Kerala Boat Tragedy: ಕೇರಳ ಪ್ರವಾಸಿ ದೋಣಿ ದುರಂತ: 22 ಜನ ಸಾವು, ಹಲವರು ನಾಪತ್ತೆ!
ಮಲಪ್ಪುರಂ ಮೇ 8: ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದ ಬಳಿ ಭಾನುವಾರ ಸಂಜೆ ಡಬಲ್ ಡೆಕ್ಕರ್ ದೋಣಿ ಮುಳುಗಿ ಏಳು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ತಾನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೋಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೋಣಿಯಲ್ಲಿದ್ದ ಪ್ರಯಾಣಿಕರ ನಿಖರ ಸಂಖ್ಯೆ ಇನ್ನೂ ತಿಳಿದಿಲ್ಲವಾದರೂ, 40 ಮಂದಿ ಟಿಕೆಟ್‌ಗಳನ್ನು ಹೊಂದಿದ್ದರು. ಅನೇಕರು ಸಂಬಂಧಿಕರನ್ನು ಹೊಂದಿರಲಿಲ್ಲ. ಏಕಾಂಗಿಯಾಗಿ ಪ್ರಯಣ ಮಾಡುತ್ತಿದ್ದರು. ದೋಣಿಗೆ ಸುರಕ್ಷತಾ ಪ್ರಮಾಣ ಪತ್ರವೂ ಇರಲಿಲ್ಲ ಎಂದು ವರದಿಯಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ನಾಪತ್ತೆಯಾದವರನ್ನು ಪತ್ತೆ ಹಚ್ಚಲು ನೀರೊಳಗಿನ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.
ಈ ಘಟನೆಗೆ ರಾಜಕೀಯ ವಲಯದಾದ್ಯಂತ ನಾಯಕರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
Pained by the loss of lives due to the boat mishap in Malappuram, Kerala. Condolences to the bereaved families. An ex-gratia of Rs. 2 lakh from PMNRF would be provided to the next of kin of each deceased: PM @narendramodi
— PMO India (@PMOIndia) May 7, 2023
"ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದಾದ ಪ್ರಾಣಹಾನಿಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. PMNRF (ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿ) ನಿಂದ 2 ಲಕ್ಷ ಪರಿಹಾರವನ್ನು ನಿಧನರಾದವರ ಪ್ರತಿಯೊಬ್ಬರ ಸಂಬಂಧಿಕರಿಗೆ ನೀಡಲಾಗುವುದು"ಎಂದು ಪ್ರಧಾನ ಮಂತ್ರಿ ಕಚೇರಿ ಭಾನುವಾರ ಸಂಜೆ ಟ್ವೀಟ್ ಮಾಡಿದೆ.
ಕಾಂಗ್ರೆಸ್ ನಾಯಕ ಮತ್ತು ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ ಕೂಡ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
"ಕೇರಳದ ಮಲಪ್ಪುರಂನಲ್ಲಿ ಹೌಸ್ ಬೋಟ್ ಮುಳುಗಿದ ಸುದ್ದಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಗೆ ಸಹಾಯ ಮಾಡುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ'' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Distraught by the news of a houseboat capsizing in Malappuram, Kerala.
— Rahul Gandhi (@RahulGandhi) May 7, 2023
My heartfelt condolences to all those who have lost their loved ones, and wishes for the speedy recovery of those injured.
I appeal to Congress workers to assist the authorities in rescue operations.
ಇಂದು ಸ್ಥಳಕ್ಕೆ ಭೇಟಿ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಪೊಲೀಸ್, ಅಗ್ನಿಶಾಮಕ ಮತ್ತು ಆರೋಗ್ಯಾಧಿಕಾರಿಗಳು ಸ್ಥಳೀಯರೊಂದಿಗೆ ತಾನೂರಿನಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಸಂತ್ರಸ್ತರಿಗೆ ಗೌರವ ಸೂಚಕವಾಗಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವುದರೊಂದಿಗೆ ಸೋಮವಾರವನ್ನು ಶೋಕಾಚರಣೆಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು. ಪೊಲೀಸರ ಪ್ರಕಾರ, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications