ಚೀನಾ-ಭಾರತ ಘರ್ಷಣೆ: ಈವರೆಗೂ ಬೆಳವಣಿಗೆಯ ಪ್ರಮುಖ ಅಂಶಗಳು
ಲಡಾಖ್, ಜೂನ್ 16: ಲಡಾಖ್‌ನ ಗಾಲ್ವಾನ್ ವ್ಯಾಲಿ ಪ್ರದೇಶದ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದೆ. ಈ ಗಲಾಟೆಯಲ್ಲಿ ಭಾರತದ ಇಬ್ಬರು ಸೈನಿಕರು ಹಾಗೂ ಓರ್ವ ಅಧಿಕಾರಿ ಮೃತಪಟ್ಟಿರುವುದು ಖಚಿತವಾಗಿದೆ.
Recommended Video
ಈ ಘಟನೆ ವರದಿ ಆದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉನ್ನತ ಮಟ್ಟದ ಸಭೆಗಳು, ಮೇಜರ್ ಮಟ್ಟದ ಸಭೆಗಳು ನಡೆದಿದೆ. ಈ ಘಟನೆಗೆ ಕಾರಣವೇನು ಎಂದು ಚೀನಾ ತನ್ನ ಹೇಳಿಕೆ ನೀಡಿದೆ.
ಮತ್ತೊಂದೆಡೆ ಭಾರತವೂ ಅದಕ್ಕೆ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹಾಗಿದ್ರೆ, ಚೀನಾ ಮತ್ತು ಭಾರತ ನಡುವಿನ ಘರ್ಷಣೆ ಬಳಿಕ ನಡೆದ ಪ್ರಮುಖ ಅಂಶಗಳ ಸುತ್ತ ವಿಶೇಷ ವರದಿ ಇಲ್ಲಿದೆ. ಮುಂದೆ ಓದಿ....

ಮೊದಲು ದಾಳಿ ಮಾಡಿದ್ದು ಭಾರತ: ಚೀನಾ
ಸೋಮವಾರ ರಾತ್ರಿ ಲಡಾಖ್‌ನ ಗಾಲ್ವಾನ್ ವ್ಯಾಲಿ ಪ್ರದೇಶದಲ್ಲಿ ಎರಡು ಬಾರಿ ಭಾರತ ಸೇನೆ ಗಡಿ ದಾಟಿದೆ. ನಮ್ಮ ಸೇನೆಗಳನ್ನು ಪ್ರಚೋದಿಸಿದೆ. ಜೊತೆಗೆ ದಾಳಿ ಸಹ ಮಾಡಿದೆ. ಇದರ ಪರಿಣಾಮವಾಗಿ ಉಭಯ ಸೇನೆಗಳ ನಡುವೆ ಘರ್ಷಣೆ ನಡೆದಿದ್ದು, ಇದರಲ್ಲಿ ಎರಡೂ ದೇಶಗಳ ಯೋಧರಿಗೆ ಹಾನಿಯಾಗಿದೆ ಎಂದು ಚೀನಾ ಆರೋಪಿಸಿದೆ.

ಚೀನಾ ಸೈನ್ಯದಲ್ಲೂ ಸಾವು ಸಂಭವಿಸಿದೆ
ಈ ಘಟನೆಯಲ್ಲಿ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ಖಚಿತಪಡಿಸಿದೆ. ಓರ್ವ ಅಧಿಕಾರಿ ಮತ್ತು ಇಬ್ಬರು ಯೋಧರು. ಕೇವಲ ಭಾರತದ ಕಡೆ ಮಾತ್ರವಲ್ಲ ಚೀನಾ ಸೈನ್ಯದಲ್ಲೂ ಯೋಧರ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಮೂಲಗಳು ಹೇಳಿದೆ. ಎರಡೂ ಸೈನ್ಯದಲ್ಲಿ ಸಾವು-ನೋವು ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಮಿಲಿಟರಿ ಮಟ್ಟದ ಮಾತುಕತೆ
ಸದ್ಯ ಉಂಟಾಗಿರುವ ಸಂದಿಗ್ಧ ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ಯಥಾಸ್ಥಿತಿ ಕಾಪಾಡಿಕೊಳ್ಳಲು ಉಭಯ ದೇಶಗಳ ಮಿಲಿಟರಿ ಅಧಿಕಾರಿಗಳು ಉನ್ನತ ಮಟ್ಟದ ಸಭೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಎರಡೂ ದೇಶಗಳು ಸೇನೆ ಮುಖ್ಯಸ್ಥರ ಮೂಲಕ ಪರಿಸ್ಥಿತಿ ನಿಭಾಯಿಸುವ ಕುರಿತು ಚರ್ಚಿಸಲಾಗ್ತಿದೆ.

ಗುಂಡಿನ ದಾಳಿ ಆಗಿಲ್ಲ
ಈ ಘಟನೆಯಲ್ಲಿ ಪರಸ್ಪರ ರಾಷ್ಟ್ರಗಳ ನಡುವೆ ಗುಂಡಿನ ದಾಳಿ ಆಗಿಲ್ಲ ಎಂದು ಭಾರತೀಯ ಸೇನೆಯ ಮೂಲಗಳು ಖಚಿತಪಡಿಸಿದೆ. ಕಲ್ಲುಗಳ ಮೂಲಕ ಸೈನಿಕರು ಕಾದಾಡಿದ್ದಾರೆ ಮತ್ತು ಲೋಹದ ಮೂಲಕ ಘರ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜನಾಥ್ ಸಿಂಗ್ ಸಭೆ
ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಚೀನಾ ವಿಚಾರದಲ್ಲಿ ಭಾರತ ಹೇಗೆ ಕ್ರಮ ತೆಗೆದುಕೊಳ್ಳಬೇಕು ಮತ್ತು ಮುಂದಿನ ಹೆಜ್ಜೆ ಯಾವ ರೀತಿ ಇಡಬೇಕು ಎಂಬುದನ್ನು ಚರ್ಚಿಸಿದ್ದಾರೆ.

ಪಠಾಣ್‌ಕೋಟ್ ಭೇಟಿ ರದ್ದು
ಈ ಮಧ್ಯೆ ಪಠಾಣ್‌ಕೋಟ್ ಮಿಲಿಟರಿ ಕೇಂದ್ರಕ್ಕೆ ಸೈನ್ಯದ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರು ಭೇಟಿ ನೀಡಬೇಕಿತ್ತು. ಆದರೆ, ಚೀನಾ ಮತ್ತು ಭಾರತ ನಡುವಿನ ಘರ್ಷಣೆ ಪರಿಣಾಮ ಈ ಯೋಜನೆಯನ್ನು ರದ್ದುಪಡಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications