂತೆ ಸರ್ಕಾರ ಸೂಚನೆ ನೀಡಿದೆ. ಇನ್ನೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಎರಡು ತಂಡಗಳನ್ನು ರಾಜ್ಯದಲ್ಲಿ ಬೀಡು ಬಿಟ್ಟಿವೆ.
ನೆನ್ನೆ ಶುಕ್ರವಾರ ಮೇ 24 ಹೊತ್ತಿಗೆ ಕೇರಳ ರಾಜ್ಯಾದ್ಯಂತ ಎಂಟು ಪರಿಹಾರ ಶಿಬಿರಗಳಲ್ಲಿ 223 ನಿರಾಶ್ರಿತರಿಗೆ ಮಳೆಯಿಂದ ತೊಂದರೆಗೀಡಾದವರಿಗೆ ಸ್ಥಳವಕಾಶಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕಂದಾಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇ 31ರಂದು ಮುಂಗಾರು ಪ್ರವೇಶ?
ಬಂಗಾಳಕೊಲ್ಲಿ ಭಾಗದ ಸಮುದ್ರದಲ್ಲಿರುವ 'ರೆಮಲ್ ಚಂಡಮಾರುತ'ದ ತೀವ್ರತೆ ಹೆಚ್ಚಾದರೆ ಮುಂದಿನ ಒಂದು ವಾರಗಳ ಕಾಲ ಕರಾವಳಿ ರಾಜ್ಯಗಳಿಗೆ ಗುಡುಗು ಮಿಂಚು ಸಹಿತ ಮಳೆ ಅಬ್ಬರಿಸಲಿದೆ. ಮೇ 31ರಂದು ಕೇರಳ ಪ್ರವೇಶಿಸಲಿದೆ. ನಂತರದ ದಿನಗಳಲ್ಲಿ ಮುಂಗಾರು ಮಳೆ ಕರ್ನಾಟಕ ಪ್ರವೇಶಿಸಬಹುದು ಎಂದು ಐಎಂಡಿ ಮುನ್ಸೂಚನಾ ವರದಿ ತಿಳಿಸಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications