ಅಪಹರಣ ಪ್ರಕರಣ: ಯುಪಿ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್, 2 ಇತರರಿಗೆ ಜೀವಾವಧಿ ಶಿಕ್ಷೆ
ಪ್ರಯಾಗ್‌ರಾಜ್ ಮಾರ್ಚ್ 28: 2006ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಯಾಗ್‌ರಾಜ್‌ನ ನ್ಯಾಯಾಲಯ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರನ್ನು ಅಪರಾಧಿಗಳೆಂದು ಘೋಷಣೆ ಮಾಡಿದೆ.
ಜೊತೆಗೆ ಈ ಪ್ರಕರಣದಲ್ಲಿ ಅತೀಕ್ ಅಹ್ಮದ್ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸೇರಿದಂತೆ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಕೊಲೆ ಮತ್ತು ಅಪಹರಣ ಸೇರಿದಂತೆ ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಮತ್ತು ಶಾಸಕ ಅಹ್ಮದ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಗುಜರಾತ್ ಜೈಲಿನಿಂದ ಇಂದು ಪ್ರಯಾಗ್‌ರಾಜ್‌ಗೆ ಕರೆತಂದರು. ವಿಚಾರಣೆ ಬಳಿಕ ಅತೀಕ್ ಅಹ್ಮದ್ ಮತ್ತು ಇತರ ಇಬ್ಬರು ಪ್ರಕರಣದಲ್ಲಿ ಅಪರಾಧಿಗಳೆಮದು ಅದೇಶಿಸಲಾಗಿದ್ದು ಅವರಿಗೆ ಜೀವಾವಧಿಯ ಶಿಕ್ಷೆ ವಿಧಿಸಲಾಗಿದೆ.

ಏನಿದು ಘಟನೆ?
ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ 2005ರ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆ ನಡೆದು ಒಂದು ತಿಂಗಳ ನಂತರ ಅಹ್ಮದ್ ಅವರಿಗೆ ಶಿಕ್ಷೆಯಾಗಿದೆ. ಕಳೆದ ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಉಮೇಶ್ ಪಾಲ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆಗಿದ್ದ ಇಬ್ಬರು ಪೊಲೀಸ್ ಅಂಗರಕ್ಷಕರೂ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ.

ಘಟನೆ ಸಿಸಿಟಿವಿಯಲ್ಲಿ ಸೆರೆ
ಉಮೇಶ್ ಪಾಲ್ ಮತ್ತು ಅವರ ರಕ್ಷಣೆಗಾಗಿ ನಿಯೋಜನೆ ಮಾಡಲಾಗಿದ್ದ ಇಬ್ಬರು ಪೊಲೀಸರ ಮೇಲೆ ಇದ್ದಕ್ಕಿದ್ದಂತೆ ಸಾರ್ವಜನಿಕ ಸ್ಥಳದಲ್ಲಿ ಅನೇಕ ಶೂಟರ್‌ಗಳು ಹಿಂದಿನಿಂದ ಬಂದು ಗುಂಡು ಹಾರಿಸಿದ್ದರು. ದಾಳಿಯ ಸಮಯದಲ್ಲಿ ಮತ್ತೊಬ್ಬ ವ್ಯಕ್ತಿ ಕಚ್ಚಾ ಬಾಂಬ್‌ಗಳನ್ನು ಬಳಸುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜನರು ಸುರಕ್ಷತೆಗಾಗಿ ಓಡುವ ಮೂಲಕ ರಸ್ತೆಯಲ್ಲಿ ಭಯ ಮತ್ತು ಅವ್ಯವಸ್ಥೆ ನಿರ್ಮಾಣವಾಗಿತ್ತು. ಹಲವರು ತಮ್ಮ ವಾಹನಗಳನ್ನು ಬಿಟ್ಟು ಅಂಗಡಿಗಳತ್ತ ಓಡಿದ್ದರು. ಈ ಘಟನೆ ಪ್ರಯಾಗರಾಜ್‌ನಲ್ಲಿ ಭಯದ ವಾತಾವರಣವನ್ನೇ ಸೃಷ್ಟಿ ಮಾಡಿತ್ತು. ಜೊತೆಗೆ ಅಭದ್ರತೆಯ ಪ್ರಶ್ನೆಯನ್ನು ಹುಟ್ಟು ಹಾಕಿತ್ತು.

2006ರ ಅಪಹರಣ ಪ್ರಕರಣ
2005ರ ಕೊಲೆಯಲ್ಲಿ ಉಮೇಶ್ ಪಾಲ್‌ನನ್ನು ಪ್ರಮುಖ ಸಾಕ್ಷಿ ಎಂದು ಹೆಸರಿಸಿದ್ದರಿಂದ ಅತೀಕ್ ಅಹ್ಮದ್ ಆತನನ್ನು ಹತ್ಯೆ ಮಾಡಿದ್ದಾನೆ ಎಂದು ಯುಪಿ ಪೊಲೀಸರು ಹೇಳಿದ್ದಾರೆ. 2006 ರಲ್ಲಿ ಉಮೇಶ್ ಪಾಲ್ ಅವರು ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿದಾಗ ಬಂದೂಕು ತೋರಿಸಿ ಅವರನ್ನು ಅಪಹರಿಸಲಾಗಿತ್ತು ಎಂದು ಉಮೇಶ್ ಪಾಲ್ ಆರೋಪಿಸಿದ್ದರು. ಸದ್ಯ 2006ರ ಅಪಹರಣ ಪ್ರಕರಣದಲ್ಲಿ ಇಂದು ಪ್ರಯಾಗರಾಜ್ ನ್ಯಾಯಾಲಯದ ತೀರ್ಪು ಬಂದಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉಮೇಶ್ ಪಾಲ್ ಅವರ ಸಾರ್ವಜನಿಕ ಹತ್ಯೆಯ ಬಗ್ಗೆ ಧ್ವನಿ ಎತ್ತಿದರು. ಪ್ರಯಾಗ್‌ರಾಜ್‌ನಲ್ಲಿ ಫೆಬ್ರವರಿ ಶೂಟೌಟ್ ಘಟನೆಗೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧ ಸಿಎಂ ಯೋಗಿ ವಾಗ್ದಾಳಿ ಮಾಡಿದರು. ಗೂಂಡಾಗಿರಿಗೆ ವಿಪಕ್ಷಗಳು ಸಹಕಾರ ನೀಡುತ್ತಿವೆ ಎಂದು ಆರೋಪ ಮಾಡಿದರು.

ಮಾಫಿಯಾಗಳಿಗೆ ವಿಪಕ್ಷಗಳ ಸಹಕಾರ-ಯುಪಿ ಸಿಎಂ
ಸಂತ್ರಸ್ತೆಯ ಕುಟುಂಬದವರು ಆರೋಪಿಸಿರುವ ಅತೀಕ್ ಅಹ್ಮದ್ ಅವರು ಸಮಾಜವಾದಿ ಪಕ್ಷ ಪೋಷಿಸಿದ ಮಾಫಿಯಾದ ಭಾಗವಾಗಿದ್ದಾರೆ. ನಾವು ಮಾಫಿಯಾದ ಬೆನ್ನು ಮುರಿಯಲು ಮಾತ್ರ ಕೆಲಸ ಮಾಡಿದ್ದೇವೆ ಎಂಬುದು ನಿಜ ಎಂದು ಯೋಗಿ ಆದಿತ್ಯನಾಥ್, ಯಾದವ್ ಕಡೆಗೆ ಬೆರಳು ತೋರಿಸುತ್ತಾ ಹೇಳಿದ್ದರು.
"ಸ್ಪೀಕರ್ ಸರ್, ಅವರು ಎಲ್ಲಾ ವೃತ್ತಿಪರ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ಗಾಡ್‌ಫಾದರ್. ಅವರ ರಕ್ತನಾಳಗಳಲ್ಲಿ ಅಪರಾಧವಿದೆ ... ಮತ್ತು ನಾನು ಇಂದು ಇಲ್ಲಿ ಹೇಳುತ್ತಿದ್ದೇನೆ, ನಾವು ಈ ಮಾಫಿಯಾವನ್ನು ನೆಲಕ್ಕೆ ಕೆಡವುವರೆಗೂ ಬಿಡುವುದಿಲ್ಲ" ಎಂದು ಮುಖ್ಯಮಂತ್ರಿ ಯೋಗಿ ಅವರು ಯಾದವ್ ನತ್ತ ಕೈ ತೋರಿಸುತ್ತಾ ಎಚ್ಚರಿಕೆ ನೀಡಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications