Union Budget 2025: ಆರ್ಥಿಕ ಸಮೀಕ್ಷೆ ಬೆಳಕು ಚೆಲ್ಲಿದ ಪ್ರಮುಖ ವಿಷಯಗಳೇನು?
ಫೆಬ್ರವರಿ 1ರಂದು (ನಾಳೆ) ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್‌ನಲ್ಲಿ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯು ಭಾರತೀಯ ಆರ್ಥಿಕತೆಯ ಕಾರ್ಯಕ್ಷಮತೆ ಮತ್ತು ಸರ್ಕಾರದ ನೀತಿಗಳು ಮತ್ತು ಮುಂಬರುವ ಹಣಕಾಸು ವರ್ಷದ ಮುನ್ನೋಟದ ಸಂಗ್ರಹವಾಗಿದೆ. ಇದನ್ನು ಮುಖ್ಯ ಆರ್ಥಿಕ ಸಲಹೆಗಾರ ವಿ.ಅನಂತ ನಾಗೇಶ್ವರನ್ ಅವರ ನೇತೃತ್ವದ ಆರ್ಥಿಕ ವ್ಯವಹಾರಗಳ ಇಲಾಖೆ ಸಿದ್ಧಪಡಿಸಿದೆ.
ಆರ್ಥಿಕ ಸಮೀಕ್ಷೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಭಾಗ ಒಂದು ಆರ್ಥಿಕ ಸೂಚಕಗಳು ಮತ್ತು ಹಣಕಾಸಿನ ಪ್ರವೃತ್ತಿಗಳ ಆಧಾರದ ಮೇಲೆ ಆರ್ಥಿಕ ಕಾರ್ಯಕ್ಷಮತೆಯನ್ನು ವಿಶ್ಲೇಷಿಸುತ್ತದೆ. ಭಾಗ ಎರಡು ಶಿಕ್ಷಣ, ಬಡತನ, ಹವಾಮಾನ ಬದಲಾವಣೆ ಮತ್ತು ಜಿಡಿಪಿ ಬೆಳವಣಿಗೆಯ ದೃಷ್ಟಿಕೋನ, ಹಣದುಬ್ಬರ ಮತ್ತು ವ್ಯಾಪಾರದಂತಹ ಸಾಮಾಜಿಕ-ಆರ್ಥಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದೆ. ಈ ಆರ್ಥಿಕ ಸಮೀಕ್ಷೆ 2025ರಲ್ಲಿರುವ ಪ್ರಮುಖ ಅಂಶಗಳೆಂದರೆ..

* ಭಾರತದ ಆರ್ಥಿಕತೆ ಸ್ಥಿರ: 2024-25ರ ಹಣಕಾಸು ವರ್ಷದಲ್ಲಿ ಜಾಗತಿಕ ಅನಿಶ್ಚಿತತೆಯ ಹೊರತಾಗಿಯೂ ಶೇ 6.4ರ ಭಾರತದ ನೈಜ ಜಿಡಿಪಿ ಬೆಳವಣಿಗೆಯು ದಶಕದ ಸರಾಸರಿಗೆ ಹತ್ತಿರದಲ್ಲಿದೆ ಎಂದು ಸಮೀಕ್ಷೆ ಹೇಳಿದೆ. ಇದರ ಪರಿಣಾಮವಾಗಿ ಒಟ್ಟಾರೆ ಪೂರೈಕೆಯ ದೃಷ್ಟಿಕೋನದಿಂದ ನೈಜ ಒಟ್ಟು ಮೌಲ್ಯವರ್ಧನೆಯು (ಜಿವಿಎ) ಶೇ 6.4ರಷ್ಟು ಬೆಳೆಯುತ್ತದೆ ಎಂದು ಅಂದಾಜಿಸಲಾಗಿದೆ.
* ಬೆಳವಣಿಗೆಗೆ ಎಲ್ಲ ಕ್ಷೇತ್ರಗಳಿಂದ ಕೊಡುಗೆ: ಆರ್ಥಿಕ ಸಮೀಕ್ಷೆಯು ಎಲ್ಲ ಕ್ಷೇತ್ರಗಳು ಉತ್ತಮ ಪ್ರದರ್ಶನ ನೀಡುತ್ತಿವೆ ಎಂದು ಹೇಳಿದೆ. ಕೃಷಿ ವಲಯವು ಸ್ಥಿರವಾಗಿ ಪ್ರವೃತ್ತಿ ಮಟ್ಟಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕೈಗಾರಿಕಾ ವಲಯವು ಕೂಡ ಪೂರ್ವ-ಸಾಂಕ್ರಾಮಿಕ ಪಥದ ಮೇಲೆ ತನ್ನ ನೆಲೆ ಕಂಡುಕೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಇದು ದೃಢವಾದ ಬೆಳವಣಿಗೆಯ ದರವು ಸೇವಾ ವಲಯವನ್ನು ಅದರ ಹತ್ತಿರಕ್ಕೆ ತೆಗೆದುಕೊಂಡು ಹೋಗಿದೆ.

