ಕೇಂದ್ರ ಬಜೆಟ್ 2021; ಮೂರು ಪ್ರಮುಖ ಸವಾಲುಗಳು

ನವದೆಹಲಿ, ಫೆಬ್ರವರಿ 01; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2021ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದು, ಕಾಗದ ರಹಿತವಾಗಿ ಬಜೆಟ್ ಮಂಡನೆಯಾಗುತ್ತಿದೆ.

ಕೋವಿಡ್ ಪರಿಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಲಾಗುತ್ತಿರುವ ನಿರ್ಮಲಾ ಸೀತಾರಾಮನ್ ಕೆಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಬಜೆಟ್‌ನಲ್ಲಿ ಮೂರು ಪ್ರಮುಖ ವಿಚಾರಗಳಿಗೆ ಹಣಕಾಸು ಸಚಿವರು ಆದ್ಯತೆಯನ್ನು ನೀಡಬೇಕು.

Key Challenges That Nirmala Sitharaman Needs To Address

ಪ್ರಮುಖವಾಗಿ ಉದ್ಯೋಗ ವಲಯಕ್ಕೆ ಆದ್ಯತೆ ನೀಡುವುದು ಹಣಕಾಸು ಸಚಿವರ ಮುಂದಿರುವ ಸವಾಲು ಆಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಉದ್ಯೋಗ ವಲಯ ಸ್ವಲ್ಪ ಚೇತರಿಸಿಕೊಳ್ಳುತ್ತಿದೆ. ಈ ವಲಯಕ್ಕೆ ಹೆಚ್ಚಿನ ಆದ್ಯತೆ ಬೇಕಾಗಿದೆ.

ಬೇಡಿಕೆ; ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ಜೊತೆಗೆ ಬೇಡಿಕೆಯನ್ನು ಹೆಚ್ಚಿಸಲು ಬಜೆಟ್‌ನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕ ಸೇವೆಗಳು; ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಸರ್ಕಾರ ಸಾರ್ವಜನಿಕ ವಲಯದ ಯೋಜನೆಗಳಿಗೆ ಆದ್ಯತೆ ನೀಡಬೇಕು. ಇವುಗಳಿಂದಲೇ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ ಎಂಬುದು ತಜ್ಞರ ಅಭಿಮತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+