ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಾಡು ಬಳಕೆ; ರಾಹುಲ್ ವಿರುದ್ಧ ಎಫ್‌ಐಆರ್

|
Google Oneindia Kannada News

ನವದೆಹಲಿ, ನ.06: ದೇಶದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ನಟ ಯಶ್ ಅಭಿನಯದ ಕನ್ನಡ ಚಲನಚಿತ್ರ ಕೆಜಿಎಫ್ 2 ರ ಸಂಗೀತವನ್ನು ಅನಧಿಕೃತವಾಗಿ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಲ್ಲಿ ರಾಹುಲ್ ಗಾಂಧಿ ಅವರನ್ನು ಕೆಜಿಎಫ್ 2 ಚಿತ್ರದ ಸಂಗೀತವನ್ನು ಬಳಸಿ ತೋರಿಸಲಾಗಿತ್ತು. ಇದಕ್ಕಾಗಿ ರಾಹುಲ್, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು? ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು?

ಕಳೆದ ಶುಕ್ರವಾರ, ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಎಂ. ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ನಾಯಕರ ಮೇಲೆ ದೂರು ದಾಖಲಾಗಿದೆ.

KGF 2 music in Bharat Jodo Yatra: FIR Against Rahul Gandhi

ದೇಶದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಕೆಜಿಎಫ್‌ನ ಹಿಂದಿ, ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಾಡುಗಳನ್ನು ಬಳಸಿಕೊಳ್ಳಲಾಗಿದೆ. ಜೈರಾಮ್ ರಮೇಶ್ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಯಾತ್ರೆಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ, ಇದರಲ್ಲಿ ಕೆಜಿಎಫ್ 2 ಚಿತ್ರದ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

KGF 2 music in Bharat Jodo Yatra: FIR Against Rahul Gandhi

"ಯಾತ್ರೆಯ ವಿಡಿಯೋಗಳನ್ನು ನೋಡಿದಾಗ ಲಾಭಗಳನ್ನು ಗಳಿಸುವ ಉದ್ದೇಶದಿಂದ ಅನಧಿಕೃತವಾಗಿ ಮತ್ತು ಕಾನೂನುಬಾಹಿರವಾಗಿ ದೂರುದಾರರ ಮಾಲೀಕತ್ವದ ಧ್ವನಿಮುದ್ರಿಕೆಯನ್ನು ಬಳಸಿದ್ದಾರೆ ಎಂಬುದು ಸ್ಪಷ್ಟವಾಗಿದೆ" ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿದೆ. ಮುಂದಿನ ವರ್ಷ ಜನವರಿ 30 ರಂದು ಜಮ್ಮುವನ್ನು ತಲುಪುವ ನಿರೀಕ್ಷೆಯಿದೆ. ಈ ಯಾತ್ರೆಯು ಇದುವರೆಗೆ ಐದು ದಕ್ಷಿಣ ರಾಜ್ಯಗಳಾದ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣವನ್ನು ತಲುಪಿದೆ.

English summary
KGF 2 music in Bharat Jodo Yatra: First Information Report (FIR) registered against three senior Congress leaders including Rahul Gandhi. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X