* ಹಣದುಬ್ಬರ ನಿಯಂತ್ರಣಕ್ಕೆ ಬರುತ್ತಿದೆ: 2023-24ರ ಹಣಕಾಸು ವರ್ಷದಲ್ಲಿ ಚಿಲ್ಲರೆ ಮುಖ್ಯ ಹಣದುಬ್ಬರವು ಶೇ 5.4ರಿಂದ 2024-25 ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಶೇ 4.9ಕ್ಕೆ ಇಳಿದಿದೆ ಎಂದು ಈ ಸಮೀಕ್ಷೆ ಹೇಳಿದೆ. ಅಲ್ಲದೆ ಸವಾಲುಗಳ ಹೊರತಾಗಿಯೂ ಭಾರತದಲ್ಲಿ ಹಣದುಬ್ಬರ ನಿರ್ವಹಣೆಗೆ ಪೂರಕ ವಾತಾವರಣ ಇದೆ. ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (ಐಎಂಎಫ್) ಯೋಜನೆಯು ಭಾರತದ ಗ್ರಾಹಕ ಬೆಲೆ ಹಣದುಬ್ಬರವು ಮುಂದಿನ ಆರ್ಥಿಕ ವರ್ಷಕ್ಕೆ ಸುಮಾರು ಶೇ 4ರಷ್ಟು ಗುರಿಯೊಂದಿಗೆ ಕ್ರಮೇಣವಾಗಿ ಹೊಂದಾಣಿಕೆಯಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
* ಎಫ್‌ಪಿಐ, ಎಫ್‌ಡಿಐ ಸುಧಾರಣೆ: 2024-25ರಲ್ಲಿ ಇಲ್ಲಿಯವರೆಗೆ ವಿದೇಶಿ ಬಂಡವಾಳ ಹೂಡಿಕೆಗಳು (ಎಫ್‌ಪಿಐ) ಮಿಶ್ರ ಪ್ರವೃತ್ತಿಯನ್ನು ಪ್ರದರ್ಶಿಸಿವೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಅನಿಶ್ಚಿತತೆ ಮತ್ತು ವಿದೇಶಿ ಬಂಡವಾಳ ಹೂಡಿಕೆದಾರರಿಂದ ಲಾಭ ಗಳಿಸುವುದು ಬಂಡವಾಳದ ಹೊರಹರಿವಿಗೆ ಕಾರಣವಾಗಿದೆ. ಆದರೂ ಅನುಕೂಲಕರ ವ್ಯಾಪಾರ ವಾತಾವರಣ ಮತ್ತು ಹೆಚ್ಚಿನ ಆರ್ಥಿಕ ಬೆಳವಣಿಗೆಯು ಒಟ್ಟಾರೆಯಾಗಿ ಪಿಎಫ್‌ಐ ಹರಿವನ್ನು ಸಕಾರಾತ್ಮಕವಾಗಿರಿಸಿದೆ. ಒಟ್ಟು ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಒಳಹರಿವು 2024-25ರ ಮೊದಲ ಎಂಟು ತಿಂಗಳಲ್ಲಿ ಸುಧಾರಿಸಿವೆ.

* ವಿದೇಶಿ ವಿನಿಮಯ ಮೀಸಲುಗಳ ಬಲ: ಆರ್ಥಿಕ ಸಮೀಕ್ಷೆಯು ಭಾರತದ ವಿದೇಶೀ ವಿನಿಮಯ ಸಂಗ್ರಹವು ಸೆಪ್ಟೆಂಬರ್ 2024ರಲ್ಲಿ 706 ಶತಕೋಟಿ ಡಾಲರ್‌ನಷ್ಟಿತ್ತು. ಡಿಸೆಂಬರ್ 27, 2024ರ ವೇಳೆಗೆ 640.3 ಶತಕೋಟಿ ಡಾಲರ್‌ಗಳಷ್ಟಿತ್ತು. ಇದು ಒಟ್ಟಾರೆ ಶೇ 89.9ರಷ್ಟು ಬಾಹ್ಯ ಸಾಲವನ್ನು ಒಳಗೊಂಡಿದೆ ಎಂದು ಸಮೀಕ್ಷೆ ಉಲ್ಲೇಖಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications